labour card apply online: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಆರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ಸುಮಾರು 11,000 ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿದೆ.! ಆದ್ದರಿಂದ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತ ಕಟ್ಟಡ ಕಾರ್ಮಿಕರ ಮಕ್ಕಳು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಲಾಭ ಪಡೆಯಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇವತ್ತಿನ ಚಿನ್ನದ ದರ ಎಷ್ಟು? ಇಲ್ಲಿದೆ ವಿವರ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ (labour card apply online)..?
ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ನಮ್ಮ ರಾಜ್ಯದಲ್ಲಿ ಇರುವಂತ ಕೂಲಿ ಕಾರ್ಮಿಕ ಮಕ್ಕಳಿಗೆ ಹಾಗೂ ಕಟ್ಟಡ ಕಾರ್ಮಿಕ ಮಕ್ಕಳಿಗೆ ಶಿಕ್ಷಣ ಪಡೆಯಲು ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ಆರ್ಥಿಕ ನೆರವು ನೀಡಲು ಕರ್ನಾಟಕ ರಾಜ್ಯದ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯ ಕಡೆಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಹಾಗಾಗಿ ನಮ್ಮ ರಾಜ್ಯದಲ್ಲಿ ಇರುವಂತ ಕೂಲಿ ಕಾರ್ಮಿಕ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ತಮ್ಮ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು ಪಡೆಯಬಹುದು
ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯ ಕಡೆಯಿಂದ ಕೂಲಿಕಾರ್ಮಿಕ ಮಕ್ಕಳಿಗೆ ಹಾಗೂ ಕಟ್ಟಡ ಕಾರ್ಮಿಕ ಮಕ್ಕಳಿಗೆ ಈ ಒಂದು ಯೋಜನೆ ಅಡಿಯಲ್ಲಿ 1000 ರೂಪಾಯಿಯಿಂದ 11,000 ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವಂತಹ ಹಿಂದುಳಿದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರ ಬಡವರ್ಗದ ವಿದ್ಯಾರ್ಥಿಗಳು ಮತ್ತು ಕೂಲಿಕಾರ್ಮಿಕರ ಮಕ್ಕಳು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (labour card apply online)..?
ಸ್ನೇಹಿತರೆ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ನಮ್ಮ ರಾಜ್ಯದಲ್ಲಿ ಇರುವಂತ ಕೂಲಿ ಕಾರ್ಮಿಕ ಮಕ್ಕಳು ಹಾಗೂ ಕಟ್ಟಡ ಕಾರ್ಮಿಕ ಮಕ್ಕಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.! ಆದ್ದರಿಂದ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಒಂದನೇ ತರಗತಿಯಿಂದ 12ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದರೆ ಹಾಗೂ ಪದವಿ ಮತ್ತು ವೃತ್ತಿಪರ ಕೋರ್ಸ್ ಗಳು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಹಾಗೂ ಇಂಜಿನಿಯರಿಂಗ್ ಮತ್ತು ಮೆಡಿಕಲ್ ಹಾಗೂ ಇತರ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು
ಸ್ನೇಹಿತರೆ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ತಾವು ಅಧ್ಯಯನ ಮಾಡುತ್ತಿರುವ ತರಗತಿಗೆ ಅನುಗುಣವಾಗಿ ಅಥವಾ ವಿದ್ಯಾರ್ಹತೆ ಅನುಗುಣವಾಗಿ ಈ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ 1000 ದಿಂದ 11,000 ವರೆಗೆ ಗರಿಷ್ಠ ವಿದ್ಯಾರ್ಥಿ ವೇತನ ಈ ಒಂದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ಪಡೆಯಬಹುದು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು.?
- ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೂಲಿ ಕಾರ್ಮಿಕ ಅಥವಾ ಕಟ್ಟಡ ಕಾರ್ಮಿಕರ ಮಕ್ಕಳು ಆಗಿರಬೇಕು
- ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಪೋಷಕರು ಕಡ್ಡಾಯವಾಗಿ ಲೇಬರ್ ಕಾರ್ಡ್ ಹೊಂದಿರಬೇಕು
- ಲೇಬರ್ ಕಾರ್ಡ್ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಒಂದು ಕುಟುಂಬದಲ್ಲಿ ಇಬ್ಬರಿಗೆ ಮಾತ್ರ ಅವಕಾಶವಿದೆ
- ಲೇಬರ್ ಕಾರ್ಡ್ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿ ಮೀರಬಾರದು
- ಲೇಬರ್ ಕಾರ್ಡ್ಸ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ನಮ್ಮ ಕರ್ನಾಟಕದಲ್ಲಿ ವಾಸ ಮಾಡುತ್ತಿರಬೇಕು ಹಾಗೂ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪೋಷಕರ ಲೇಬರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ವಿದ್ಯಾರ್ಥಿಯ ಪ್ರವೇಶ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 31/12/2024
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಇದೇ ರೀತಿ ಪ್ರತಿದಿನ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು