Bajaj Scholarship – ಬಜಾಜ್ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಸಿಗಲಿದೆ 8 ಲಕ್ಷದವರೆಗೆ ವಿದ್ಯಾರ್ಥಿವೇತನ!
ನಮಸ್ಕಾರ ಗೆಳೆಯರೇ ಬಜಾಜ್ ಆಟೋ ಲಿಮಿಟೆಡ್ ವತಿಯಿಂದ ಇದೀಗ CSR ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಬರೋಬ್ಬರಿ ಎಂಟು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಅರ್ಜಿ ಸಲ್ಲಿಕೆ ಮಾಡಲು ಬೇಕಾಗುವ ಲಿಂಕ್ ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳೋಣ
ಬಜಾಜ್ ವಿದ್ಯಾರ್ಥಿವೇತನ 2025 (Bajaj Scholarship).?
ಹೌದು ಗೆಳೆಯರೇ ಬಜಾಜ್ ಆಟೋ ಲಿಮಿಟೆಡ್ ಇದೀಗ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶೈಕ್ಷಣಿಕ ಖರ್ಚು ವೆಚ್ಚಗಳನ್ನು ಸರಿದೂಗಿಸಲು CSR ಯೋಜನೆಯ ಮೂಲಕ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ವರ್ಷದಲ್ಲಿ ಕಾಲೇಜು ಪ್ರವೇಶ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಬರೋಬ್ಬರಿ 8 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ..

ಹೌದು ಗೆಳೆಯರೇ ರೂಪ ರಾಹುಲ್ ಬಜಾಜ್ ಮಹಿಳಾ ಎಂಜಿನಿಯರಿಂಗ್ ಸ್ಕಾಲರ್ಶಿಪ್ (engineering scholarship) ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಬೆಂಬಲ ನೀಡುವುದು ಹಾಗೂ ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವುದು ಹಾಗೂ ಪ್ರತಿಭಾವಾನ್ವಿತ ಮಹಿಳೆಯರಿಗೆ ಕಂಪನಿ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಕೆ ಮಾಡಿ
ಬಜಾಜ್ ಆಟೋ ಲಿಮಿಟೆಡ್ (Bajaj auto limited).?
ಸ್ನೇಹಿತರ ಬಜಾಜ್ ಆಟೋ ಲಿಮಿಟೆಡ್ ಇದು ಸುಮಾರು 70 ದೇಶಗಳಿಗಿಂತ ಹೆಚ್ಚಿನ ದೇಶಗಳಲ್ಲಿ ತನ್ನ ಸಂಸ್ಥೆ ಹೊಂದಿದೆ ಹಾಗೂ 18 ಮಿಲಿಯನ್ ಗಿಂತ ಹೆಚ್ಚು ಮೋಟರ್ ಸೈಕಲ್ ಗಳನ್ನು ಮಾರಾಟ ಮಾಡುವುದರೊಂದಿಗೆ ಬಜಾಜ್ ಒಂದು ಪ್ರೀಮಿಯಂ ಬ್ರಾಂಡ್ ಆಗಿ ಹೊರಹೊಮ್ಮಿದೆ ಹಾಗೂ ವಿಶ್ವದ ನೆಚ್ಚಿನ ಭಾರತೀಯ ಬ್ರಾಂಡ್ ಆಗಿದೆ ಹಾಗೂ ಇದು ಭಾರತದ ಮೋಟಾರ್ ಸೈಕಲ್ ರಫ್ತುಗಳಲ್ಲಿ ನಂಬರ್ ಒನ್ ಸ್ಥಾನ ಹೊಂದಿದೆ ಹಾಗೂ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಜಾಜ್ ಬೈಕ್ಗಳಿಗೆ ವಿಪರೀತವಾದ ಡಿಮ್ಯಾಂಡ್ ಇದೆ ಹಾಗೂ ಅತಿ ಹೆಚ್ಚು ಬೈಕುಗಳನ್ನು ಮಾಡುತ್ತದೆ
ಅದೇ ರೀತಿ ಇದೀಗ ಈ ಸಂಸ್ಥೆ ತ್ರಿಚಕ್ರ ವಾಹನ ತಯಾರಿಕೆ ಕಂಪನಿ ಯಾಗಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದೆ ಹಾಗೂ ಈ ಬಜಾಜ್ ಆಟೋ ಲಿಮಿಟೆಡ್ ಸಂಸ್ಥೆ ಒಂದು ರಿಲಿಯನ್ ರೂಪಾಯಿಗಳ ಮಾರುಕಟ್ಟೆ ಬಂಡವಾಳೀಕರಣವನ್ನು ತಲುಪಿದೆ ಹಾಗಾಗಿ ವಿಶ್ವದ ಮೊದಲ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನದ ಕಂಪನಿಯಾಗಿದೆ. ಈ ಸಂಸ್ಥೆ ವಿದ್ಯಾರ್ಥಿಗಳಿಗೆ ಬಜಾಜ್ ಸ್ಕಾಲರ್ಶಿಪ್ ಯೋಜನೆಯ ಮೂಲಕ ಆರ್ಥಿಕ ನೆರವು ನೀಡುತ್ತಿದೆ
ಬಜಾಜ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ (Bajaj Scholarship Apply Last Date).?
