Anganwadi Recruitment 2025-26 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಅರ್ಜಿ ಸಲ್ಲಿಸಿ

Anganwadi Recruitment 2025-26 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಹತ್ತನೇ ತರಗತಿ ಪಾಸಾದಂತ ಮಹಿಳೆಯರಿಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ನಾವು ಈ ಹುದ್ದೆಗಳ ಅರ್ಜಿ ಸಲ್ಲಿಕೆಯ ಬಗ್ಗೆ ಸಂಪೂರ್ಣ ವಿವರ ತಿಳಿದುಕೊಳ್ಳೋಣ

 

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ (Anganwadi Recruitment 2025-26).?

ಹೌದು ಗೆಳೆಯರೇ ಉಡುಪಿ ಜಿಲ್ಲೆಯಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವಂತ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಸುಮಾರು 147 ಹುದ್ದೆಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 277 ಹುದ್ದೆಗಳು ಖಾಲಿ ಇವೆ.!

Anganwadi Recruitment 2025-26
Anganwadi Recruitment 2025-26

 

ಹೌದು ಸ್ನೇಹಿತರೆ ಒಟ್ಟು 424 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು..!

WhatsApp Group Join Now
Telegram Group Join Now       

ಉಡುಪಿ ಜಿಲ್ಲೆಯಲ್ಲಿ ಕುಂದಾಪುರ, ಬ್ರಹ್ಮಾವರ, ಕರ್ಕಳ ಮತ್ತು ಇತರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಗೆ ಒಳಪಡುವ ಅಂಗನವಾಡಿ ಕಾರ್ಯಕರ್ತೆ ಸುಮಾರು 16 ಹುದ್ದೆಗಳು ಖಾಲಿ ಇವೆ ಹಾಗೂ 131 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ 277 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

 

ಖಾಲಿ ಹುದ್ದೆಗಳ ನೇಮಕಾತಿ ವಿವರ (Anganwadi Recruitment 2025-26 notification).?

ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ

ಒಟ್ಟು ಕಾಲಿ ಹುದ್ದೆಗಳ ಸಂಖ್ಯೆ:- 424 ಹುದ್ದೆಗಳು

ಹುದ್ದೆಗಳ ಹೆಸರು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು

ಉದ್ಯೋಗ ಸ್ಥಳ:- ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆ

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಪ್ರಾರಂಭ ದಿನಾಂಕ:- 02 ಸೆಪ್ಟೆಂಬರ್ 2025

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 10 ಅಕ್ಟೋಬರ್ 2025

ಜಿಲ್ಲಾವಾರು ಹುದ್ದೆಗಳ ವಿವರ:-

ಉಡುಪಿ ಜಿಲ್ಲೆ

1) ಅಂಗನವಾಡಿ ಕಾರ್ಯಕರ್ತೆ :- 16 ಹುದ್ದೆಗಳು

2) ಅಂಗನವಾಡಿ ಸಹಾಯಕಿ:- 131 ಹುದ್ದೆಗಳು

ದಕ್ಷಿಣ ಕನ್ನಡ ಜಿಲ್ಲೆ

1) ಅಂಗನವಾಡಿ ಕಾರ್ಯಕರ್ತೆ:- 56 ಹುದ್ದೆಗಳು

2) ಅಂಗನವಾಡಿ ಸಹಾಯಕಿ:- 221 ಹುದ್ದೆಗಳು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Apply eligibility for Anganwadi Recruitment 2025-26).?

ವಿದ್ಯಾರ್ಹತೆ:- ಸ್ನೇಹಿತರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಅಧಿಕೃತ ಅಧಿಸೂಚನೆ ಪ್ರಕಾರ 12ನೇ ತರಗತಿ ಪಾಸ್ ಆಗಿರಬೇಕು ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 10ನೇ ತರಗತಿ ಪಾಸ್ ಆಗಿರಬೇಕು ಅಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು

ವಯೋಮಿತಿ ಎಷ್ಟು:- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿದಾರರು ಕನಿಷ್ಠ 19 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರಗಳ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದ್ದು ಗರಿಷ್ಠ ವಯೋಮಿತಿ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹಾಗಾಗಿ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ

ಸಂಬಳ ಎಷ್ಟು:- ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾದ ಮಹಿಳೆಯರಿಗೆ ನೇಮಕಾತಿ ಅಧಿಸೂಚನೆ ಪ್ರಕಾರ ಕನಿಷ್ಠ 8000 ಇಂದ ಗರಿಷ್ಠ 12,000 ವರೆಗೆ ಸಂಬಳ ನೀಡಲಾಗುತ್ತದೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದ ಮಹಿಳೆಯರಿಗೆ ಕನಿಷ್ಠ ₹4,000 ಗರಿಷ್ಠ 6000 ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿಕೊಳ್ಳಿ

ಆಯ್ಕೆ ವಿಧಾನ:- ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮಹಿಳೆಯರನ್ನು ಮೆರಿಟ್ ಆಧಾರದ ಮೇಲೆ ಅಂದರೆ ಯಾರು ಅತಿ ಹೆಚ್ಚು ಅಂಕ ಗಳಿಸಿರುತ್ತಾರೆ. ಅಂಥವರ ಪಟ್ಟಿ ತಯಾರು ಮಾಡಿ ನಂತರ ಮೀಸಲಾತಿ ಆಧಾರಗಳ ಮೇಲೆ ಹಾಗೂ ಇತರ ಆಧಾರಗಳ ಮೇಲೆ ಈ ಹುದ್ದೆಗಳಿಗೆ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (How To Apply for Anganwadi Recruitment 2025-26).?

ಸ್ನೇಹಿತರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದಾರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಓದಿಕೊಳ್ಳಿ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು ಆಸಕ್ತಿ ಇದೆಯಾ ಹಾಗಾದರೆ ನೀವು

ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು

IOCL Recruitment 2025 – ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ .! ತಿಂಗಳಿಗೆ ₹30,000 ರಿಂದ ಸಂಬಳ ಪ್ರಾರಂಭ

Leave a Comment

?>