ವಿದ್ಯಾಸಿರಿ ಸ್ಕಾಲರ್ಶಿಪ್ : ವಿದ್ಯಾರ್ಥಿಗಳಿಗೆ ತಿಂಗಳಿಗೆ ₹1,500 ಹಣ ಸಿಗುತ್ತೆ.! ತಕ್ಷಣ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ, ನಮ್ಮ ಕರ್ನಾಟಕ ಸಮಾಚಾರ ಮಾಧ್ಯಮಕ್ಕೆ ತಮಗೆಲ್ಲರಿಗೂ ಆತ್ಮೀಯ ಸ್ವಾಗತ ಇದೀಗ ಕರ್ನಾಟಕ ರಾಜ್ಯ ಸರ್ಕಾರ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಮತ್ತು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ತಿಂಗಳಿಗೆ 1,500 ಹಣ ಸಿಗುತ್ತೆ ಹಾಗಾಗಿ ನಾವು ಈ ಲೇಖನಯ ಮೂಲಕ ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆ..?
ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ನಮ್ಮ ರಾಜ್ಯದಲ್ಲಿ ಇರುವಂತ ಅತ್ಯಂತ ಬಡವರ್ಗದ ವಿದ್ಯಾರ್ಥಿಗಳು ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಮತ್ತು ಅರೆ ಅಲೆಮಾರಿ ಹಾಗೂ ಅಲೆಮಾರಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶೈಕ್ಷಣಿಕ ಖರ್ಚು ವೆಚ್ಚಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆ ಜಾರಿಗೆ ತರಲಾಯಿತು

ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ಅರ್ಜಿ (Apply online) ಸಲ್ಲಿಸಿದ ವಿದ್ಯಾರ್ಥಿಗಳಿಗೆ ತಿಂಗಳಿಗೆ ₹1,500/- ಹಣ (Money) ನೀಡುವುದು ಅಥವಾ ವರ್ಷಕ್ಕೆ ₹15,000/- ಹಣ (Money) ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಉದ್ದೇಶದಿಂದ ಈ ಒಂದು ಯೋಜನೆ ಜಾರಿಗೆ ತರಲಾಯಿತು. ಹಾಗಾಗಿ ಪ್ರಸ್ತುತ ಈ ಸ್ಕಾಲರ್ಶಿಪ್ ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ
ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು..?
ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅರ್ಹತ ಮಾನದಂಡದ ಪ್ರಕಾರ ನಮ್ಮ ರಾಜ್ಯದ ಹಿಂದುಳಿದ ವರ್ಗಕ್ಕೆ (BC) ಸೇರಿದ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಮತ್ತು ಅಲೆಮಾರಿ ಹಾಗೂ ಅರೆ ಅಲೆಮಾರಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ
ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಪ್ರಸ್ತುತ 2025-2026 ನೇ ಸಾಲಿನಲ್ಲಿ ಪಿಯುಸಿ ಮತ್ತು ITI, ಡಿಪ್ಲೋಮೋ, ಪಾಲಿಟೆಕ್ನಿಕ್, ಪದವಿ, ಇಂಜಿನಿಯರಿಂಗ್, ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ
ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತಾ ಮಾನದಂಡಗಳು..?
- ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿಗಳಾಗಿರಬೇಕು
- ಇಂದಿನ ವರ್ಷದಲ್ಲಿ ಕನಿಷ್ಠ 60% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಕನಿಷ್ಠ 55% ಅಂಕ ಪಡೆದಿರಬೇಕು
- ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ
- ಕಾಲೇಜು ಮತ್ತು ವಿದ್ಯಾರ್ಥಿಯ ನಿವಾಸದ ನಡುವಿನ ದೂರ ಕನಿಷ್ಠ 5 K.M ಹೆಚ್ಚಿನ ದೂರ ಹೊಂದಿರಬೇಕು
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೀರಬಾರದು
ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಕೆ ಮಾಡಬೇಕು..?
ವಿದ್ಯಾರ್ಥಿಗಳು ನೀವು ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30 ಸೆಪ್ಟೆಂಬರ್ 2025
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರಿ ಯೋಜನೆಗಳು ಮತ್ತು ಸರಕಾರದ ವಿವಿಧ ಮಾಹಿತಿಗಳನ್ನು ಪಡೆದುಕೊಳ್ಳಲು ಆಸಕ್ತಿ ಇದ್ದರೆ ತಕ್ಷಣ
ನಮ್ಮ ವಾಟ್ಸಪ್ ಚಾನೆಲ್ ಹಾಕು ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು