ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ.! ಅರ್ಜಿ ಸಲ್ಲಿಸಲು ಈ ದಾಖಲೆಗಳು ಬೇಕು.?

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ.! ಅರ್ಜಿ ಸಲ್ಲಿಸಲು ಈ ದಾಖಲೆಗಳು ಬೇಕು.?

ನಮಸ್ಕಾರ ಗೆಳೆಯರೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಕಾಯುತ್ತಿದ್ದವರಿಗೆ ಇದೀಗ ರಾಜ್ಯ ಸರ್ಕಾರ ಕಡೆಯಿಂದ ಸಿಹಿ ಸುದ್ದಿ.! ಹೌದು ಗೆಳೆಯರೇ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾಗಿದೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೂಡ ಜನರಿಗೆ ಅವಕಾಶ ಮಾಡಿಕೊಡಲಾಗಿದೆ.

ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಹಾಗೂ ಅರ್ಜಿ ಸಲ್ಲಿಸಲು ಇರುವ ಸಮಯ ಯಾವುದು? ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

 

ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ..?

ಹೌದು ಗೆಳೆಯರೇ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಅರ್ಜಿ ಹಾಕಲು ನಿನ್ನೆ ಅಂದರೆ 09 ಅಕ್ಟೋಬರ್ 2025 ರಂದು ಮಧ್ಯಾಹ್ನ 12 ಗಂಟೆಯಿಂದ 3:00 ವರೆಗೆ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು ಅದೇ ರೀತಿ ಇಂದು ಕೂಡ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆವರೆಗೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗಾಗಿ ಆಸಕ್ತಿ ಇರುವವರು ಬೇಗ ನಿಮ್ಮ ಹತ್ತಿರದ ಗ್ರಾಮ್ ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು

ಹೊಸ ರೇಷನ್ ಕಾರ್ಡ್ ಅರ್ಜಿ
ಹೊಸ ರೇಷನ್ ಕಾರ್ಡ್ ಅರ್ಜಿ

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಕಳೆದ ನಾಲ್ಕು ದಿನಗಳಿಂದ ಮಧ್ಯಾಹ್ನದ ನಂತರ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಹಾಗಾಗಿ ಯಾವುದೇ ರೀತಿ ಕೊನೆಯ ದಿನಾಂಕ ನಿಗದಿ ಮಾಡಿಲ್ಲ ಒಂದು ಮಾಹಿತಿಯ ಪ್ರಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಅಕ್ಟೋಬರ್ 2025 ರವರೆಗೆ ನಿಗದಿ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ..

ಅಧಿಕೃತ ಜಾಲತಾಣದ ಪ್ರಕಾರ ದಿನಾಂಕ 4 ಅಕ್ಟೋಬರ್ 2025 ರಿಂದ ದಿನಾಂಕ 31 ಮಾರ್ಚ್ 2026 ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ ಎಂದು ಮಾಹಿತಿ ತೋರಿಸುತ್ತಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ

ಹೊಸ ರೇಷನ್ ಕಾರ್ಡ್ ಅರ್ಜಿ
ಹೊಸ ರೇಷನ್ ಕಾರ್ಡ್ ಅರ್ಜಿ

 

ಸ್ನೇಹಿತರೆ ಮೇಲೆ ತಿಳಿಸಿದಂತೆ ಕೊನೆಯ ದಿನಾಂಕ ಇನ್ನು ತುಂಬಾ ದೂರವಿದೆ ಆದರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಕೆಲವೇ ಗಂಟೆಗಳು ಅಥವಾ ಕೆಲವೇ ಸಮಯ ಅವಕಾಶ ಮಾಡಿಕೊಡಲಾಗುತ್ತದೆ.

ಹಾಗಾಗಿ ಆಸಕ್ತಿ ಇರುವವರು ಬೇಗ ನಿಮ್ಮ ಹತ್ತಿರದ ಗ್ರಾಮ್ ಒನ್ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

ಸ್ನೇಹಿತರ ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಕೆ ಮಾಡಲು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಅವಕಾಶವಿರುತ್ತದೆ ಹಾಗಾಗಿ ಅಲ್ಲಿ ಕೇಳಿದ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಭರ್ತಿ ಮಾಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮಾಡಬಹುದು

 

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ವಿಸ್ತರಣೆ..?

ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಇದೀಗ ಸುದೀರ್ಘವಾಗಿ ಮತ್ತೆ ಅವಕಾಶ ನೀಡಿದೆ. ಹೌದು ಸ್ನೇಹಿತರೆ, ರೇಷನ್ ಕಾರ್ಡ್ ನಲ್ಲಿ ಹೊಸ ಕುಟುಂಬದ ಸದಸ್ಯರ ಸೇರ್ಪಡೆ ಹಾಗೂ ಸದಸ್ಯರನ್ನು ತೆಗೆದುಹಾಕುವುದು ಮತ್ತು ವಿಳಾಸ ಬದಲಾವಣೆ ಮತ್ತು ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಹಾಗೂ ekyc ಪೂರ್ಣಗೊಳಿಸಲು ಅವಕಾಶ ಮಾಡಿಕೊಡಲಾಗಿದೆ.

ಹಾಗಾಗಿ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿ ತಿದ್ದುಪಡಿ ಮಾಡಲು ಬಯಸಿದರೆ ನೀವು ಕೂಡಲೇ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ತಿದ್ದುಪಡಿ ಮಾಡಿಸಬಹುದು

ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ದಿನಾಂಕ 31 ಮಾರ್ಚ್ 2026 ರವರೆಗೆ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಅಥವಾ ಯಾವುದೇ ರೀತಿ ಬದಲಾವಣೆ ಮಾಡಬಹುದು

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇ- ಶ್ರಮ್ ಕಾರ್ಡ್ (ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು)
  • ಮೊಬೈಲ್ ಸಂಖ್ಯೆ
  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್ (ತಿದ್ದುಪಡಿ ಮಾಡಲು)
  • ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
  • ಇತರೆ ಅಗತ್ಯ ದಾಖಲಾತಿಗಳು

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ನಿಮ್ಮ ಸ್ನೇಹಿತರಿಗೆ ಮತ್ತು ಕುಟುಂಬದ ಸದಸ್ಯರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು

ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು

New Ration Card – ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ನೀಡಿದ ಕೆ. ಹೆಚ್. ಮುನಿಯಪ್ಪ

 

Leave a Comment

?>