New Ration Card – ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ನೀಡಿದ ಕೆ.ಎಚ್ ಮುನಿಯಪ್ಪ
ನಮಸ್ಕಾರ ಗೆಳೆಯರೇ ಹೊಸ ರೇಷನ್ ಕಾರ್ಡ್ ಗಾಗಿ ಕಾಯುತ್ತಿರುವ ಜನರಿಗೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿರುವ ಕುಟುಂಬಗಳಿಗೆ ಇದೀಗ ನಮ್ಮ ಆಹಾರ ಇಲಾಖೆಯ ಸಚಿವರಾದಂತಹ ಕೆ. ಹೆಚ್. ಮುನಿಯಪ್ಪ ಅವರು ಹೊಸ ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ವಿತರಣೆ ಯಾವಾಗ ಮಾಡಲಾಗುತ್ತದೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗಬಹುದು ಎಂಬ ವಿಷಯದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹೊಸ ರೇಷನ್ ಕಾರ್ಡ್ ವಿತರಣೆಯ ಬಗ್ಗೆ ಕೆ. ಹೆಚ್. ಮುನಿಯಪ್ಪ ಸ್ಪಷ್ಟ ಮಾಹಿತಿ (New Ration Card)..?
ಹೌದು ಸ್ನೇಹಿತರೆ ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ನಮ್ಮ ಆಹಾರ ಇಲಾಖೆಯ ಸಚಿವ ಕೆ. ಹೆಚ್. ಮುನಿಯಪ್ಪ ಮುನಿಯಪ್ಪನವರು ಅರ್ಹತೆ ಹೊಂದಿದ ಎಲ್ಲಾ ಕುಟುಂಬದವರಿಗೆ ಬಿಪಿಎಲ್ ರೇಷನ್ ಕಾರ್ಡ್ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

ಅಷ್ಟೇ ಅಲ್ಲದೆ ಅರ್ಹತೆ ಇಲ್ಲದಂತ ಕುಟುಂಬಗಳ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಗೊಳಿಸಿ ನಂತರ ಎಪಿಎಲ್ ರೇಷನ್ ಕಾರ್ಡ್ ಗಳಾಗಿ ಬದಲಾವಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ..
ಸರಕಾರಿ ನೌಕರಿದಾರರು ಹಾಗೂ ಆದಾಯ ತೆರಿಗೆ ಪಾವತಿ ಮಾಡುವವರು ಮತ್ತು ಆರ್ಥಿಕವಾಗಿ ಹೆಚ್ಚು ಅನುಕೂಲ ಹಾಗೂ ಸ್ಥಿರತೆ ಹೊಂದಿದವರು ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ತುಂಬಾ ಜನರು ಪಡೆದುಕೊಂಡಿದ್ದಾರೆ ಹಾಗಾಗಿ ಅಂತ ಪಡಿತರ ಚೀಟಿಗಳನ್ನು ಈಗಾಗಲೇ ಗುರುತು ಹಚ್ಚುವ ಕೆಲಸ ರಾಜ್ಯದ ಆಹಾರ ಇಲಾಖೆ ಕಟ್ಟುನಿಟ್ಟು ಕ್ರಮ ಕೈಗೊಳ್ಳುತ್ತಿದೆ ಈ ಪ್ರಕ್ರಿಯೆ ಮುಗಿದ ನಂತರ ಶೀಘ್ರದಲ್ಲಿ ಅಂದರೆ ಮುಂದಿನ ನವೆಂಬರ್ ತಿಂಗಳಿನಲ್ಲಿ ಹೊಸ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ.
ಹೌದು ಸ್ನೇಹಿತರೆ ಕಳೆದ ಎರಡು ವರ್ಷಗಳಿಂದ ಯಾವುದೇ ರೀತಿ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ವಿತರಣೆ ಮಾಡಿಲ್ಲ ಹಾಗಾಗಿ ಅಕ್ರಮ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಪಡೆದುಕೊಂಡಿರುವ ರೇಷನ್ ಕಾರ್ಡ್ ಗಳ ರದ್ದತಿ ಪ್ರಕ್ರಿಯೆ ಮುಗಿದ ನಂತರ ಮುಂದಿನ ತಿಂಗಳು ಅಂದರೆ ನವೆಂಬರ್ ತಿಂಗಳಿನಲ್ಲಿ ಹೊಸ ಪಡಿತರ ಚೀಟಿ ಅಥವಾ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ (New Ration Card)..?
ಸ್ನೇಹಿತರೆ ನಿನ್ನೆ ಅಂದರೆ 08 ಅಕ್ಟೋಬರ್ 2025ರಂದು ಮಧ್ಯಾಹ್ನ 12 ಗಂಟೆಯಿಂದ ಸಾಯಂಕಾಲ 3 ಗಂಟೆಯವರೆಗೆ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು ಹಾಗಾಗಿ ಈ ವಿಷಯ ತುಂಬಾ ಜನರಿಗೆ ಗೊತ್ತೇ ಇಲ್ಲ ಹಾಗಾಗಿ ನಿಮಗೆ ಯಾವುದೇ ರೀತಿ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಹಾಗೂ ರೇಷನ್ ಕಾರ್ಡ್ ಗೆ ಸಂಬಂಧಿಸಿದ ಯಾವುದೇ ಮಾಹಿತಿ ತಕ್ಷಣ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಿ
ಸ್ನೇಹಿತರ ಕೆಲವೊಂದು ಸುದ್ದಿ ಮಾಧ್ಯಮಗಳ ಪ್ರಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಈ ತಿಂಗಳು ಎರಡರಿಂದ ಮೂರು ಸಲ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗೂ ಮುಂದಿನ ತಿಂಗಳು ಅಂದರೆ ನವೆಂಬರ್ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಜನರಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕೆ. ಹೆಚ್. ಮುನಿಯಪ್ಪ ಮಾಹಿತಿ ಹಂಚಿಕೊಂಡಿದ್ದಾರೆ.
ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾದ ತಕ್ಷಣ ನಿಮಗೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ನಿಮಗೆ ಅರ್ಜಿ ಸಲ್ಲಿಕೆಯ ಪ್ರಾರಂಭವಾದ ತಕ್ಷಣ ಮಾಹಿತಿ ಸಿಗುತ್ತದೆ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ..?
ಹೌದು ಸ್ನೇಹಿತರೆ, ಪಡಿತರ ಚೀಟಿಯಲ್ಲಿ ಹೆಸರು ಬದಲಾವಣೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಮತ್ತು ಇತರ ಯಾವುದೇ ರೀತಿ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ 04 ದಿನಾಂಕ 2025 ರಿಂದ ದಿನಾಂಕ 31 ಮಾರ್ಚ್ 2026 ರವರೆಗೆ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಆಸಕ್ತಿ ಇರುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಲು ಬೇಕಾಗುವ ದಾಖಲಾತಿಗಳು (New Ration Card)..?
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಮೊಬೈಲ್ ಸಂಖ್ಯೆ
- ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ರೇಷನ್ ಕಾರ್ಡ್ (ತಿದ್ದುಪಡಿ ಮಾಡಲು)
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು
Sukanya Samriddhi Yojane – ಸುಕನ್ಯಾ ಸಮೃದ್ಧಿ ಯೋಜನೆ.! ಪೋಸ್ಟ್ ಆಫೀಸ್ ವತಿಯಿಂದ ಹೊಸ ಬಡ್ಡಿ ದರ ಪ್ರಕಟಣೆ
3 thoughts on “New Ration Card – ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ನೀಡಿದ ಕೆ. ಹೆಚ್. ಮುನಿಯಪ್ಪ”