ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್: ತುಟ್ಟಿಭತ್ಯೆ ಹೆಚ್ಚಳ ಅನುಮೋದನೆ – ಸಿಎಂ ಸಿದ್ದರಾಮಯ್ಯ
ನಮಸ್ಕಾರ ಗೆಳೆಯರೇ ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರಿ ನೌಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಂಪರ್ ಗಿಫ್ಟ್ ನೀಡಿದ್ದಾರೆ. ಹೌದು ಗೆಳೆಯರೇ ಸರ್ಕಾರಿ ನೌಕರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಹೊಸ ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಸಂಪೂರ್ಣ ವಿಷಯದ ಬಗ್ಗೆ ಮಾಹಿತಿ ತಿಳಿದುಕೊಳ್ಳುವ
ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್..?
ಹೌದು ಗೆಳೆಯರೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಕಾರಿ ನೌಕರರ ತುಟ್ಟಿ ಭತ್ಯೆ ಶೇಕಡ 2 ರಷ್ಟು ಹೆಚ್ಚು ಮಾಡಲು ಇದೀಗ ಮುಂದಾಗಿದ್ದಾರೆ. ಈ ಹೆಚ್ಚಳವು 01 ಜುಲೈ 2025 ರಿಂದ ಪೂರ್ವನ್ವಯವಾಗಲಿದೆ, ಹಾಗಾಗಿ ಇನ್ನು ಕೆಲವೇ ದಿನಗಳಲ್ಲಿ ಅಧಿಕೃತ ಆದೇಶ ಹೊರ ಬೀಳಲಿದೆ ಎಂದು ಮಾಹಿತಿ ಉಲ್ಲೇಖಿಸಿ ರಾಜ್ಯ ಸರಕಾರಿ ನೌಕರರ ಸಂಘ ಮಾಹಿತಿ ಹಂಚಿಕೊಂಡಿದೆ.

ಇದರ ಬಗ್ಗೆ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಸರಕಾರಿ ನೌಕರರಿಗೆ ಶೇಕಡ 2 ರಷ್ಟು (DA) ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಮತ್ತು ಇದಕ್ಕೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಕಡತಕ್ಕೆ ಅನುಮೋದನೆ ನೀಡಿದ್ದಾರೆ..
ಅಧಿಕೃತ ಆದೇಶವು ಇನ್ನು ಎರಡು ದಿನಗಳ ಒಳಗಡೆ ಹೊರಬೀಳಲಿದೆ ಹಾಗೂ ಈ ಆದೇಶವು 1 ಜುಲೈ 2025 ರ ಪೂರ್ವ ಅನ್ವಯವಾಗುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗುತ್ತದೆ.
ಸರ್ಕಾರದ ಈ ನಿರ್ಧಾರವು ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ C.S ಷಾಢಕ್ಷರಿ ಸ್ವಾಗತ ಮಾಡಿದ್ದಾರೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು
ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಭೇಟಿ ನೀಡಬಹುದು
Bele Parihara 2025 : ಬೆಳೆ ಪರಿಹಾರ ಹಣ ಯಾವಾಗ ಬಿಡುಗಡೆಯಾಗುತ್ತೆ, ಎಷ್ಟು ಹಣ ರೈತರಿಗೆ ಸಿಗುತ್ತೆ