ರೈತರಿಗೆ ಉತ್ತಮ ಬಿತ್ತನೆ ಬೀಜ ಹಾಗೂ ಕೃಷಿ ಸಾಮಗ್ರಿಗಳು ವಿತರಣೆ.! ಈ ದಾಖಲಾತಿಗಳು ಇದ್ದರೆ ಬೇಗ ತೆಗೆದುಕೊಳ್ಳಿ..
ನಮಸ್ಕಾರ ಸ್ನೇಹಿತರೆ ಈಗಾಗಲೇ ಮುಂಗಾರು ಪ್ರಾರಂಭವಾಗಿದ್ದು ನಮ್ಮ ಕರ್ನಾಟಕದಲ್ಲಿ ಬಿತ್ತನೆ ಮಾಡಲು ಇದೀಗ ರೈತರಿಗೆ ಸಬ್ಸಿಡಿ ದರದಲ್ಲಿ ಉತ್ತಮ ಬಿತ್ತನೆ ಬೀಜ ಹಾಗೂ ಕೃಷಿ ಸಾಮಗ್ರಿಗಳನ್ನು ರೈತರಿಗೆ ವಿತರಣೆ ಮಾಡಲಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಬಿತ್ತನೆ ಬೀಜ ಪಡೆಯುವುದು ಹೇಗೆ ಹಾಗೂ ಕೃಷಿ ಸಾಮಗ್ರಿಗಳನ್ನು ಪಡೆದುಕೊಳ್ಳುವುದು ಹೇಗೆ ಮತ್ತು ಬೇಕಾಗುವ ಅಗತ್ಯ ದಾಖಲಾತಿಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನಿಯನ್ನು ಆದಷ್ಟು ರೈತರಿಗೆ ಶೇರ್ ಮಾಡಿ
ಉತ್ತಮ ಬಿತ್ತನೆ ಬೀಜ ಮತ್ತು ಕೃಷಿ ಪರಿಕರಗಳು ವಿತರಣೆ..?
ಹೌದು ಸ್ನೇಹಿತರೆ ಈಗಾಗಲೇ ರೈತರ ಬೇಡಿಕೆಗೆ ಅನುಗುಣವಾಗಿ ಅಗತ್ಯ ತಕ್ಕಂತೆ ಉತ್ತಮ ಬಿತ್ತನೆ ಬೀಜ ಪೂರೈಸಲು ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ.! ತುಂಬಾ ರೈತರು ಸಾಲ ಮಾಡಿ ಕ್ವಾಲಿಟಿ ಇಲ್ಲದ ಬೀಜಗಳನ್ನು ಬಿತ್ತನೆ ಮಾಡಿ ಬೆಳೆ ಸರಿಯಾಗಿ ಬರದೆ ಇದ್ದ ಕಾರಣ ಆರ್ಥಿಕ ನಷ್ಟ ಉಂಟಾಗುತ್ತದೆ ಇದರ ಜೊತೆಗೆ ರೈತರು ಸಾಲದ ಭಾದೆಯಲ್ಲಿ ಸಿಲುಕಿ ಕೊಳ್ಳುತ್ತಾರೆ ಹಾಗಾಗಿ ಇದನ್ನು ತಡೆಗಟ್ಟಲು ಕರ್ನಾಟಕ ರಾಜ್ಯ ಸರ್ಕಾರ ಇದೀಗ ಕೃಷಿ ಇಲಾಖೆಯ ವತಿಯಿಂದ ಉತ್ತಮ ಬೀಜ ಮತ್ತು ಕೃಷಿ ಉಪಕರಣಗಳನ್ನು ವಿತರಣೆ ಮಾಡುತ್ತಿದೆ
ಹೌದು ಸ್ನೇಹಿತರೆ ಈಗಾಗಲೇ ಉತ್ತಮ ಮಳೆ ಆರಂಭವಾಗಿದ್ದು ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಅದಕ್ಕೆ ತಕ್ಕಂತೆ ಸರಕಾರ ರೈತರಿಗೆ ವಿವಿಧ ಸೌಲಭ್ಯಗಳನ್ನು ಇದೀಗ ನೀಡುತ್ತಿದೆ..!
ಆದ್ದರಿಂದ ರೈತರು ತಮಗೆ ಉತ್ತಮ ಬಿತ್ತನೆ ಬೀಜಗಳು ಹಾಗೂ ಕೃಷಿ ಪರಿಕರಗಳು ಮತ್ತು ಇತರ ಅಗತ್ಯ ರಾಸಾಯನಿಕ ಗೊಬ್ಬರ ಹಾಗೂ ಕೃಷಿಗೆ ಸಂಬಂಧಿಸಿದ ಮುಂತಾದ ವಸ್ತುಗಳನ್ನು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಲ್ಲಿ ಅಥವಾ ತೋಟಗಾರಿಕೆ ಇಲಾಖೆಯ ವತಿಯಿಂದ ನೀವು ಪಡೆದುಕೊಳ್ಳಬಹುದು.
ಹೌದು ಸ್ನೇಹಿತರೆ ಕೃಷಿಗೆ ಸಂಬಂಧಿಸಿದ ಪರಿಕರಗಳು ಅಂದರೆ ಕುರುಪೆ ಹಾಗೂ ಕೂರಿಗೆ ಮತ್ತು ಇತರ ಕೃಷಿ ಉಪಕರಣಗಳನ್ನು ಸಬ್ಸಿಡಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ ಇದರ ಜೊತೆಗೆ ಉತ್ತಮ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಮತ್ತು ಇತರ ಅಗತ್ಯ ವಸ್ತುಗಳನ್ನು ಈಗಾಗಲೇ ವಿತರಣೆ ಮಾಡಲು ಕೃಷಿ ಇಲಾಖೆಯ ಕಡೆಯಿಂದ ದಾಸ್ತಾನು ಮಾಡಿಕೊಳ್ಳಲಾಗಿದೆ ಹಾಗಾಗಿ ಈಗ ನೀವು ನಿಮ್ಮ ಹತ್ತಿರದ ಕೃಷಿ ಇಲಾಖೆಗೆ ಭೇಟಿ ನೀಡಿ ಬಿತ್ತನೆ ಬೀಜ ಹಾಗೂ ಇತರ ರಸಗೊಬ್ಬರ ಮತ್ತು ಕೃಷಿ ಉಪಕರಣಗಳನ್ನು ಖರೀದಿ ಮಾಡಬಹುದು
ಬಿತ್ತನೆ ಬೀಜ ಹಾಗೂ ಕೃಷಿ ಉಪಕರಣ ಖರೀದಿ ಮಾಡಲು ಬೇಕಾಗುವ ದಾಖಲಾತಿಗಳ ವಿವರ..?
- ರೈತರ ಆಧಾರ್ ಕಾರ್ಡ್
- ರೈತರ ಪಹಣಿ (RTC)
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಕೃಷಿ ಉಪಕರಣಗಳು ಹಾಗೂ ಉತ್ತಮ ಬಿತ್ತನೆ ಬೀಜಗಳನ್ನು ಸಬ್ಸಿಡಿ ದರದಲ್ಲಿ ಖರೀದಿ ಮಾಡಬಹುದು ಹಾಗಾಗಿ ನಿಮಗೆ ಕೃಷಿಗೆ ಸಂಬಂಧಿಸಿದಂತೆ ಉಪಯುಕ್ತ ಮಾಹಿತಿಗಳು ಬೇಕಾದಲ್ಲಿ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