ಸ್ನೇಹಿತರ ಬಜಾಜ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಹಾಗೂ ಪ್ರಾರಂಭ ದಿನಾಂಕ ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಪ್ರಾರಂಭ ದಿನಾಂಕ: 19/09/2025
ಅರ್ಜಿ ಕೊನೆಯ ದಿನಾಂಕ: 31-10-2025
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (Bajaj Scholarship Eligibility).?
ಪ್ರಸ್ತುತ ವರ್ಷದಲ್ಲಿ ಅಂದರೆ 2025 ಮತ್ತು 26 ನೇ ಸಾಲಿನಲ್ಲಿ ಪ್ರವೇಶ ಪಡೆದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಬಜಾಜ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಎಲೆಕ್ಟ್ರಿಕ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್, ಇಂಡಸ್ಟ್ರಿಯಲ್/ಪ್ರೊಡಕ್ಷನ್/ಸಂವಹನ, ಆಟೋಮೊಬೈಲ್, ಇನ್ಸ್ಟ್ರುಮೆಂಟೇಶನ್ ಮತ್ತು ಮೆಟೀರಿಯಲ್ ಸೈನ್ಸ್, ಮೆಟಲ್ ಅರ್ಜಿ ವಿಭಾಗದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಕೆ ಮಾಡಬಹುದು
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು (12ನೇ ತರಗತಿ) ಹಿಂದಿನ ತರಗತಿಯಲ್ಲಿ ಕನಿಷ್ಠ 75% ಗಿಂತ ಹೆಚ್ಚಿನ ಅಂಕ ಪಡೆದು ಪಾಸ್ ಆಗಿರಬೇಕು
ಎಷ್ಟು ಸ್ಕಾಲರ್ಶಿಪ್ ಹಣ ಸಿಗುತ್ತೆ (Bajaj Scholarship Amount).?
ಸ್ನೇಹಿತರೆ ಬಜಾಜ್ ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿನಿಯರು ವರ್ಷಕ್ಕೆ ಬರೋಬ್ಬರಿ 8 ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅವಕಾಶವಿರುತ್ತದೆ ಹಾಗಾಗಿ ಉನ್ನತ ಶಿಕ್ಷಣ ಪಡೆಯಲು ಬಯಸುವ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಬೇಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ (Bajaj Scholarship Application).?
ಸ್ನೇಹಿತರೆ ಬಜಾಜ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು ಮೊದಲು ಅಧಿಕೃತ (https://ruparahulbajajscholarship.bajajauto.co.in/) ವೆಬ್ಸೈಟ್ ಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ನಂತರ ನಾವು ಕೆಳಗಡೆ ನೀಡಿದ ಲಿಂಕ್ ನ ಮೂಲಕ ಕ್ಲಿಕ್ ಮಾಡಿ ಈ ವಿದ್ಯಾರ್ಥಿ ವೇತನಕ್ಕೆ ಅಥವಾ ಸ್ಕಾಲರ್ಶಿಪ್ ಯೋಜನೆಗೆ ಆನ್ಲೈನ್ ಮೂಲಕ ಕೊನೆಯ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Bajaj Scholarship Apply Documents).?
- ಹಿಂದಿನ ತರಗತಿಯ ಎಲ್ಲಾ ಅಂಕಪಟ್ಟಿಗಳು
- ಕಾಲೇಜು ಪ್ರವೇಶ ಪ್ರಮಾಣ ಪತ್ರ
- ಕಾಲೇಜು ಅರ್ಜಿ ಶುಲ್ಕದ ರಶೀದಿ
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಇತ್ತೀಚಿನ ಫೋಟೋಸ್
- ಮೊಬೈಲ್ ಸಂಖ್ಯೆ
- ಬ್ಯಾಂಕ್ ಪಾಸ್ ಬುಕ್
- ಇತರೆ ಅಗತ್ಯ ದಾಖಲಾತಿಗಳು
ಹೆಚ್ಚಿನ ಮಾಹಿತಿಗಾಗಿ ಈ ಸಹಾಯವಾಣಿಗೆ ಕರೆ ಮಾಡಿ..?
ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 6:00 ವರೆಗೆ ಸೋಮವಾರದಿಂದ ಶುಕ್ರವಾರದವರೆಗೆ ಕೆಳಗಡೆ ನೀಡಿದ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ತಿಳಿದುಕೊಳ್ಳಬಹುದು
Helpline Number: 011-40848860
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು
ಬೆಳೆ ಪರಿಹಾರ ಹಣ ಬಿಡುಗಡೆ: ಯಾವ ಜಮೀನಿಗೆ ಎಷ್ಟು ಪರಿಹಾರ ಸಿಗುತ್ತೆ.! ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