KKRTC Recruitment 2025: KKRTC ಯಲ್ಲಿ ಕಾಲಿರುವ 315 ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದಲ್ಲಿ ಒಂದಾದಂತ ಕೆಕೆಆರ್‌ಟಿಸಿಯಲ್ಲಿ ಖಾಲಿ ಇರುವ ಸುಮಾರು 315 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸದಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಹೊಸ ನೇಮಕಾತಿ (KKRTC Recruitment 2025)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಒಂದಾದಂತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (KKRTC) ಕಾಲಿರುವ 315 ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.! ಹೌದು ಸ್ನೇಹಿತರೆ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಹಾಗೂ ಅರ್ಜಿ ಶೀಘ್ರದಲ್ಲಿ ಪ್ರಾರಂಭವಾಗಲಿದೆ ಎಂಬ ಮಾಹಿತಿಯನ್ನು ಸಂಸ್ಥೆ ಹಂಚಿಕೊಂಡಿದೆ
ಹಾಗಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ
ಹುದ್ದೆಗಳ ವಿವರ (KKRTC Recruitment 2025)..?
ನೇಮಕಾತಿ ಸಂಸ್ಥೆ:- ಕರ್ನಾಟಕ ರಾಜ್ಯ ರಸ್ತೆ ನಿಗಮ
ಒಟ್ಟು ಹುದ್ದೆಗಳು:- 315 ಖಾಲಿ ಹುದ್ದೆಗಳು
ಹುದ್ದೆಗಳ ಹೆಸರು:-
1) ನಿರ್ವಾಹಕ (ಕಂಡಕ್ಟರ್)
2) ಸಹಾಯಕ ಲೆಕ್ಕಿಗ,
ಹುದ್ದೆಗಳ ವಿವರ:-
1) ಸಹಾಯಕ ಲೆಕ್ಕಿಗ ಒಟ್ಟು ಹುದ್ದೆಗಳು 15 :- 3 RPC, 12 (HK)
2) ನಿರ್ವಾಹಕ ಒಟ್ಟು ಹುದ್ದೆಗಳು 300 :- 60 RPC, 240 (HK)
ಅರ್ಜಿ ಪ್ರಾರಂಭ:- ಶೀಘ್ರದಲ್ಲಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಅಧಿಕೃತ ಅಧಿಸೂಚನೆ ಪ್ರಕಾರ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಹಾಗೂ ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಮೂರು ವರ್ಷ ಬ್ಯಾಚುಲರ್ ಡಿಗ್ರಿ ಪಾಸಾಗಿರಬೇಕು ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
ವಯೋಮಿತಿ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿ ದಾರಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ವಯೋಮಿತಿ ನಿಗದಿ ಮಾಡಲಾಗಿದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ 43 ವರ್ಷ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 41 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ
ಸಂಬಳ ಎಷ್ಟು:- ಕಂಡಕ್ಟರ್ ಮತ್ತು ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ 18 ಸಾವಿರ ರೂಪಾಯಿಯಿಂದ ಗರಿಷ್ಠ 35000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಿ ಮಾಡಲಾಗುತ್ತದೆ ಮತ್ತು ಇನ್ನಷ್ಟು ಹೆಚ್ಚಿನ ವಿವರ ಅಧಿಕೃತ ಅಧಿಸೂಚನೆ ಬಿಡುಗಡೆಗೊಂಡ ನಂತರ ಮಾಹಿತಿ ತಿಳಿಯೋಣ
ಆಯ್ಕೆಯ ವಿಧಾನ:- ಸ್ನೇಹಿತರೆ ಸಹಾಯಕ ಲೆಕ್ಕಿಗ ಹಾಗೂ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು KEA ಇಲಾಖೆಯ ಕಡೆಯಿಂದ ಬಿಡುಗಡೆ ಮಾಡುವ ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನದ ಮೂಲಕ ಆಯ್ಕೆ ಮಾಡಲಾಗುತ್ತದೆ ಮತ್ತು ಕರ್ನಾಟಕ ನಾಗರೀಕ ಸೇವಾ ನೇರ ನೇಮಕಾತಿ ಮತ್ತು ಸಾಮಾನ್ಯ ನಿಯಮಗಳ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗೂ ಹೆಚ್ಚಿನ ವಿವರವನ್ನು ಅಧಿಕೃತ ಅಧಿಸೂಚನೆ ಬಿಡುಗಡೆಗೊಂಡ ನಂತರ ಮಾಹಿತಿ ತಿಳಿಯೋಣ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರ ಪ್ರಸ್ತುತ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಮಾತ್ರ ಹೊರಗಡೆ ಬಂದಿದ್ದು ಅತಿ ಶೀಘ್ರದಲ್ಲೇ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತದೆ ಮತ್ತು ಅಧಿಕೃತ ಅಧಿಸೂಚನೆ ಕೂಡ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಸಾರಿಗೆ ಇಲಾಖೆ ಕಡೆಯಿಂದ ನೀಡಲಾಗಿದ್ದು ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈಗೆಲ್ಲಿಂದಲೇ ಈ ಹುದ್ದೆಗಳಿಗೆ ತಯಾರಿ ಮಾಡಿಕೊಳ್ಳಿ ಏಕೆಂದರೆ ಯಾವಾಗ ಬೇಕಾದರೂ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಬಹುದು
ವಿಶೇಷ ಸೂಚನೆ:- ಸ್ನೇಹಿತರ ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ಹೊಸ ಹೊಸ ಸುದ್ದಿಗಳನ್ನು ಪ್ರತಿದಿನ ಪಡೆಯಲು ಮತ್ತು ಪ್ರತಿದಿನ ಟ್ರೆಂಡಿಂಗ್ ನ್ಯೂಸ್ ಪಡೆಯಲು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು