ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆ: ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 8850 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ಸರ್ಕಾರಿ ಉದ್ಯೋಗ ಮಾಡಲು ಬಯಸುವವರಿಗೆ ಇದೀಗ ಕೇಂದ್ರ ರೈಲ್ವೆ ಇಲಾಖೆ ವತಿಯಿಂದ ಸುವರ್ಣ ಅವಕಾಶ. ಹೌದು ಸ್ನೇಹಿತರೆ ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆ (ಆರ್‌ಆರ್‌ಬಿ) ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ,
ಹೌದು ಗೆಳೆಯರೇ, ಭಾರತೀಯ ರೈಲ್ವೆ ಇಲಾಖೆ ಇದೀಗ ಸರಿಸುಮಾರು 8850 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸದಾಗಿ ಅರ್ಜಿ ಆಹ್ವಾನ ಮಾಡಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಪಿಯುಸಿ ಹಾಗೂ ಪದವಿ ಮುಗಿಸಿದರೆ ಸಾಕು ಅರ್ಜಿ ಸಲ್ಲಿಸಬಹುದು, ಹಾಗಾಗಿ ನಾವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ
ರೈಲ್ವೆ ನೇಮಕಾತಿ ಮಂಡಳಿ ಹೊಸ ಅಧಿಸೂಚನೆ..?
ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಸುಮಾರು 8850 ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು 20 ನವೆಂಬರ್ 2025ರ ಒಳಗಡೆ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಪಿಯುಸಿ ಪಾಸಾದ ಅಭ್ಯರ್ಥಿಗಳು 27 ನವೆಂಬರ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ಖಾಲಿ ಹುದ್ದೆಗಳ ನೇಮಕಾತಿ ವಿವರ [ರೈಲ್ವೆ ನೇಮಕಾತಿ ಮಂಡಳಿ ಪರೀಕ್ಷೆ (ಆರ್‌ಆರ್‌ಬಿ)]..?
ನೇಮಕಾತಿ ಸಂಸ್ಥೆ: ಭಾರತೀಯ ರೈಲ್ವೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ: 8,850 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20/11/2025 (ಪದವಿ)
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 27/11/2025 (ಪಿಯುಸಿ)
ಖಾಲಿ ಹುದ್ದೆಗಳ ವಿವರ:
- ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ: 3058 ಹುದ್ದೆಗಳು
- ಪದವಿ ಪಾಸಾದ ಅಭ್ಯರ್ಥಿಗಳಿಗೆ: 5817 ಹುದ್ದೆಗಳು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RRB Recruitment 2025 eligibility criteria).?
ಶೈಕ್ಷಣಿಕ ಅರ್ಹತೆ: ಹೌದು ಗೆಳೆಯರ ಭಾರತೀಯ ರೈಲ್ವೆ ನೇಮಕಾತಿ ಆರ್ ಆರ್ ಬಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಪಿಯುಸಿ ಹಾಗೂ ಪದವಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು
ಸಂಬಳ ಎಷ್ಟು:
1) ಸ್ಟೇಷನ್ ಮಾಸ್ಟರ್ ಹಾಗೂ ಮುಖ್ಯ ವಾಣಿಜ್ಯ ಮೇಲ್ವಿಚಾರಕರ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹35,400 ವರೆಗೆ ಸಂಬಳ ಸಿಗಲಿದೆ.
2) ಸಂಚಾರ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹25,500 ವರೆಗೆ ಸಂಬಳ ಸಿಗಲಿದೆ
3) ಹಿರಿಯ ಗುಮಾಸ್ತ ಕಮ್ ಟೈಪ್ ಇಷ್ಟು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹29,200 ವರೆಗೆ ಸಂಬಳ ಸಿಗಲಿದೆ
4) ವಾಣಿಜ್ಯ ಮತ್ತು ಟಿಕೆಟ್ ಗುಮಾಸ್ತ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ₹21,700 ವರೆಗೆ ಸಂಬಳ ಸಿಗಲಿದೆ
5) ಕಿರಿಯ ಗುಮಾಸ್ತ ಕಮ್ ಟೈಪಿಸ್ಟ್ ಹುದ್ದೆಗಳಿಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ ₹19,900 ವರೆಗೆ ಸಂಬಳ ಸಿಗಲಿದೆ
ವಯೋಮಿತಿ ಎಷ್ಟು: ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಪದವಿದಾರರಿಗೆ 18 ವರ್ಷದಿಂದ 33 ವರ್ಷದ ಒಳಗಡೆ ಇರಬೇಕು ಹಾಗೂ ಪಿಯುಸಿ ಪಾಸಾದವರಿಗೆ 18 ವರ್ಷದಿಂದ 30 ವರ್ಷದ ಒಳಗಡೆ ಇರಬೇಕು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಶುಲ್ಕ (application fees for RRB Recruitment 2025).?
ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 8,850 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರು OBC & EWS ಅಭ್ಯರ್ಥಿಗಳಿಗೆ ₹500 ವರೆಗೆ ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳಾ, ದಿವ್ಯಾಂಗ, ಮಾಜಿ ಸೈನಿಕ, ಅಭ್ಯರ್ಥಿಗಳಿಗೆ ₹250 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಪಾವತಿಸಿದ ಸುಂಕದ ಒಂದು ಭಾಗ ಮರುಪಾವತಿ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (How To Apply online for RRB Recruitment 2025).?
ಹೌದು ಗೆಳೆಯರೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 8850 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ಡೌನ್ಲೋಡ್ ಮಾಡಲು:
ಸ್ನೇಹಿತರೆ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು
ರಾಜ್ಯ ಸರಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್: ತುಟ್ಟಿಭತ್ಯೆ ಹೆಚ್ಚಳ ಅನುಮೋದನೆ – ಸಿಎಂ ಸಿದ್ದರಾಮಯ್ಯ









