HDFC ಬ್ಯಾಂಕ್ ಪರಿವರ್ತನ್ ವಿದ್ಯಾರ್ಥಿವೇತನ; – ನಮಸ್ಕಾರ ಗೆಳೆಯರೇ ಈ ಒಂದು ಲೇಖನಯ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ HDFC ಬ್ಯಾಂಕ್ ಪರಿವರ್ತನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04 ಸೆಪ್ಟೆಂಬರ್ 2025 ನಿಗದಿ (Apply last date) ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಸ್ಕಾಲರ್ಶಿಪ್ (Scholarship) ಯೋಜನೆಗೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಕೆ ಮಾಡಲು ಹೊಂದಿರಬೇಕಾದ ಅರ್ಹತೆಗಳಿಗೆ ಸಂಬಂಧಿಸಿದ ವಿವರ ತಿಳಿದುಕೊಳ್ಳೋಣ
HDFC ಬ್ಯಾಂಕ್ ಪರಿವರ್ತನ್ ವಿದ್ಯಾರ್ಥಿವೇತನ..?
ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ 2025 ಮತ್ತು 26 ನೇ ಸಾಲಿನಲ್ಲಿ ಅಧ್ಯಯನ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕ ಸಂಕಷ್ಟದಲ್ಲಿ ಇರುವಂತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಚ್ ಡಿ ಎಫ್ ಸಿ ಪರಿವರ್ತನಾ (Scholarship) ವಿದ್ಯಾರ್ಥಿ ವೇತನದ ಮೂಲಕ ಸುಮಾರು 75,000 ವರೆಗೆ ಸ್ಕಾಲರ್ಶಿಪ್ (Scholarship) ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ.

ಹೌದು ಗೆಳೆಯರೇ ಎಚ್ ಡಿ ಎಫ್ ಸಿ ವಿದ್ಯಾರ್ಥಿ ವೇತನದ ಮೂಲಕ ಒಂದನೇ ತರಗತಿಯಿಂದ ಹಿಡಿದು 12ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಪದವಿ ಮತ್ತು ಐಟಿಐ ಡಿಪ್ಲೋಮೋ ಹಾಗೂ ಪಾಲಿಟೆಕ್ನಿಕ್ ಮತ್ತು ಇತರ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಆಸಕ್ತಿ ಇರುವವರು ಕೊನೆಯ ದಿನಾಂಕದೊಳಗೆ ಬೇಗ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?
- ವಿದ್ಯಾರ್ಥಿಗಳು ಸರಕಾರಿ ಅಥವಾ ಖಾಸಗಿ ಅಥವಾ ಇತರ ಯಾವುದೇ ಅನುದಾನಿತ ಶಾಲಾ ಅಥವಾ ಕಾಲೇಜುಗಳಲ್ಲಿ ಒಂದರಿಂದ 12ನೇ ತರಗತಿ ಮತ್ತು ITI, ಡಿಪ್ಲೋಮೋ, ಪಾಲಿಟೆಕ್ನಿಕ್ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ಮುಂತಾದ ತರಗತಿಯಲ್ಲಿ ಅಧ್ಯಯನ ಮಾಡುತ್ತಿರಬೇಕು
- ವಿದ್ಯಾರ್ಥಿಗಳು ಇಂದಿನ ಪರೀಕ್ಷೆಯಲ್ಲಿ ಕನಿಷ್ಠ 55% ಅಂಕ ಪಡೆದು ಪಾಸ್ ಆಗಿರಬೇಕು
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಅಥವಾ INR ₹2.50 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು ಅಥವಾ ಸಮನಾಗಿರಬೇಕು
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದವರು ಕಳೆದ ಮೂರು ವರ್ಷದಿಂದ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರಬೇಕು
- ಅರ್ಜಿದಾರರು ಭಾರತದ ಪ್ರಜೆಗಳಾಗಿರಬೇಕು
ಹೆಚ್‌ಡಿಎಫ್‍ಸಿ ವಿದ್ಯಾರ್ಥಿ ವೇತನದ ಸ್ಕಾಲರ್ಶಿಪ್ ಹಣ ಎಷ್ಟು ಸಿಗುತ್ತೆ..?
- 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ;- ₹15,000/-
- 7 ರಿಂದ 12Th ತರಗತಿ & ಐಟಿಐ (ITI), ಡಿಪ್ಲೋಮಾ (diploma), ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ;- ₹18,000/-
- ಸಾಮಾನ್ಯ ಪದವಿ ವಿದ್ಯಾರ್ಥಿಗಳಿಗೆ;- ₹30,000/-
- ಸಾಮಾನ್ಯ ಸ್ನಾತಕೋತ್ತರ ಪದವಿ ಕೋರ್ಸ್ ವಿದ್ಯಾರ್ಥಿಗಳಿಗೆ;- ₹35,000/-
- ವೃತ್ತಿಪರ ಪದವಿ ಕೋರ್ಸ್ ವಿದ್ಯಾರ್ಥಿಗಳಿಗೆ;- ₹50,000/-
- ವೃತ್ತಿಪರ ಸ್ನಾತಕೋತ್ತರ ಕೋರ್ಸ್ ವಿದ್ಯಾರ್ಥಿಗಳಿಗೆ;- ₹,75,000/-
ಅರ್ಜಿ ಸಲ್ಲಿಸುವುದು ಹೇಗೆ..?
ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನೀಡುತ್ತಿರುವ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರು ಮೊದಲು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಎಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ ನಂತರ ನಾವು ಕೆಳಗಡೆ ನೀಡಿದ ಲಿಂಕ್ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 04 ಸೆಪ್ಟೆಂಬರ್ 2025
ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸ್ಕಾಲರ್ಶಿಪ್ ಯೋಜನೆ ಮತ್ತು ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಪಡೆಯಲು ತಕ್ಷಣ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಭೇಟಿ ನೀಡಿ