Karnataka Anganwadi Recruitment 2025 Apply- ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! ಎಸ್ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೇ ಎಸ್ ಎಸ್ ಎಲ್ ಸಿ ಪಾಸಾದಂತ ಮಹಿಳೆಯರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ನಿಮಗೆ ಅಂಗನವಾಡಿ ಕೇಂದ್ರಗಳಲ್ಲಿ ಟೀಚರ್ ಹಾಗೂ ಸಹಾಯಕಿ ಹುದ್ದೆಗಳಿಗೆ ಸೇರಲು ಆಸಕ್ತಿ ಇದೆಯಾ ಹಾಗಾದರೆ ಇದು ನಿಮಗೆ ಸುವರ್ಣ ಅವಕಾಶ.! ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಇದೀಗ 277 ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ
ಅಂಗನವಾಡಿ ಟೀಚರ್ (ಕಾರ್ಯಕರ್ತೆ) & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ..?
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಇದೀಗ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಗೆ ಒಳಪಡುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಟೀಚರ್ ಅಥವಾ ಕಾರ್ಯಕರ್ತೆ ಹುದ್ದೆಗಳಿಗೆ ಮತ್ತು ಸಹಾಯಕಿ ಹುದ್ದೆಗಳಿಗೆ ಇದೀಗ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವ ಮಹಿಳೆಯರು ಕೂಡಲೇ ಅರ್ಜಿ ಸಲ್ಲಿಕೆ ಮಾಡಬಹುದು

ಹೌದು ಸ್ನೇಹಿತರೆ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಇದೀಗ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಒಂದು ಅಧಿಸೂಚನೆಯ ಪ್ರಕಾರ 5 ಸೆಪ್ಟೆಂಬರ್ 2025 ಕೊನೆಯ ದಿನಾಂಕವಾಗಿದೆ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಕೆ ಮಾಡಬಹುದು
ಹುದ್ದೆಗಳ ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಚಿತ್ರದುರ್ಗ
ಖಾಲಿ ಹುದ್ದೆಗಳ ಸಂಖ್ಯೆ:- 277 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ಹೆಸರು:- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 12/08/2025
ಅರ್ಜಿ ಕೊನೆಯ ದಿನಾಂಕ:- 05/09/2025
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು.?
ಶೈಕ್ಷಣಿಕ ಅರ್ಹತೆ:- ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುವವರು ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ:- ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳಾ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 28 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಯಾವುದೇ ಪರೀಕ್ಷೆ ಇಲ್ಲದೆ ಈ ಹುದ್ದೆಗಳಿಗೆ ಆಯ್ಕೆ..?
ಹೌದು ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಮಹಿಳಾ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಅಂದರೆ ನೇರ ನೇಮಕಾತಿ ವಿಧಾನದ ಮೂಲಕ ಈ ಹುದ್ದೆಗಳಿಗೆ ಮಹಿಳೆಯರನ್ನು ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ಇತರ ಮಾನದಂಡಗಳನ್ನು ಆಧರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ..?
ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 277 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯರು ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಓದಿಕೊಳ್ಳಿ ನಂತರ ಎಲ್ಲಾ ಮಾಹಿತಿಯನ್ನು ತಿಳಿದುಕೊಂಡು ಕೆಳಗಡೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಮೇಲೆ ಕೊಟ್ಟಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ
- ನಂತರ ಅಲ್ಲಿ ಮೊದಲೇ ಹಂತದ ಮೇಲೆ ಕ್ಲಿಕ್ ಮಾಡಿದ ತಕ್ಷಣ ಜಿಲ್ಲೆ ಆಯ್ಕೆ ಮಾಡಿಕೊಳ್ಳಿ
- ನಂತರ ಅಲ್ಲಿ ವಿವಿಧ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ
- ನಂತರ ಅಲ್ಲಿ ನೀವು ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಯಾವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುತ್ತೀರಾ ಆ ಹುದ್ದೆಯನ್ನು ಆಯ್ಕೆ ಮಾಡಿಕೊಳ್ಳಿ
- ನಂತರ ನಿಮ್ಮ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ದಾಖಲಾತಿಗಳನ್ನು ಎಂಟರ್ ಮಾಡಿ
- ನಂತರ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ
- ಮತ್ತೆ ಅಲ್ಲಿ ಕೇಳಲಾದ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಪ್ರಿಂಟ್ ಔಟ್ ಡೌನ್ ಲೋಡ್ ಮಾಡಿಕೊಳ್ಳಿ
ಸ್ನೇಹಿತರೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು
ಒಂದನೇ ತರಗತಿಯಿಂದ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ಶಿಪ್ ತಕ್ಷಣ ಅರ್ಜಿ ಸಲ್ಲಿಕೆ ಮಾಡಿ
ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯಲು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು
1 thought on “Karnataka Anganwadi Recruitment 2025 Apply for WCD Jobs | ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.”