HDFC ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಮೂಲಕ 75,000 ವರೆಗೆ ಹಣ ಸಿಗುತ್ತೆ | HDFC BANK Parivartan Scholarship

HDFC BANK Parivartan Scholarship: HDFC ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಮೂಲಕ 75,000 ವರೆಗೆ ಹಣ ಸಿಗುತ್ತೆ

ಒಂದನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಹಾಗೂ ಡಿಪ್ಲೋಮೋ ಮತ್ತು ಪದವಿ ಹಾಗೂ ಇತರ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಇದೀಗ ಹೆಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ, ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ಇದೀಗ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ಬರೋಬ್ಬರಿ 75,000 ವರೆಗೆ ಆರ್ಥಿಕ ನೆರವು ನೀಡಲು ಮುಂದಾಗಿದೆ

ಆದ್ದರಿಂದ ವಿದ್ಯಾರ್ಥಿಗಳು ಎಚ್‌ಡಿಎಫ್‍ಸಿ ಬ್ಯಾಂಕ್ ನಲ್ಲಿರುವ ಸ್ಕಾಲರ್ಶಿಪ್ ಯೋಜನೆಯ ಲಾಭ ಪಡೆಯಿರಿ. ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಹೆಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

 

ಎಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ..?

ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಉನ್ನತ ಶಿಕ್ಷಣ ಮಾಡಲು ಬಯಸುವಂಥ ವಿದ್ಯಾರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶ, ಏಕೆಂದರೆ ಹೆಚ್ ಡಿ ಎಫ್ ಸಿ ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಎಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನ ಸ್ಕಾಲರ್ಶಿಪ್ ಯೋಜನೆಯ ಮೂಲಕ 75,000 ವರೆಗೆ ಆರ್ಥಿಕ ನೆರವು ನೀಡುತ್ತಿದೆ

HDFC BANK Parivartan Scholarship
HDFC BANK Parivartan Scholarship

 

WhatsApp Group Join Now
Telegram Group Join Now       

ಹಾಗಾಗಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಒಂದನೇ ತರಗತಿಯಿಂದ 12ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಇತರ ಉನ್ನತ ಶಿಕ್ಷಣ ಪಡೆಯುತ್ತಿರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಆರ್ಥಿಕ ನೆರವು ಪಡೆಯಬಹುದು

 

ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

  • ವಿದ್ಯಾರ್ಥಿಗಳು ಭಾರತದ ನಿವಾಸಿಗಳಾಗಿರಬೇಕು
  • ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
  • ವಿದ್ಯಾರ್ಥಿಗಳು ಸರಕಾರಿ ಅಥವಾ ಸರಕಾರಿ ಅನುದಾನಿತ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರಬೇಕು
  • ವಿದ್ಯಾರ್ಥಿಗಳು B.COM, B.SC, B.A & B.Tech, MBBS, LLB, ಮತ್ತು ನರ್ಸಿಂಗ್ ಸಂಬಂಧಿಸಿದ ವೃತ್ತಿಪರ ಕೋರ್ಸ್ ಗಳನ್ನು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಥವಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿರಬೇಕು
  • ವಿದ್ಯಾರ್ಥಿಗಳು ತಮ್ಮ ಹಿಂದಿನ ವರ್ಷದಲ್ಲಿ ಕನಿಷ್ಠ 55% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು

 

ಹೆಚ್‍ಡಿಎಫ್‍ಸಿ ಸ್ಕಾಲರ್ಶಿಪ್ ಮೂಲಕ ಎಷ್ಟು ಹಣ ಸಿಗುತ್ತೆ..?

  • 1-6 ನೇ ತರಗತಿಯಲ್ಲಿ ದಾಖಲಾದ ವಿದ್ಯಾರ್ಥಿಗಳಿಗೆ ₹15,000/- ವರಗೆ ವಿದ್ಯಾರ್ಥಿ ವೇತನ ಪಡೆಯಬಹುದು
  • 7-12 ನೇ ತರಗತಿಯಲ್ಲಿ ದಾಖಲಾದ ವಿದ್ಯಾರ್ಥಿಗಳು ₹18,000/- ವರೆಗೆ ವಿದ್ಯಾರ್ಥಿ ವೇತನ ಪಡೆಯಬಹುದು
  • ಪದವಿಯಲ್ಲಿ ದಾಖಲಾದ ವಿದ್ಯಾರ್ಥಿಗಳು ₹30,000/- ವರೆಗೆ ವಿದ್ಯಾರ್ಥಿ ವೇತನ ಪಡೆಯಬಹುದು
  • ವೃತ್ತಿಪರ ಪದವಿಪೂರ್ವ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₹50,000/- ವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಹೊಂದಿರುತ್ತಾರೆ
  • ಸಾಮಾನ್ಯ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ₹35,000/- ವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಹೊಂದಿರುತ್ತಾರೆ
  • ವೃತ್ತಿಪರ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ₹75,000/- ವರೆಗೆ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಹೊಂದಿರುತ್ತಾರೆ

 

ಎಚ್‌ಡಿಎಫ್‍ಸಿ ಬ್ಯಾಂಕ್ ಪರಿವರ್ತನ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?

ಎಚ್‌ಡಿಎಫ್‍ಸಿ ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ ನೀಡುತ್ತಿರುವ ಪರಿವರ್ತನ ಸ್ಕಾಲರ್ಶಿಪ್ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ನಂತರ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31/07/2025

 

ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಮ್ ಚಾನಲ್ ಗಳಿಗೆ ಸೇರಿಕೊಳ್ಳಿ

ಗೃಹಲಕ್ಷ್ಮಿ ಯೋಜನೆ ಹಣ: ಬಂತು ನೋಡಿ ಹೊಸ ಅಪ್ಡೇಟ್! ಬಾಕಿ 3 ಕಂತಿನ 6000 ಹಣ ಒಟ್ಟಿಗೆ ಬಿಡುಗಡೆ

2 thoughts on “HDFC ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಮೂಲಕ 75,000 ವರೆಗೆ ಹಣ ಸಿಗುತ್ತೆ | HDFC BANK Parivartan Scholarship”

Leave a Comment

?>