ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 4232 ಹುದ್ದೆಗಳ ನೇಮಕಾತಿ ಪ್ರಾರಂಭ.! 10Th, ITI ಪಾಸಾದವರು ಅರ್ಜಿ ಸಲ್ಲಿಸಿ.!

ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 4232 ಹುದ್ದೆಗಳ ನೇಮಕಾತಿ ಪ್ರಾರಂಭ.! 10Th, ITI ಪಾಸಾದವರು ಅರ್ಜಿ ಸಲ್ಲಿಸಿ.! south central railway recruitment 2025

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಎಸ್ ಎಸ್ ಎಲ್ ಸಿ ಮತ್ತು ಐಟಿಐ ಪಾಸಾದಂತ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ, ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 4232 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಈ ಒಂದು ಲೇಖನೆಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳನ್ನು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಸಿಗುತ್ತಿದೆ 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಇಲ್ಲಿದೆ ವಿವರ

 

ರೈಲ್ವೆ ಇಲಾಖೆ ಹೊಸ ನೇಮಕಾತಿ (south central railway recruitment 2025)..?

ಹೌದು ಸ್ನೇಹಿತರೆ, ದಕ್ಷಿಣ ಮಧ್ಯ ರೈಲ್ವೆ ಇಲಾಖೆ ಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿತ್ತು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಯಾವುದೇ ಪರೀಕ್ಷೆ ಇರುವುದಿಲ್ಲ ಮತ್ತು ನೇರ ನೇಮಕಾತಿ ಇರುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಹುದ್ದೆಗಳ ಲಾಭ ಪಡೆದುಕೊಳ್ಳಿ.!

south central railway recruitment 2025
south central railway recruitment 2025

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ದಕ್ಷಿಣ ಮಧ್ಯ ರೈಲ್ವೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ ಮತ್ತು ಈ ಹುದ್ದೆಗಳು ತರಬೇತಿದಾರರ ಹುದ್ದೆಗಳಾಗಿದ್ದು ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಹಾಗಾಗಿ ಎಸ್ ಎಸ್ ಎಲ್ ಸಿ ಮತ್ತು ಐಟಿಐ ಪಾಸಾದಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

ಹುದ್ದೆಗಳ ವಿವರ (south central railway recruitment 2025)..?

ನೇಮಕಾತಿ ಸಂಸ್ಥೆ:- ದಕ್ಷಿಣ ಮಧ್ಯ ರೈಲ್ವೆ ಇಲಾಖೆ

ಒಟ್ಟು ಹುದ್ದೆಗಳು:- 4232 ಹುದ್ದೆಗಳು

ಹುದ್ದಗಳ ಹೆಸರು:- ಆಕ್ಟ್ ಅಪ್ರೆಂಟಿಸ್ ಹುದ್ದೆಗಳು

ಉದ್ಯೋಗ ಸ್ಥಳ:- ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ

WhatsApp Group Join Now
Telegram Group Join Now       

ಅರ್ಜಿ ಪ್ರಾರಂಭ ದಿನಾಂಕ:- 28/12/2024

ಅರ್ಜಿ ಕೊನೆಯ ದಿನಾಂಕ:- 27/01/2025

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರ ದಕ್ಷಿಣ ಮಧ್ಯೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಅಪ್ರಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 50ರಷ್ಟು ಅಂಕ ತೆಗೆದುಕೊಂಡು ಪಾಸ್ ಆಗಿರಬೇಕು ಮತ್ತು ಐಟಿಐ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ವಯೋಮಿತಿ:- ಸ್ನೇಹಿತರ ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಅಪ್ರಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 24 ವರ್ಷದ ವಯೋಮಿತಿ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಇರುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನೀವು ಅಧಿಕೃತ ಅರ್ಜಿ ಸೂಚನೆ ಡೌನ್ಲೋಡ್ ಮಾಡಿಕೊಂಡು ನೋಡಿ

ಅರ್ಜಿ ಶುಲ್ಕ:- ಸ್ನೇಹಿತರ ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಅಪ್ರಂಟೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ವರ್ಗ/ಹಿಂದುಳಿದ ವರ್ಗ/ಇತರ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆಯ ಪ್ರಕ್ರಿಯೆ:- ಸ್ನೇಹಿತರ ದಕ್ಷಿಣ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಅಪ್ರಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಗಳಿಸಿದ ಶೇಕಡ 50ರಷ್ಟು ಅಂಕಗಳ ಹಾಗೂ ITI ನಲ್ಲಿ ಗಳಿಸಿದ ಶೇಕಡ 50ರಷ್ಟು ಅಂಕಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲು ಪರಿಗಣಿಸಲಾಗುತ್ತದೆ ಮತ್ತು ಈ ಹುದ್ದೆಗಳಿಗೆ ನೇರ ನೇಮಕಾತಿ ಇರುವುದರಿಂದ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹಾಗೂ ನಂತರ ದಾಖಲಾತಿ ಪರಿಶೀಲನೆ, ಸಂದರ್ಶನ, ವೈದ್ಯಕೀಯ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಆಯ್ಕೆ ಮಾಡಲಾಗುತ್ತದೆ

ಸಂಬಳ ಎಷ್ಟು.:– ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8,000 ಯಿಂದ ರೂ.15,000 ವರೆಗೆ ಸಂಬಳ ನೀಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ದಕ್ಷಿಣ ಮಧ್ಯೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಕ್ಷಿಣ ಕೇಂದ್ರ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://onlineregister.org.in/instructions.php

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಸರಕಾರದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿ ಪಡೆಯಲು  ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು

Leave a Comment