ಪ್ರಸೂತಿ ಆರೈಕೆ ಯೋಜನೆ: ₹3000 ವರೆಗೆ ಆರ್ಥಿಕ ನೆರವು ಸಿಗುತ್ತೆ .! ಇಲ್ಲಿದೆ ಮಾಹಿತಿ ನೋಡಿ
ನಮಸ್ಕಾರ ಗೆಳೆಯರೇ ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸೂತಿ ಆರೈಕೆ ಯೋಜನೆ ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಬರೋಬ್ಬರಿ 3000 ವರೆಗೆ ಮಹಿಳೆಯರು ಸಹಾಯ ಧನ ಪಡೆಯಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಯೋಜನೆ ಕುರಿತು ಮಾಹಿತಿ ತಿಳಿದುಕೊಳ್ಳೋಣ

ಏನಿದು ಪ್ರಸೂತಿ ಆರೈಕೆ ಯೋಜನೆ.?
ಸ್ನೇಹಿತರೆ ಇದು ಕರ್ನಾಟಕ ರಾಜ್ಯ ಸರ್ಕಾರ 2007 ವರ್ಷದಲ್ಲಿ ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ಹೆರಿಗೆಯ ಸಂದರ್ಭದಲ್ಲಿ ಸಾಮಾನ್ಯ ವರ್ಗಕ್ಕೆ ರೂ.2000 ವರೆಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ಮಹಿಳೆಯರಿಗೆ 3000 ವರೆಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ.
ಹೌದು ಗೆಳೆಯರೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಈ ಒಂದು ಯೋಜನೆ ಜಾರಿಗೆ ತಂದಿದ್ದು ಈ ಯೋಜನೆ ಮೂಲಕ ಮಹಿಳೆಯರು ಹೆರಿಗೆಯ ಸಂದರ್ಭದಲ್ಲಿ ಸರ್ಕಾರದಿಂದ 3000 ವರೆಗೆ ಆರ್ಥಿಕ ನೆರವು ಪಡೆಯಬಹುದು
ಹಣ ಪಾವತಿ ಹೇಗೆ ಮಾಡಲಾಗುತ್ತದೆ.?
ಸ್ನೇಹಿತರೆ ಈ ಒಂದು ಯೋಜನೆಯ ಮೂಲಕ ಫಲಾನುಭವಿಗಳಿಗೆ ಎರಡು ಹಂತದಲ್ಲಿ ಆರ್ಥಿಕ ನೆರವು ಒದಗಿಸಲಾಗುತ್ತದೆ.
ಮೊದಲ ಹಂತದಲ್ಲಿ ಫಲಾನುಭವಿ ಗರ್ಭಧಾರಣೆಯಾದ ಎರಡನೇ ತ್ರೈ ಮಾಸಿಕ ಅವಧಿಯಲ್ಲಿ ಅಂದರೆ 13 ರಿಂದ 28 ವಾರಗಳ ನಡುವೆ ಈ ಒಂದು ಯೋಚನೆಯ ಮೂಲಕ ಮೊದಲನೇ ಕಂತಿನ ಬಿಡುಗಡೆ ಮಾಡಲಾಗುತ್ತದೆ
ಎರಡನೇ ಕಂತು ಸರಕಾರಿ ಆಸ್ಪತ್ರೆಗಳಲ್ಲಿ ಹೆರಿಗೆಯಾದ ನಂತರ ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ಹಣ ನೀಡಲಾಗುತ್ತದೆ ಹಾಗಾಗಿ ಹಣ ಎಷ್ಟು ಸಿಗುತ್ತದೆ ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
- ಸಾಮಾನ್ಯ ವರ್ಗಕ್ಕೆ ಸೇರಿದ ಮಹಿಳೆಯರಿಗೆ ರೂ. 2000 ವರೆಗೆ ಈ ಒಂದು ಯೋಜನೆಯ ಮೂಲಕ ಆರ್ಥಿಕ ನೆರವು ಪಡೆಯಬಹುದು
- ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವರ್ಗದ ಮಹಿಳೆಯರಿಗೆ 3000 ವರೆಗೆ ಈ ಒಂದು ಯೋಜನೆ ಮೂಲಕ ಆರ್ಥಿಕ ನೆರವು ಪಡೆಯಲು ಸಾಧ್ಯವಿದೆ
ಈ ಒಂದು ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತಮಾನದಂಡಗಳು..?
