Hdfc Parivartan Scholarship 2025-26: HDFC ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ 75,000 ಹಣ ಸಿಗುತ್ತೆ, ತಕ್ಷಣ ಈ ರೀತಿ ಅಪ್ಲೈ ಮಾಡಿ
ನಮಸ್ಕಾರ ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಿ ವಿದ್ಯಾರ್ಥಿಗಳು ₹15,000/- ಯಿಂದ ₹75,000/- ವರೆಗೆ ಹಣ ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ವಿವರ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳಿಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ
ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ..?
ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ಇದೀಗ ತನ್ನ ಫೌಂಡೇಶನ್ ವತಿಯಿಂದ ಹೆಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ, ಬಿಡುಗಡೆ ಮಾಡಿದೆ ಈ ಯೋಜನೆಯ ಮೂಲಕ ವಿದ್ಯಾರ್ಥಿಗಳು ಕನಿಷ್ಠ ₹15,000/- ಗರಿಷ್ಠ ₹75,000/- ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.! ಹೌದು ಸ್ನೇಹಿತರೆ, ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಬೇಕಾಗುವ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆ ಪ್ರಾರಂಭ ಮಾಡಲಾಯಿತು

ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಹಾಗೂ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು ಎಂಬ ವಿವರವನ್ನು ತಿಳಿದುಕೊಳ್ಳೋಣ
ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು..?
ಎಚ್‌ಡಿಎಫ್‍ಸಿ ಸ್ಕಾಲರ್ಶಿಪ್ ಯೋಜನೆಗೆ ಪ್ರಾಥಮಿಕ ಅಂದರೆ ಒಂದನೇ ತರಗತಿಯಿಂದ 7ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಪ್ರೌಢ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಪಿಯುಸಿ ಹಾಗೂ ಪದವಿ, ಡಿಪ್ಲೋಮೋ, ಸ್ನಾತಕೋತ್ತರ ಪದವಿ, ಹಾಗೂ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು..
ಹೌದು ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಸರಕಾರಿ ಶಾಲೆಗಳಲ್ಲಿ ಅಥವಾ ಖಾಸಗಿ ಶಾಲೆಗಳಲ್ಲಿ ಯಾವುದೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು ಆದ್ದರಿಂದ ಅರ್ಜಿ ಸಲ್ಲಿಕೆ ಮಾಡಿದ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗುತ್ತೆ ಎಂದು ವಿವರವನ್ನು ತಿಳಿಯುವುದು
ಹೆಚ್‍ಡಿಎಫ್‍ಸಿ ಸ್ಕಾಲರ್ಶಿಪ್ ಮೂಲಕ ಎಷ್ಟು ಹಣ ಸಿಗುತ್ತೆ..?
- 1 – 6ನೇ ತರಗತಿ ವಿದ್ಯಾರ್ಥಿಗಳಿಗೆ ₹15,000/- ಹಣ ಸ್ಕಾಲರ್ಶಿಪ್ ಮೂಲಕ ಪಡೆಯಬಹುದು
- 7-12ನೇ ತರಗತಿ ವಿದ್ಯಾರ್ಥಿಗಳಿಗೆ (PUC, ಡಿಪ್ಲೋಮೋ, ITI, ಪಾಲಿಟೆಕ್ನಿಕ್) ₹18,000/- ಹಣ ವರೆಗೆ ಸ್ಕಾಲರ್ಶಿಪ್ ಮೂಲಕ ಪಡೆದುಕೊಳ್ಳಬಹುದು
- ಸಾಮಾನ್ಯ ಪದವಿ ಪೂರ್ವ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಮೂಲಕ ₹30,000/- ವರೆಗೆ ಹಣ ಪಡೆದುಕೊಳ್ಳಬಹುದು
- ವೃತ್ತಿಪರ ಪದವಿಪೂರ್ವ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು HDFC ಸ್ಕಾಲರ್ಶಿಪ್ ಮೂಲಕ ₹50,000/- ವರೆಗೆ ಹಣ ಪಡೆದುಕೊಳ್ಳಬಹುದು
- ವೃತ್ತಿಪರ ಸ್ನಾತಕೋತ್ತರ ಪದವಿ ಅಥವಾ ಇತರ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ₹75,00/- ಹಣ ಪಡೆದುಕೊಳ್ಳಬಹುದು
HDFC ಸ್ಕಾಲರ್ಶಿಪ್ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು..?
ವಿದ್ಯಾರ್ಥಿಗಳು ಎಚ್ ಡಿ ಎಫ್ ಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಮೊದಲು ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ನಂತರ ಕೆಳಗಡೆ ನಾವು ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31/08/2025
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ವಾಟ್ಸಪ್ ಚಾನಲ್ ಗಳಿಗೆ ಸೇರಿಕೊಳ್ಳಬಹುದು
Today Gold Rate Drop in Bangalore – ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ..!