Navy Recruitment 2025: ಭಾರತೀಯ ನೌಕಾಪಡೆ ಹೊಸ ನೇಮಕಾತಿ.! 1,097 ಖಾಲಿ ಹುದ್ದೆಗಳು, 10Th, PUC ಪಾಸಾದವರು ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಭಾರತೀಯ ನೌಕಾಪಡೆ ಇದೀಗ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು ಸ್ನೇಹಿತರೆ ಪ್ರಸ್ತುತ 2025 ಮತ್ತು 26 ನೇ ಸಾಲಿನ ವರ್ಷದಲ್ಲಿ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಸುಮಾರು 1,097 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ, ಆದರಿಂದ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ನೌಕಾಪಡೆ ಹೊಸ ನೇಮಕಾತಿ (Navy Recruitment 2025)..?
ಹೌದು ಸ್ನೇಹಿತರೆ, ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ 1097 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಒಂದು ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 18 ಜುಲೈ 2025 ನಿಗದಿ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಸಿ

ಆದ್ದರಿಂದ ನಾವು ಈ ಲೇಖನೆಯ ಮೂಲಕ ಭಾರತೀಯ ನೌಕಾಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳೋಣ
ಭಾರತೀಯ ನೌಕಾಪಡೆಯ ಹುದ್ದೆಗಳ ನೇಮಕಾತಿ..?
ನೇಮಕಾತಿ ಸಂಸ್ಥೆ:- ಭಾರತೀಯ ನೌಕಾಪಡೆ
ಖಾಲಿ ಹುದ್ದೆಗಳ ಸಂಖ್ಯೆ:- 1,097 ಹುದ್ದೆಗಳು
ಹುದ್ದೆಯ ಹೆಸರು:- ಅಗ್ನಿಶಾಮಕ ಸಿಬ್ಬಂದಿ ಮತ್ತು ಚಾರ್ಜ್ ಮ್ಯಾನ್
ಉದ್ಯೋಗ ಸ್ಥಳ:- ಭಾರತದದ್ಯಾಂತ
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 05/07/2025
ಅರ್ಜಿ ಕೊನೆಯ ದಿನಾಂಕ:- 18/07/2025
ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
ವಿದ್ಯಾರ್ಹತೆ:- ಭಾರತೀಯ ನೌಕಾಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಹತ್ತನೇ ತರಗತಿ ಪಾಸ್ ಆಗಿರಬೇಕು ಹಾಗೂ ಹುದ್ದೆಗಳ ಅನುಗುಣವಾಗಿ ಐಟಿಐ ಮತ್ತು ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಮತ್ತು ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ಭಾರತೀಯ ನೌಕಾಪಡೆಯ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು. ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
- SC/ST ಅಭ್ಯರ್ಥಿಗಳಿಗೆ:- 05 ವರ್ಷ
- ಓಬಿಸಿ ಅಭ್ಯರ್ಥಿಗಳಿಗೆ:- 03 ವರ್ಷ
- PWBD (UR) ಅಭ್ಯರ್ಥಿಗಳಿಗೆ:- 10 ವರ್ಷ
- PWBD (OBC) ಅಭ್ಯರ್ಥಿಗಳಿಗೆ:- 13 ವರ್ಷ
- PWBD (SC/ST) ಅಭ್ಯರ್ಥಿಗಳಿಗೆ:- 15 ವರ್ಷ
ಅರ್ಜಿ ಶುಲ್ಕ:- ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕರು ಮತ್ತು ವಿಕಲಚೇತನರು ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗೂ ಉಳಿದ ಅಭ್ಯರ್ಥಿಗಳಿಗೆ 295 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಅರ್ಜಿ ಶುಲ್ಕ ಪಾವತಿ ಮಾಡಲು ಆನ್ಲೈನ್ ಮೂಲಕ ಅವಕಾಶ ಕಲ್ಪಿಸಿಕೊಡಲಾಗಿದೆ
ಸಂಬಳ ಎಷ್ಟು:- ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ 18000 ಇಂದ ಗರಿಷ್ಠ 1,42400 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ
ಆಯ್ಕೆಯ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ದೈಹಿಕ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ನೌಕಾಪಡೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿಗಳು ತಿಳಿದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
ದಿನ ಭವಿಷ್ಯ: 12 ಜುಲೈ 2025 | ಇಂದು ಈ ರಾಶಿಯವರಿಗೆ ಶುಭದಿನ | Today Horoscope