LIC Scholarship – ವಿದ್ಯಾರ್ಥಿಗಳಿಗೆ LIC ಸ್ಕಾಲರ್ಶಿಪ್ ಮೂಲಕ 40000 ವರೆಗೆ ವಿದ್ಯಾರ್ಥಿವೇತನ ಸಿಗುತ್ತೆ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ, ಭಾರತೀಯ ಜೀವ ವಿಮೆ ನಿಗಮ ಇದೀಗ ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬರೋಬ್ಬರಿ 40,000 ವರೆಗೆ ಸ್ಕಾಲರ್ಶಿಪ್ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ಮಾಹಿತಿ ತಿಳಿಯೋಣ
ಎಲ್ಐಸಿ ವಿದ್ಯಾರ್ಥಿವೇತನ ವಿವರಣೆ (LIC Scholarship).?
ಹೌದು ಸ್ನೇಹಿತರೆ, ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ) ಉನ್ನತ ಶಿಕ್ಷಣ ಪಡೆಯಲು ಬಯಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಬಡ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನವನ್ನು ಪ್ರಾರಂಭ ಮಾಡಲಾಗಿದೆ ಮತ್ತು ಈ ವಿದ್ಯಾರ್ಥಿ ವೇತನದ ಮೂಲಕ ಸುಮಾರು 40 ಸಾವಿರ ವರೆಗೆ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಹಣ ಪಡೆಯಬಹುದು

ಆದ್ದರಿಂದ ಆಸಕ್ತಿ ಇರುವ ವಿದ್ಯಾರ್ಥಿಗಳು ಎಲ್ಐಸಿ ನೀಡುತ್ತಿರುವ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ಈಗ ತಿಳಿಯೋಣ
ಎಲ್ಐಸಿ ವಿದ್ಯಾರ್ಥಿ ವೇತನದ ಮೊತ್ತ (LIC Scholarship Amount).?
ವೈದ್ಯಕೀಯ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಂದು ವರ್ಷಕ್ಕೆ 40,000 ಎರಡು ಕಂತಿನ ರೂಪದಲ್ಲಿ ₹20,000 ರೂಪಾಯಿಯಂತೆ ವಿದ್ಯಾರ್ಥಿವೇತನ ನೀಡಲಾಗುತ್ತದೆ
ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಒಂದು ವರ್ಷಕ್ಕೆ ರೂ.30,000 ಯಂತೆ ಎರಡು ಕಂತಿನ ರೂಪದಲ್ಲಿ ₹15,000/- ರೂಪಾಯಿಯಂತೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ
ಡಿಪ್ಲೋಮೋ, ITI, ಪದವಿ, ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹20,000 ಯಂತೆ ತಲಾ ಒಂದು ಕಂತಿಗೆ ₹10,000 ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ
ಹತ್ತನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಒಂದು ವರ್ಷಕ್ಕೆ ಎರಡು ಕಂತಿನ ರೂಪದಲ್ಲಿ ₹7,500 ರೂಪಾಯಿಯಂತೆ ಒಟ್ಟು ₹15,000 ರೂಪಾಯಿ ವಿದ್ಯಾರ್ಥಿವೇತನ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (LIC Scholarship Apply eligibility criteria).?
- ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಭಾರತದ ಪ್ರಜೆಯಾಗಿರಬೇಕು
- ವಿದ್ಯಾರ್ಥಿನಿಯರು 10ನೇ ತರಗತಿಯಲ್ಲಿ ಪ್ರಸ್ತುತ ವರ್ಷದಲ್ಲಿ ಅಧ್ಯಯನ ಮಾಡುತ್ತಿರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಪ್ರಸ್ತುತ ವರ್ಷದಲ್ಲಿ ವೈದ್ಯಕೀಯ, ಡಿಪ್ಲೋಮೋ, ITI, ಪದವಿ ಮತ್ತು ಸ್ನಾತಕೋತ್ತರ ಪದವಿ ಅಥವಾ ಇತರೆ ಯಾವುದೇ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರಬೇಕು
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ವರ್ಷಕ್ಕೆ 4,50,000 ಒಳಗಡೆ ಇರಬೇಕು
- ವಿದ್ಯಾರ್ಥಿಗಳು ಕಳೆದ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕ ಪಡೆದಿರಬೇಕು
ಅರ್ಜಿ ಸಲ್ಲಿಸುವುದು ಹೇಗೆ (How To Apply online LIC Scholarship Kannada).?
LIC ವಿದ್ಯಾರ್ಥಿ ವೇತನಕ್ಕೆ (Apply online) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22 ಸೆಪ್ಟೆಂಬರ್ 2025 ಇದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮೊದಲು ಸ್ಕಾಲರ್ಶಿಪ್ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ತಿಳಿದುಕೊಳ್ಳಿ ನಂತರ ನಾವು ಕೆಳಗಡೆ ಲಿಂಕ್ ನೀಡಿದ್ದೇವೆ, ಅದರ ಮೇಲೆ ಕ್ಲಿಕ್ ಮಾಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದ್ದರೆ
ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು