Karnataka Weather Forecast: ಜೂನ್ 11 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇಲ್ಲಿದೆ ನೋಡಿ ಹವಾಮಾನ ಇಲಾಖೆ ವರದಿ
ನಮಸ್ಕಾರ ಸ್ನೇಹಿತರೇ, ಇದೀಗ ಭಾರತೀಯ ಹವಾಮಾನ ಇಲಾಖೆ ಹೊಸ ವರದಿ ಬಿಡುಗಡೆ ಮಾಡಿದೆ ನಮ್ಮ ಅರಬಿ ಸಮುದ್ರದಲ್ಲಿ ಬಾರಿ ಸುಳಿಗಾಳಿ ಉಂಟಾಗಿದೆ ಇದರಿಂದ ನಮ್ಮ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ವರದಿ ನೀಡಿದೆ.
ಹೌದು ಸ್ನೇಹಿತರೆ ಹವಾಮಾನ ಇಲಾಖೆ ವರದಿ ನೀಡಿರುವ ಪ್ರಕಾರ ಜೂನ್ 11ನೇ ತಾರೀಖಿನಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ವರದಿ ನೀಡಿದೆ ಮತ್ತು ಜೂನ್ 10 ರಿಂದ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಭಾಗಗಳಲ್ಲಿ ಬಿಸಿಲಿನ ಜಳ ಮತ್ತು ಮೋಡ ಕವಿದ ವಾತಾವರಣ ಇರಲಿದೆ ಹಾಗೂ ಅಲ್ಲಲ್ಲಿ ಹಗುರ ಮಳೆ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ತಿಳಿಸಿದೆ
ಇದರ ಜೊತೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆ ಆಗುವ ಸಾಧ್ಯತೆ ಮುನ್ಸೂಚನೆ ನೀಡಿದೆ ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗುವ ಲಕ್ಷಣವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಕೊಂಡಿದೆ
ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ (Karnataka Weather Forecast)..?
ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ನಮ್ಮ ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ತುಂತುರು ಮಳೆ ಆಗುವ ಮುನ್ಸೂಚನೆ ನೀಡಲಾಗಿದೆ ಇದರ ಜೊತೆಗೆ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ನೀಡಲಾಗಿದೆ ಹಾಗೂ ಜೂನ್ 10 ರಿಂದ ಮಲೆನಾಡು ಭಾಗಗಳಲ್ಲಿ ಉತ್ತಮ ಹಾಗೂ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ನಮ್ಮ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಇದರ ಜೊತೆಗೆ ಜೂನ್ 11 ರಿಂದ ನಮ್ಮ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ನಿರೀಕ್ಷೆ ಮಾಡಬಹುದು ಎಂದು ವರದಿ ನೀಡಿದೆ.! ಭಾರತೀಯ ಹವಾಮಾನ ಇಲಾಖೆ ವರದಿಯ ಪ್ರಕಾರ ಉತ್ತರ ಒಳನಾಡಿನ ಬೆಳಗಾವಿ ಮತ್ತು ರಾಯಚೂರು, ಯಾದಗಿರಿ, ಕಲಬುರ್ಗಿ ಜಿಲ್ಲೆಗಳಲ್ಲಿ ತುಂತುರು ಮಳೆ ಮುನ್ಸೂಚನೆ ನೀಡಲಾಗಿದೆ ಮತ್ತು ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ವರದಿ ನೀಡಲಾಗಿದೆ.
ಇದರ ಜೊತೆಗೆ ದಕ್ಷಿಣ ಒಳನಾಡು ಚಾಮರಾಜನಗರ, ಮೈಸೂರು ಜಿಲ್ಲೆ ಹಾಗೂ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆ ನಿರೀಕ್ಷೆ ಮಾಡಬಹುದು.
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ನಿಮ್ಮ ಸ್ನೇಹಿತರು ಹಾಗೂ ರೈತರು ಮತ್ತು ಮಳೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಬಯಸುವಂಥ ಜನರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ನಿಮಗೆ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ಚಾನೆಲ್ ವಾಟ್ಸಾಪ್ ಹಾಗೂ ಟೆಲಿಗ್ರಾಂ ಗಳಿಗೆ ಸೇರಿಕೊಳ್ಳಿ
1 thought on “Karnataka Weather Forecast: ಜೂನ್ 11 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇಲ್ಲಿದೆ ನೋಡಿ ಹವಾಮಾನ ಇಲಾಖೆ ವರದಿ”