ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಮಾಹಿತಿ ನೀಡಿದ್ದಾರೆ
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಪಟ್ಟಿಯ ಕುರಿತು ಅಂದರೆ ಕೆಲ ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಕೈ ಬಿಡಲಾಗುತ್ತೆ ಎಂಬ ಸುದ್ದಿ ಈಗಾಗಲೇ ಸಾಕಷ್ಟು ಹರದಾಡುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಪಟ್ಟಿಯಲ್ಲಿ ಯಾವುದೇ ರೀತಿ ಪರೀಕ್ಷಕರಣೆ ಮಾಡುವುದಿಲ್ಲವೆಂದು ಸ್ಪಷ್ಟ ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿಲ್ಲ ಎಂಬ ಸಮಸ್ಯೆಯ ಬಗ್ಗೆ ಪತ್ರಕರ್ತರು ಪ್ರಶ್ನೆ ನೀಡಿದರು ಹಾಗೂ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪರಿಷ್ಕರಣೆ ಮಾಡಲಾಗುತ್ತದೆ ಎಂಬ ಸುದ್ದಿ ಅರುದಾಡುತ್ತಿದೆ ಇದರ ಬಗ್ಗೆ ನಿಮ್ಮ ಅಭಿಪ್ರಾಯ ಏನು ಎಂದು ಸುದ್ದಿಗಾರರು ಪ್ರಶ್ನೆ ಮಾಡಿದರು
ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಹಣ ಸಂದಾಯ ಮಾಡಿದ್ದೇವೆ ಹಾಗೂ ಕೂಡಲೇ ಮೇ ತಿಂಗಳ ಹಣ ಶೀಘ್ರದಲ್ಲೇ ಬಿಡುಗಡೆ ಮಾಡುತ್ತಿದ್ದೇವೆ.
ಗೃಹಲಕ್ಷ್ಮಿ ಹಣ ಬಿಡುಗಡೆಗೆ ಈಗಾಗಲೇ ಹಣಕಾಸು ಇಲಾಖೆ ಅನುಮೋದನೆ ನೀಡಿದೆ ಆದರೆ ಕೆಲವೊಂದು ತಾಂತ್ರಿಕ ದೋಷಗಳಿಂದ ಹಣ ಬಿಡುಗಡೆಗೆ ತಡವಾಗುತ್ತಿದೆ ಹಾಗಾಗಿ ಬಾಕಿ ಇರುವಂತಹ ಹಣ ನಾವು ಕೂಡಲೇ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲು ಕ್ರಮ ಕೈಗೊಂಡಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
Today Gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ! ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು ಇದೆ.!
3 thoughts on “ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಮಾಹಿತಿ ನೀಡಿದ್ದಾರೆ”