ಕೇಂದ್ರ ಸರ್ಕಾರದಿಂದ ಹೊಸ ಸ್ಕಾಲರ್ಶಿಪ್ ಯೋಜನೆ ಬಿಡುಗಡೆ.! ವಿದ್ಯಾರ್ಥಿಗಳಿಗೆ ಬರೋಬ್ಬರಿ 3.72 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತೆ
ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ಯಶಸ್ವಿನಿ ಯೋಜನೆಯನ್ನು ಜಾರಿಗೆ ತಂದಿದೆ,
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಯಶಸ್ವಿನಿ ಯೋಜನೆ ಅಥವಾ PM ಯಶಸ್ವಿನಿ ವಿದ್ಯಾರ್ಥಿ ವೇತನ ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳು 3.72 ಲಕ್ಷ ರೂಪಾಯಿ ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನವನ್ನು ಆದಷ್ಟು ವಿದ್ಯಾರ್ಥಿಗಳಿಗೆ ಶೇರ್ ಮಾಡಿ
ಪ್ರಧಾನ ಮಂತ್ರಿ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆ..?
ಕೇಂದ್ರ ಸರ್ಕಾರ ನಮ್ಮ ದೇಶದಲ್ಲಿ ಇರುವಂತ ಹಿಂದುಳಿದ ವರ್ಗದ (OBC) ವಿದ್ಯಾರ್ಥಿಗಳಿಗೆ ಮತ್ತು ಅಲೆಮಾರಿ ಹಾಗೂ ಅರೆ ಅಲೆಮಾರಿ (DNT) ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆ ಅಥವಾ ಪ್ರಧಾನ ಮಂತ್ರಿ ಯಶಸ್ವಿನಿ ವಿದ್ಯಾರ್ಥಿ ವೇತನವನ್ನು ಜಾರಿಗೆ ತಂದಿದೆ. ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳು 3.72 ಲಕ್ಷ ರೂಪಾಯಿ ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಬಹುದು

ಹೌದು ಸ್ನೇಹಿತರೆ, ವಿದ್ಯಾರ್ಥಿಗಳು 9ನೇ ತರಗತಿಯಿಂದ 12ನೇ ತರಗತಿವರೆಗೆ ಅಧ್ಯಯನ ಮಾಡುತ್ತಿದ್ದರೆ ನೀವು ಪ್ರಧಾನ ಮಂತ್ರಿ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಕೆಲವೊಂದು ಅರ್ಹತೆಗಳು ಹೊಂದಿರಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ವಿವರಗಳನ್ನು ನಾವು ಕೆಳಗಡೆ ನೀಡಿದ್ದೇವೆ
ಪ್ರಧಾನ ಮಂತ್ರಿ ಯಶಸ್ವಿನಿ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಎಷ್ಟು ಆರ್ಥಿಕ ನೆರವು ಸಿಗುತ್ತದೆ..?
- ಪ್ರಧಾನ ಮಂತ್ರಿ ಯಶಸ್ವಿನಿ ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳು ಬರೋಬ್ಬರಿ 3.72 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ಪಡೆಯಬಹುದು.
- ಹೌದು ಸ್ನೇಹಿತರೆ 9ನೇ ತರಗತಿ ಮತ್ತು ಹತ್ತನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವಂತ ವಿದ್ಯಾರ್ಥಿಗಳಿಗೆ ಒಂದು ವರ್ಷಕ್ಕೆ 4000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ
- 11ನೇ ತರಗತಿ ಮತ್ತು 12ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವಂತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವರ್ಷಕ್ಕೆ 5000 ರಿಂದ 20 ಸಾವಿರದವರೆಗೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಆರ್ಥಿಕ ನೆರವು ಪಡೆಯಬಹುದು
- 11ನೇ ತರಗತಿಯಿಂದ 12ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ಅತ್ಯುತ್ತಮ ವಿದ್ಯಾರ್ಥಿಗಳಿಗೆ ವರ್ಷಕ್ಕೆ 1.25 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಹೊಂದಿರುತ್ತಾರೆ.
- ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಮುಂತಾದ ವೃತ್ತಿಪರ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2 ಲಕ್ಷ ರೂಪಾಯಿಯಿಂದ 3,72,000 ರೂಪಾಯಿವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಹೊಂದಿರುತ್ತಾರೆ
ಪ್ರಧಾನ ಮಂತ್ರಿ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ OBC,DNT, EBC ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಆಗಿರಬೇಕು
- ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳ ಪೋಷಕರ ಆದಾಯ 3,00,000 ಗಿಂತ ಕಡಿಮೆ ಇರಬೇಕು
- ಪ್ರಧಾನ ಮಂತ್ರಿ ಯಶಸ್ವಿನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ 9ನೇ ತರಗತಿಯಿಂದ 11ನೇ ತರಗತಿವರೆಗೆ ಅಧ್ಯಯನ ಮಾಡುತ್ತಿದ್ದರೆ ಅರ್ಜಿ ಸಲ್ಲಿಸಬಹುದು ಹಾಗೂ ಪದವಿ ಮತ್ತು ವೃತ್ತಿಪರ ಕೋರ್ಸ್ ನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
- ಪ್ರಧಾನ ಮಂತ್ರಿ ಯಶಸ್ವಿನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳ ಹಾಜರಾತಿ ಕನಿಷ್ಠ 75% ಹೊಂದಿರಬೇಕು
ಪ್ರಧಾನ ಮಂತ್ರಿ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರಗಳು
- ಬ್ಯಾಂಕ್ ಖಾತೆ ವಿವರಗಳು
- ಮೊಬೈಲ್ ನಂಬರ್
- ಇಂದಿನ ಎಲ್ಲಾ ತರಗತಿಯ ಮಾರ್ಕ್ಸ್ ಕಾರ್ಡ್
- ಇತರೆ ಅಗತ್ಯ ದಾಖಲಾತಿಗಳು
ಪ್ರಧಾನ ಮಂತ್ರಿ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು..?
ವಿದ್ಯಾರ್ಥಿಗಳು ಪ್ರಧಾನಮಂತ್ರಿ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಮೊದಲು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ನಂತರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಎಲ್ಲಾ ಸಂಪೂರ್ಣ ಮಾಹಿತಿ ತಿಳಿದುಕೊಂಡ ನಂತರ ನೀವು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳಿಗಾಗಿ ನೀವು ನಮ್ಮ ಟೆಲಿಗ್ರಾಂ ಚಾನೆಲ್ ಮತ್ತು ವಾಟ್ಸಪ್ ಚಾನೆಲ್ ಸೇರಿಕೊಳ್ಳಬಹುದು










2 thoughts on “ಕೇಂದ್ರ ಸರ್ಕಾರದಿಂದ ಹೊಸ ಸ್ಕಾಲರ್ಶಿಪ್ ಯೋಜನೆ ಬಿಡುಗಡೆ.! ವಿದ್ಯಾರ್ಥಿಗಳಿಗೆ ಬರೋಬ್ಬರಿ 3.72 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತೆ”