Free Sewing machine Scheme: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆರಂಭ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಉಚಿತವಾಗಿ ಹೊಲಿಗೆ ಯಂತ್ರ ಪಡೆದುಕೊಳ್ಳಲು ಅರ್ಜಿ ಆರಂಭವಾಗಿದೆ ಮತ್ತು ಈ ಹೊಲಿಗೆ ಯಂತ್ರದ ಜೊತೆಗೆ ಸ್ವಂತ ಉದ್ಯೋಗ ಪ್ರಾರಂಭ ಮಾಡಲು ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸುತ್ತಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಯೋಜನೆ ಯಾವುದು ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಬ್ಯಾಂಕ್ ಆಫ್ ಬರೋಡ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಪದವಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ಉಚಿತ ಹೊಲಿಗೆ ಯಂತ್ರ ಯೋಜನೆ (Free Sewing machine Scheme)..?
ಹೌದು ಸ್ನೇಹಿತರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದಂತ ವರ್ಗದ ಜನರಿಗೆ ಮತ್ತು ಮಹಿಳೆಯರಿಗಾಗಿ ಸ್ವಂತ ಉದ್ಯೋಗ ಪ್ರಾರಂಭ ಮಾಡಲು ಹಾಗೂ ವಂಶ ಪಾರಂಪರಿಕ ವೃತ್ತಿ ಮಾಡಿಕೊಂಡು ಬಂದಿರುವಂಥ ಜನರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಈ ಯೋಜನೆಗಳ ಪೈಕಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆ ತುಂಬಾ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ ಮತ್ತು ಈ ಯೋಜನೆಗೆ ಪ್ರಸ್ತುತ ಅರ್ಜಿ ಪ್ರಾರಂಭವಾಗಿದೆ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ವಂಶ ಪಾರಂಪರಿಕ ವೃತ್ತಿ ಮಾಡಿಕೊಂಡು ಬಂದಿರುವಂತಹ ಜನರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದಂತ ಜನರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಯಿತು ಮತ್ತು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತಹ ಪ್ರತಿಯೊಬ್ಬ ಫಲಾನುಭವಿಗಳಿಗೆ ಉಚಿತವಾಗಿ 15 ಸಾವಿರ ನೀಡಲಾಗುತ್ತದೆ ಇದರ ಜೊತೆಗೆ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆ ಲಾಭ ಪಡೆದುಕೊಳ್ಳಿ
ಉಚಿತ ಹೊಲಿಗೆ ಯಂತ್ರ (Free Sewing machine Scheme) ಪಡೆದುಕೊಳ್ಳುವುದು ಹೇಗೆ.?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಜನರಿಗೆ ಉಚಿತ ಹೊಲಿಗೆ ಯಂತ್ರ ಖರೀದಿ ಮಾಡಲು ಅಥವಾ ತಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಯಾವುದೇ ಟೂಲ್ ಕಿಟ್ ಖರೀದಿಗಾಗಿ 15000 ಹಣ ನೀಡುತ್ತಿದೆ ಮತ್ತು ಈ ಹಣವು ಅರ್ಜಿದಾರರಿಗೆ ಸಂಪೂರ್ಣವಾಗಿ ಉಚಿತವಾಗಿದೆ ಮತ್ತು ಈ ಹಣವನ್ನು ಕೇಂದ್ರ ಸರಕಾರಕ್ಕೆ ಹಿಂದಿರುಗಿಸುವಂತಿಲ್ಲ.!
ಆದ್ದರಿಂದ ನೀವು ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಲು ಬಯಸುತ್ತಿದ್ದರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ 15000 ರೂಪಾಯಿ ಹಣ ಪಡೆದುಕೊಳ್ಳಬಹುದು ಇದರಿಂದ ನೀವು ಸುಧಾರಿತ ಹೊಲಿಗೆ ಯಂತ್ರವನ್ನು ಖರೀದಿ ಮಾಡಲು ಸಹಾಯವಾಗುತ್ತದೆ ಹಾಗಾಗಿ ನೀವು ಈ ಒಂದು ಯೋಜನೆ ಮೂಲಕ ತುಂಬಾ ಸುಲಭವಾಗಿ ಹೊಲಿಗೆ ಯಂತ್ರವನ್ನು ಖರೀದಿ ಮಾಡಬಹುದು ಇದರ ಜೊತೆಗೆ ಈ ಒಂದು ಯೋಜನೆಯ ಅನೇಕ ಲಾಭವನ್ನು ನೀವು ಪಡೆದುಕೊಳ್ಳಬಹುದು
ಪಿಎಂ ವಿಶ್ವಕರ್ಮ ಯೋಜನೆಯ ಉಪಯೋಗಗಳು (Free Sewing machine Scheme).?
