SC Prize Money 2025: ವಿದ್ಯಾರ್ಥಿಗಳಿಗೆ ₹35000/- ವರೆಗೆ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ! ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ
ಕರ್ನಾಟಕ ರಾಜ್ಯ ಸರ್ಕಾರ ಇದೀಗ 2025-2026 ನೇ ಸಾಲಿನ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದಂತ ಪರಿಶಿಷ್ಟ ಜಾತಿ (SC) ವರ್ಗದ ವಿದ್ಯಾರ್ಥಿಗಳಿಗೆ ಇದೀಗ (prize money) ಪ್ರೋತ್ಸಾಹ ಧನ ಅಥವಾ ಪ್ರೈಸ್ money ಪಡೆಯಲು (Apply online) ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ವಿದ್ಯಾರ್ಥಿ (prize money) ವೇತನದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ
ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ (SC Prize Money 2025).?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ಕೂಡ 2025-26 ನೇ ಸಾಲಿನ ವರ್ಷದಲ್ಲಿ ಪ್ರಥಮ ಬಾರಿಗೆ ಅಂದರೆ ಮೊದಲ ಪ್ರಯತ್ನದಲ್ಲೇ ಶೇಕಡ 60% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುತ್ತಿದೆ,

ಹೌದು ಸ್ನೇಹಿತರೆ ವಿದ್ಯಾರ್ಥಿಗಳಿಗೆ ಸರಿಸುಮಾರು 35,000 ವರೆಗೆ ಆರ್ಥಿಕ ನೆರವು ಅಥವಾ ಪ್ರೋತ್ಸಾಹಧನ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಹವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ
ಹಾಗಾಗಿ ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು, ಆದ್ದರಿಂದ ನಾವು ಈ ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಕೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ
ಎಷ್ಟು ಆರ್ಥಿಕ ನೆರವು ಸಿಗುತ್ತದೆ (SC Prize Money 2025).?
- 2nd PUC ವಿದ್ಯಾರ್ಥಿಗಳಿಗೆ:- 3 ವರ್ಷ ಪಾಲಿಟೆಕ್ನಿಕ್ (diploma) ಡಿಪ್ಲೋಮೋ ವಿದ್ಯಾರ್ಥಿಗಳಿಗೆ ₹20,000/- ವರೆಗೆ ಹಣ ಸಿಗುತ್ತೆ
- ಪದವಿ ವಿದ್ಯಾರ್ಥಿಗಳಿಗೆ:- ₹25,000/- ರೂಪಾಯಿಗಳಿಗೆ ಹಣ ಸಿಗುತ್ತೆ
- ಯಾವುದೇ ಸ್ನಾತಕೋತ್ತರ ಪದವಿ (PG):- MA, M.SC, ಇತ್ಯಾದಿ ಕೋರ್ಸ್ ಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ₹30,000/- ವರೆಗೆ ಹಣ ಸಿಗುತ್ತೆ
- ಕೃಷಿ (agriculture), ಇಂಜಿನಿಯರಿಂಗ್ (engineering), ಪಶು ವೈದ್ಯಕೀಯ ಮತ್ತು ಔಷಧಿ ಕೋರ್ಸ್ಗಳಲ್ಲಿ (paramedical) ಉತ್ತೀರ್ಣರಾದಂತ ವಿದ್ಯಾರ್ಥಿಗಳಿಗೆ ಬರೋಬ್ಬರಿ ₹35,000/- ವರೆಗೆ ಹಣ ಸಿಗುತ್ತೆ
ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲಿ 60% ಗಿಂತ ಹೆಚ್ಚು ಅಂಕ ಪಡೆದು ಪಾಸ್ ಆಗಿರಬೇಕು
- ವಿದ್ಯಾರ್ಥಿಗಳು ಮೂರು ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮೋ, ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ಇತರ ವೃತ್ತಿಪರ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸ್ ಆಗಿರಬೇಕು
- ವಿದ್ಯಾರ್ಥಿಗಳು ಕಡ್ಡಾಯವಾಗಿ ಕರ್ನಾಟಕದ ನಿವಾಸಿಗಳಾಗಿರಬೇಕು
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 2.50 ಲಕ್ಷ ರೂಪಾಯಿ ಒಳಗಡೆ ಇರಬೇಕಾಗುತ್ತದೆ
ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದರೆ ಪ್ರಸ್ತುತ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ, ಹೌದು ಸ್ನೇಹಿತರೆ, ಇದೀಗ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಯಾವುದೇ ಕೊನೆಯ ದಿನಾಂಕ ಇನ್ನೂ ಕೂಡ ನಿಗದಿ ಮಾಡಿಲ್ಲ ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಅಥವಾ ನಿಮಗೆ ಹತ್ತಿರವಿರುವ CSC ಆನ್ಲೈನ್ ಕೇಂದ್ರ ಅಥವಾ ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದೇ ರೀತಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ನೀವು ಪ್ರತಿದಿನ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿ ಪ್ರತಿದಿನ ಪಡೆಯಲು ವಾಟ್ಸಪ್ ಚಾನಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
udyogini loan: ಈ ಯೋಜನೆ ಅಡಿಯಲ್ಲಿ ಸಿಗಲಿದೆ 3 ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ! ಶೇಕಡ 50ರಷ್ಟು ಸಬ್ಸಿಡಿ,
1 thought on “SC Prize Money 2025: ವಿದ್ಯಾರ್ಥಿಗಳಿಗೆ ಬರೋಬ್ಬರಿ ₹35000/- ವರೆಗೆ ಪ್ರೋತ್ಸಾಹಧನ ಪಡೆಯಲು ಅರ್ಜಿ ಆಹ್ವಾನ! ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ”