Kotak Bank Scholarship 2025: ವಿದ್ಯಾರ್ಥಿಗಳಿಗೆ ಸಿಗಲಿದೆ 1.50 ಲಕ್ಷ ರೂಪಾಯಿ ಹಣ.! ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ
ವಿದ್ಯಾರ್ಥಿಗಳಿಗೆ ಕೋಟಕ್ ಮಹೇಂದ್ರ ಗ್ರೂಪ್ ವತಿಯಿಂದ, ಕೋಟಕ್ ಫೌಂಡೇಶನ್ ವತಿಯಿಂದ ಕನ್ಯಾ ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ಮಾಡಲಾಗಿದೆ ಈ ಯೋಜನೆಯ ಮೂಲಕ ಆರ್ಥಿಕವಾಗಿ ಹಿಂದುಳಿದಂತ ವಿದ್ಯಾರ್ಥಿನಿಯರಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ಹೆಣ್ಣು ಮಕ್ಕಳಿಗೆ ಬರೋಬ್ಬರಿ 1.50 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.
ಆದ್ದರಿಂದ ವಿದ್ಯಾರ್ಥಿನಿಯರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು ಪಡೆಯಬಹುದು, ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ
ಏನಿದು ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆ..?
ಕೋಟಕ್ ಮಹೇಂದ್ರ ಗ್ರೂಪ್ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಪ್ರತಿಭಾವಂತ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಖರ್ಚು ವೆಚ್ಚಗಳನ್ನು ಸರಿದೂಗಿಸಲು ಕೋಟಕ್ ಮಹೇಂದ್ರ ಗ್ರೂಪ್ ತನ್ನ ಎಜುಕೇಶನ್ ಫೌಂಡೇಶನ್ ವತಿಯಿಂದ ಕನ್ಯಾ ಸ್ಕಾಲರ್ಶಿಪ್ ಯೋಜನೆ ಬಿಡುಗಡೆ ಮಾಡಿದೆ. ಈ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ 1.50 ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ಸ್ಕಾಲರ್ಶಿಪ್ ನೀಡುತ್ತದೆ

ಆದ್ದರಿಂದ ಈ ಒಂದು ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿನಿಯರು WWW.buddy4study.com ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು ಹಾಗೂ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿಸಿ ದಂತೆ ಇನ್ನಷ್ಟು ಹೆಚ್ಚಿನ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಹೆಣ್ಣು ಮಕ್ಕಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಭಾರತದ ನಿವಾಸಿಗಳಾಗಿರಬೇಕು ಹಾಗೂ ಭಾರತದ ಪೌರತ್ವ ಹೊಂದಿರಬೇಕು
- ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಅಥವಾ 12ನೇ ತರಗತಿಯಲ್ಲಿ ಕನಿಷ್ಠ 75% ಗಿಂತ ಹೆಚ್ಚು ಅಂಕ ಪಡೆದಿರಬೇಕು
- NIRF/NAAC ಮಾನ್ಯತೆ ಪಡೆದಂತ ಶಿಕ್ಷಣ ಸಂಸ್ಥೆಗಳಲ್ಲಿ MBBS, ಇಂಜಿನಿಯರಿಂಗ್, BS/MS, ಇಂಟಿಗ್ರೇಟೆಡ್ LLB, ಹಾಗೂ ಇತರ ಪದವಿ ಕೋರ್ಸ್ ಗಳಲ್ಲಿ ಪ್ರಸ್ತುತ ವರ್ಷದಲ್ಲಿ ಅಧ್ಯಯನ ಮಾಡುತ್ತಿರಬೇಕು ಅಥವಾ ಪ್ರವೇಶ ಪಡೆದಿರಬೇಕು
- ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂಪಾಯಿ ಮೀರಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು.?
- ವಿದ್ಯಾರ್ಥಿನಿಯರ ಆಧಾರ್ ಕಾರ್ಡ್
- ಕಾಲೇಜು ಪ್ರವೇಶ ಪ್ರಮಾಣ ಪತ್ರ
- ಇಂದಿನ ತರಗತಿಯ ಎಲ್ಲಾ ಅಂಕಪಟ್ಟಿಗಳು
- ಕುಟುಂಬದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋಸ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಇತರೆ ದಾಖಲಾತಿಗಳು
ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು..?
ವಿದ್ಯಾರ್ಥಿನಿಯರು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗೂ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನ ನೀವು ಪ್ರತಿಯೊಂದು ವಿಷಯದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ನಂತರ ಮಾತ್ರ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದೇ ರೀತಿ ನಿಮಗೆ ಸ್ಕಾಲರ್ಶಿಪ್ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಮ್ ಗಳಿಗೆ ಸೇರಿಕೊಳ್ಳಿ
ದಿನ ಭವಿಷ್ಯ : ಈ ರಾಶಿಯವರಿಗೆ ಇಂದು ಶುಭವಾಗಲಿದೆ | Daily Horoscope July 7 2025
1 thought on “Kotak Bank Scholarship 2025: ವಿದ್ಯಾರ್ಥಿಗಳಿಗೆ ಸಿಗಲಿದೆ 1.50 ಲಕ್ಷ ರೂಪಾಯಿ ಹಣ.! ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ”