BOB Recruitment 2025: ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ! ತಕ್ಷಣ ಖಾಲಿ ಹುದ್ದೆಗಳಿಗೆ ಈ ರೀತಿ ಅಪ್ಲೈ ಮಾಡಿ
ನಮಸ್ಕಾರ ಸ್ನೇಹಿತರೆ ಬ್ಯಾಂಕ್ ಆಫ್ ಬರೋಡ ಇದೀಗ ಲೋಕಲ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ, ಈ ಅಧಿಸೂಚನೆ ಪ್ರಕಾರ ಒಟ್ಟು 2500 ಹುದ್ದೆಗಳು ಖಾಲಿ ಇವೆ ಮತ್ತು ನಮ್ಮ ಕರ್ನಾಟಕದಲ್ಲಿ 450 ಹುದ್ದೆಗಳು ಖಾಲಿ ಇವೆ. ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಮುಂತಾದ ವಿವರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನೆಯನ್ನು ಆದಷ್ಟು ನಿರುದ್ಯೋಗಿಗಳಿಗೆ ಶೇರ್ ಮಾಡಿ
ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ ಅಧಿಸೂಚನೆ 2025..?
ಹೌದು ಸ್ನೇಹಿತರೆ ತುಂಬಾ ಜನರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂಬ ಆಸೆ ಇರುತ್ತದೆ ಅಂತವರಿಗೆ ಇದೀಗ ಭಾರತದ ಸಾರ್ವಜನಿಕ ಕ್ಷೇತ್ರಗಳಲ್ಲಿ ಒಂದಾದಂತ ಬ್ಯಾಂಕ್ ಆಫ್ ಬರೋಡ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ 2500 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.

ಹೌದು ಸ್ನೇಹಿತರೆ ಈ ಸಂಸ್ಥೆ ತನ್ನ ಬ್ಯಾಂಕಿನಲ್ಲಿ ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ, ಈ ಅಧಿಸೂಚನೆ ಪ್ರಕಾರ ಸ್ಥಳೀಯರಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಅಂದರೆ ಸ್ಥಳೀಯ ಭಾಷೆ ಹಾಗೂ ಸ್ಥಳೀಯ ಹಿನ್ನೆಲೆ ಮತ್ತು ಹುಟ್ಟಿದ ಊರಿನಲ್ಲಿ ಉದ್ಯೋಗ ಮಾಡಲು ಬಯಸುವಂತಹ ಜನರಿಗೆ ಈ ಅಧಿಸೂಚನೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ ಹಾಗಾಗಿ ನಿರುದ್ಯೋಗಿಗಳು ಬೇಗ ಅರ್ಜಿ ಸಲ್ಲಿಸಿ
ಬ್ಯಾಂಕ್ ಆಫ್ ಬರೋಡ ಹುದ್ದೆಗಳ ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ:- ಬ್ಯಾಂಕ್ ಆಫ್ ಬರೋಡ
ಖಾಲಿ ಹುದ್ದೆಗಳ ಸಂಖ್ಯೆ:- 2500 ಹುದ್ದೆಗಳು
ಕರ್ನಾಟಕದಲ್ಲಿ ಖಾಲಿ ಹುದ್ದೆಗಳ ಸಂಖ್ಯೆ:- 450 ಹುದ್ದೆಗಳು
ಹುದ್ದೆಯ ಹೆಸರು:- ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಭಾರತಾದ್ಯಂತ
ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ 2500 ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಪದವಿ ಪೂರ್ಣಗೊಳಿಸಿರಬೇಕು, ಇಂಜಿನಿಯರಿಂಗ್, ಮೆಡಿಕಲ್, ಚಾರ್ಟೆಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್, ಮುಂತಾದ ಕ್ಷೇತ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಒಂದು ವರ್ಷ ಕಡ್ಡಾಯವಾಗಿ ಶೆಡುಲ್ಡ್ ಕಮರ್ಷಿಯಲ್ ಬ್ಯಾಂಕ್ ಅಥವಾ ರೀಜಿನಲ್ ರೂರಲ್ ಬ್ಯಾಂಕ್ ಸಂಸ್ಥೆಗಳಲ್ಲಿ ಅಧಿಕಾರಿ ಉದಯ ಅನುಭವ ಹೊಂದಿರಬೇಕು,
ವಯೋಮಿತಿ ಎಷ್ಟು:- ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 30 ವರ್ಷ ನಿಗದಿ ಮಾಡಲಾಗಿದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ, OBC ಅಭ್ಯರ್ಥಿಗಳಿಗೆ 03 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 15 ವರ್ಷ, ಮಾಜಿ ಸೈನಿಕರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ
ಸಂಬಳ ಎಷ್ಟು:- ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೀವು ಆಯ್ಕೆಯಾದರೆ, ಹುದ್ದೆಗಳ ಅನುಗುಣವಾಗಿ ಕನಿಷ್ಠ 48480 ಇಂದ ಗರಿಷ್ಠ 85,920 ವರೆಗೆ ಸಂಬಳ ನೀಡಲಾಗುತ್ತದೆ ಇದರ ಜೊತೆಗೆ ಇತರ ಸೌಲಭ್ಯಗಳು ಅಭ್ಯರ್ಥಿಗಳಿಗೆ ಸಿಗುತ್ತದೆ
ಅರ್ಜಿ ಶುಲ್ಕ ಎಷ್ಟು:– ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು
- ಸಾಮಾನ್ಯ/OBC/EWS :- ₹850 ರೂಪಾಯಿ
- SC/ST/ಅಂಗವಿಕಲ/ಮಹಿಳೆಯರಿಗೆ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ:- ₹175 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ.?
ಬ್ಯಾಂಕ್ ಆಫ್ ಬರೋಡ ಬಿಡುಗಡೆ ಮಾಡಿರುವ 2500 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯಲು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
Gruhalakshmi Scheme: ಇನ್ನೂ ಒಂದು ವಾರದಲ್ಲಿ ಬಾಕಿ ಇರುವ ಗೃಹಲಕ್ಷ್ಮಿ ಯೋಜನೆ ಹಣ ಜಮೆ! ಲಕ್ಷ್ಮಿ ಹೆಬ್ಬಾಳ್ಕರ್
1 thought on “BOB Recruitment 2025: ಬ್ಯಾಂಕ್ ಆಫ್ ಬರೋಡ ಹೊಸ ನೇಮಕಾತಿ! ತಕ್ಷಣ ಖಾಲಿ ಹುದ್ದೆಗಳಿಗೆ ಈ ರೀತಿ ಅಪ್ಲೈ ಮಾಡಿ”