3 ಲಕ್ಷದವರೆಗೆ ಸಾಲ ಸೌಲಭ್ಯ:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ತಮ್ಮ ವೃತ್ತಿಯನ್ನು ಆಧುನಿಕರಣ ಗೊಳಿಸಲು ಹಾಗೂ ವಂಶ ಪಾರಂಪರಿಕ ವೃತ್ತಿಯಿಂದ ಹೆಚ್ಚಿನ ಲಾಭಗಳಿಸಲು ಸುಧಾರಿತ ಯಂತ್ರೋಪಕರಣಗಳನ್ನು ಬಳಸಲು ಹಾಗೂ ತಮ್ಮ ಉದ್ಯೋಗವನ್ನು ಇನ್ನಷ್ಟು ಹೆಚ್ಚು ಲಾಭದಾಯಕ ಮಾಡಿಕೊಳ್ಳಲು ಕೇವಲ ವಾರ್ಷಿಕ ಶೇ. 5% ಬಡ್ಡಿ ದರದಲ್ಲಿ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಈ ಯೋಜನೆ ಅಡಿಯಲ್ಲಿ ಸಾಲ ಸಿಗುತ್ತದೆ
ಕೌಶಲ್ಯ ತರಬೇತಿ:– ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ 5 ರಿಂದ 7 ದಿನಗಳ ಕೌಶಲ್ಯ ತರಬೇತಿ ನೀಡಲಾಗುತ್ತದೆ ಮತ್ತು ತರಬೇತಿಗೆ ಹಾಜರಿದ್ದ ಕಾರಣ ಪ್ರತಿದಿನ 500 ಹಣವನ್ನು ಕೂಲಿ ರೂಪದಲ್ಲಿ ಒಟ್ಟು 3500 ಹಣವನ್ನು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿದಾರರು ಪಡೆದುಕೊಳ್ಳಬಹುದು
15,000 ಉಚಿತ ಹಣ ಸಿಗುತ್ತೆ:- ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಅವರಿಗೆ ಕೌಶಲ್ಯ ತರಬೇತಿ ಮುಗಿದ ನಂತರ ಉಚಿತವಾಗಿ ಟೂಲ್ ಕಿಟ್ ಖರೀದಿಗಾಗಿ 15000 ಹಣ ನೀಡಲಾಗುತ್ತದೆ ಮತ್ತು ಈ ಹಣವನ್ನು ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುತ್ತದೆ ಹಾಗೂ ಈ ಹಣದಲ್ಲಿ ಹೊಲಿಗೆ ಯಂತ್ರ ಹಾಗೂ ಇತರ ತಮ್ಮ ವೃತ್ತಿಗೆ ಅನುಕೂಲವಾಗುವಂತ ಟೂಲ್ ಕಿಟ್ ಖರೀದಿ ಮಾಡಲು ಸಹಾಯವಾಗುತ್ತದೆ
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Free Sewing machine Scheme).?
- ಭಾರತದ ಪ್ರಜೆಯಾಗಿರಬೇಕು
- ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶ
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ವಂಶ ಪಾರಂಪರಿಕ ವೃತ್ತಿ ಮಾಡಿಕೊಂಡು ಬಂದಿರಬೇಕು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು 18ರಿಂದ 50 ವರ್ಷದ ಒಳಗಿನವರಿಗೆ ಅವಕಾಶ ಮಾಡಿಕೊಡಲಾಗಿದೆ
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ರೂಪಾಯಿ ಮೀರಬಾರದು
- ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದಲ್ಲಿ ಯಾವುದೇ ರೀತಿ ಸರಕಾರಿ ನೌಕರಿ ಹೊಂದಿರಬಾರದು
- ಈ ಹಿಂದೆ ಯಾವುದೇ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ಕಡೆಯಿಂದ ಸ್ವಂತ ಉದ್ಯೋಗ ಮಾಡಲು ಸಾಲ ಅಥವಾ ಸಬ್ಸಿಡಿ ಪಡೆದಿರಬಾರದು
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (Free Sewing machine Scheme).?
ಸ್ನೇಹಿತರ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತ ಜನರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
3 thoughts on “Free Sewing machine Scheme: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆರಂಭ.! ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ”