Gruhalakshmi Scheme – ಗೃಹಲಕ್ಷ್ಮಿ ಹಣ ರಿಲೀಸ್ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಮಾಹಿತಿ.! ಹಣ ಯಾವಾಗ ಬಿಡುಗಡೆಯಾಗುತ್ತದೆ

Gruhalakshmi Scheme – ಗೃಹಲಕ್ಷ್ಮಿ ಹಣ ರಿಲೀಸ್ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಮಾಹಿತಿ.! ಹಣ ಯಾವಾಗ ಬಿಡುಗಡೆಯಾಗುತ್ತದೆ

ಮೈಸೂರು: ನಮಸ್ಕಾರ ಗೆಳೆಯರೇ 23 ಸೆಪ್ಟೆಂಬರ್ 2025 ರಂದು ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳಾ ದಸರಾ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಯ ಬಿಡುಗಡೆಗೆ ಸಂಬಂಧಿಸಿದಂತೆ ಹೊಸ ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯ ಬಗ್ಗೆ ಯಾವ ಮಾಹಿತಿ ತಿಳಿಸಿದ್ದಾರೆ ಎಂಬ ವಿವರವನ್ನು ತಿಳಿದುಕೊಳ್ಳೋಣ

 

ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಗ್ಗೆ ಹೊಸ ಅಪ್ಡೇಟ್.?

ಹೌದು ಸ್ನೇಹಿತರೆ 23 ಸೆಪ್ಟೆಂಬರ್ 2025 ರಂದು ಮಹಿಳಾ ದಸರಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಅವರು ಉದ್ಘಾಟನೆ ಮಾಡಿದ್ದಾರೆ ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಗ್ರಹ ಲಕ್ಷ್ಮಿ 23ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಹೊಸ ಮಾಹಿತಿ ಹಂಚಿಕೊಂಡಿದ್ದಾರೆ.

Gruhalakshmi Scheme
Gruhalakshmi Scheme

 

ಹೌದು ಗೆಳೆಯರೆ ಅವರು ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ 1 ಕೋಟಿ 24 ಲಕ್ಷ ಮಹಿಳೆಯರ ಖಾತೆಗೆ ಈಗಾಗಲೇ 22ನೇ ಕಂತಿನ ಹಣ ಬಿಡುಗಡೆ ಮಾಡಿದ್ದೇವೆ ಹಾಗೂ 23ನೇ ಕಂತಿನ ಹಣ ಅಂದರೆ ಜುಲೈ ತಿಂಗಳ ಕಂತಿನ ಹಣವು ಕೂಡ ಬಿಡುಗಡೆ ಮಾಡಿದ್ದೇವೆ. ಈ ಹಣವು ಮಹಿಳೆಯರ ದಸರಾ ಹಬ್ಬಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ

WhatsApp Group Join Now
Telegram Group Join Now       

ಹಾಗಾಗಿ ಗೃಹಲಕ್ಷ್ಮಿ ಫಲಾನುಭವಿಗಳು ತಮ್ಮ ಖಾತೆಗೆ ಹಣ ಬಂದಿದೆಯ ಅಥವಾ ಇಲ್ಲ ಎಂಬ ಮಾಹಿತಿಯನ್ನು ಬ್ಯಾಂಕ್ ಖಾತೆ ಚೆಕ್ ಮಾಡುವುದರ ಮೂಲಕ ತಿಳಿದುಕೊಳ್ಳಬಹುದು.

ಹಾಗೂ ಈ ಬಗ್ಗೆ ಮಾತನಾಡಿದ ವಿಡಿಯೋವನ್ನು ನಾವು ಲೇಖನ ಕೊನೆಯ ಭಾಗದಲ್ಲಿ ಆಗುತ್ತೇವೆ ಅದನ್ನು ಕೂಡ ನೋಡಬಹುದು

 

ಗೃಹಲಕ್ಷ್ಮಿ ಯೋಜನೆ ಅಂದರೆ ಏನು..?

ಸ್ನೇಹಿತರ ನಮ್ಮ ರಾಜ್ಯದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ನಡೆಸಲಾಯಿತು ಈ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಹಲವಾರು ಪಕ್ಷಗಳು ಜನರಿಗೆ ಹಲವಾರು ಯೋಜನೆಗಳನ್ನು ನೀಡುವುದಾಗಿ ಭರವಸೆ ನೀಡಿತ್ತು ಅದೇ ರೀತಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ಜನರಿಗೆ 5 ಗ್ಯಾರಂಟಿಗಳನ್ನು ನೀಡುವುದಾಗಿ ಘೋಷಣೆ ಮಾಡಿತ್ತು ಆ  ಗ್ಯಾರೆಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದೆ

ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಪ್ರತಿಯೊಬ್ಬರ ಫಲಾನುಭವಿಗಳ ಖಾತೆಗೆ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡುವ ಯೋಜನೆನೆ ಗೃಹಲಕ್ಷ್ಮಿ ಯೋಜನೆಯಾಗಿದೆ.! ಈ ಒಂದು ಯೋಜನೆಯ ಮೂಲಕ ಮಹಿಳೆಯರು ಇಲ್ಲಿವರೆಗೂ ಬರೋಬ್ಬರಿ 22ನೇ ಕಂತಿನ ಹಣದವರೆಗೆ ಅಂದರೆ ಸುಮಾರು 44000 ವರೆಗೂ ಹಣ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಹಾಗಾಗಿ ಇನ್ನು ಮಹಿಳೆಯರ ಖಾತೆಗೆ ಸುಮಾರು ಎರಡರಿಂದ ಮೂರು ಕಂತಿನ ಹಣ ಬಾಕಿ ಇದೆ

ಹಾಗಾಗಿ ಈ ಬಾಕಿ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಮಹಿಳೆಯರು ಕಾತುರದಿಂದ ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ತಿಳಿಸಿದ್ದು ನಾವು ಆ ವಿಡಿಯೋ ಲಿಂಕ್ ಅನ್ನು ಕೆಳಗಡೆ ನೀಡಿದ್ದೇವೆ

WhatsApp Group Join Now
Telegram Group Join Now       

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಸ್ನೇಹಿತರ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆಯಾ ಹಾಗಾದ್ರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು

 

Leave a Comment

?>