ಸ್ನೇಹಿತರೆ ಈ ಒಂದು ಯೋಜನೆಗೆ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ಮಹಿಳೆಯರು ಅರ್ಜಿ ಸಲ್ಲಿಸಲು ಅವಕಾಶವಿದೆ ಇದರ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಈ ಒಂದು ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತಮಾನದಂಡಗಳು ನೀಡಲಾಗಿದ್ದು ಇದಕ್ಕೆ ಸಂಬಂಧಿಸಿದ ವಿವರಗಳನ್ನು ನಾವು ಕೆಳಗಡೆ ತಿಳಿಸಿದ್ದೇವೆ
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
- ಈ ಯೋಜನೆಯ ಲಾಭ ಪಡೆಯಲು ಮಹಿಳೆಯರು ಗರ್ಭವತಿ ಅಥವಾ ಹಾಲುಣಿಸುವ ತಾಯಂದಿರಾಗಿರಬೇಕು
- ಈ ಒಂದು ಯೋಜನೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಅರ್ಜಿ ಸಲ್ಲಿಸಲು ಅವಕಾಶವಿದೆ
- ಈ ಒಂದು ಯೋಜನೆ ಲಾಭ ಪಡೆಯಬೇಕಾದರೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಆಗಬೇಕು
- ಈ ಯೋಜನೆ ಲಾಭ ಪಡೆಯಲು ಅರ್ಜಿದಾರರು ಕಡ್ಡಾಯವಾಗಿ ಬಿಬಿಎಂ ರೇಷನ್ ಕಾರ್ಡ್ ಹೊಂದಿರಬೇಕು
ಅರ್ಜಿ ಸಲ್ಲಿಸಬೇಕಾಗುವ ಅಗತ್ಯ ದಾಖಲಾತಿಗಳ ವಿವರ.?
- ಅರ್ಜಿದಾರ ವಾಸ ಸ್ಥಳ ಪ್ರಮಾಣ ಪತ್ರ
- ಅರ್ಜಿದಾರ ಬಿಪಿಎಲ್ ರೇಷನ್ ಕಾರ್ಡ್ ಪ್ರತಿ
- ಅರ್ಜಿದಾರ ಆಧಾರ್ ಕಾರ್ಡ್ ನಂಬರ್
- ಅರ್ಜಿದಾರ ತಾಯಿ ಕಾರ್ಡ್ ಅಥವಾ ANC ನೋಂದಣಿ ನಂಬರ್
- ಅರ್ಜಿದಾರ ಬ್ಯಾಂಕ್ ಖಾತೆಯ ವಿವರಗಳು
- ಮೊಬೈಲ್ ನಂಬರ್
- ಅರ್ಜಿದಾರ ಜಾತಿ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
ಯಾವ ರೀತಿ ಅರ್ಜಿ ಸಲ್ಲಿಸಬೇಕು..?
ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ನಿಮ್ಮ ಹತ್ತಿರದ ಸರಕಾರಿ ಆಸ್ಪತ್ರೆ ಅಥವಾ ನಿಮ್ಮ ಗ್ರಾಮದ ಆಶಾ ಕಾರ್ಯಕರ್ತರನ್ನು ಭೇಟಿ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಯೋಜನೆ ಮೂಲಕ ಲಾಭ ಪಡೆಯಲು ಎಲ್ಲಾ ಅಗತ್ಯ ದಾಖಲಾತಿಗಳು ಮತ್ತು ತಪಾಸಣೆ ಮಾಡಿಸಿ ದಾಖಲಾತಿಗಳನ್ನು ಒದಗಿಸಿ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಗ್ರಾಮದ ಅಂಗನವಾಡಿ ಆಶಾ ಕಾರ್ಯಕರ್ತರನ್ನು ಭೇಟಿ ಮಾಡಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು









