New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭ.! ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ ಕೊನೆಯ ದಿನಾಂಕ ಇದೆ!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಹಾಗೂ ಹೊಸದಾಗಿ ರೇಷನ್ ಕಾರ್ಡ್ ಗೆ ಯಾವಾಗ ನೀಡಲಾಗುತ್ತದೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇರುವ ಕೊನೆಯ ದಿನಾಂಕ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು ಮುಂತಾದ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಒಂದು ಲೇಖನವನ್ನು ಕೊನೆವರೆಗೂ ಓದಿ
ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭ (New Ration Card)..?
ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಕೆಲವೊಂದು ಖಾಸಗಿ ಮಾಧ್ಯಮಗಳ ಮಾಹಿತಿ ಪ್ರಕಾರ ತುರ್ತು ಚಿಕಿತ್ಸೆಗೆ ಹಾಗೂ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಹಾಗೂ ಈ ಶ್ರಮ ಕಾರ್ಡು ಹೊಂದಿದವರಿಗೆ ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಕೆಲವೊಂದು ಖಾಸಗಿ ಮಾಧ್ಯಮಗಳ ಮೂಲಕ ಮಾಹಿತಿ ತಿಳಿದು ಬಂದಿದೆ

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಈಗಾಗಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಈ ತಿಂಗಳು 2 ಮತ್ತು 6 ನೇ ತಾರೀಖಿನವರೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು. ಅದೇ ರೀತಿ ಈ ತಿಂಗಳು ಕೊನೆಯ ಹಂತದಲ್ಲಿ ಅಂದರೆ ಇನ್ನೂ ಒಂದು ವಾರದ ಒಳಗಡೆ ಅಥವಾ ಏಪ್ರಿಲ್ ಮೊದಲ ವಾರದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾದ ತಕ್ಷಣ ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
ಹೊಸ ರೇಷನ್ ಕಾರ್ಡ್ ವಿತರಣೆ ಯಾವಾಗ ಪ್ರಾರಂಭ (New Ration Card)..?
ಸ್ನೇಹಿತರೆ ಈಗಾಗಲೇ ನಮ್ಮ ರಾಜ್ಯದಲ್ಲಿ ಸಾಕಷ್ಟು ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದಾರೆ ಆಹಾರ ಇಲಾಖೆ ನೀಡಿರುವ ಮಾಹಿತಿ ಪ್ರಕಾರ 2023ರ ಒಳಗಡೆ ಸುಮಾರು 2 ಲಕ್ಷಕ್ಕಿಂತ ಹೆಚ್ಚು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ದಾಖಲಾಗಿವೆ ಎಂದು ಮಾಹಿತಿ ತಿಳಿಸಿದ್ದಾರೆ ಮತ್ತು ಈಗಾಗಲೇ 1,60,000 ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ವಿತರಣೆ ಮಾಡಲಾಗಿದೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪನವರು ಸದನದಲ್ಲಿ ಮಾಹಿತಿ ನೀಡಿದ್ದಾರೆ ಮತ್ತು ಉಳಿದ 91,000 ರೇಷನ್ ಕಾರ್ಡ್ ಗಳನ್ನು ಶೀಘ್ರದಲ್ಲೇ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ
ಹೌದು ಸ್ನೇಹಿತರೆ ಈಗಾಗಲೇ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದವರಿಗೆ ಇದು ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಏಪ್ರಿಲ್ ಮೊದಲ ವಾರದಲ್ಲಿ ಅಥವಾ ಏಪ್ರಿಲ್ 8ನೇ ತಾರೀಕಿನಂದು ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ.! ಹಾಗಾಗಿ ಹೊಸ ರೇಷನ್ ಕಾರ್ಡ್ ಅಪ್ರೋವಲ್ ಮಾಹಿತಿ ಬೇಗ ಪಡೆಯಲು ವಾಟ್ಸಾಪ್ ಚಾನೆಲ್ ಗಳಿಗೆ ಸೇರಿಕೊಳ್ಳಿ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ (New Ration Card).?
ಸ್ನೇಹಿತರೆ ರಾಜ್ಯ ಸರ್ಕಾರ ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇದೇ ತಿಂಗಳು ಅಂದರೆ ಮಾರ್ಚ್ 31 2025 ಕೊನೆಯ ದಿನಾಂಕ ನಿಗದಿ ಮಾಡಿದೆ.! ಹೌದು ಸ್ನೇಹಿತರೆ ಈಗಾಗಲೇ ಆಹಾರ ಇಲಾಖೆ, ಸಾಕಷ್ಟು ಸಲ ದಿನಾಂಕವನ್ನು ವಿಸ್ತರಣೆ ಮಾಡಲಾಗಿದ್ದು ಪ್ರಸ್ತುತ ಮಾರ್ಚ್ 31 ರವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ ಮತ್ತು ಈ ದಿನಾಂಕವು ಮುಂದುವರಿಕೆ ಮಾಡಬಹುದು ಅಥವಾ ಮಾಡದೆ ಇರಬಹುದು
ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವ ಜನರು ಕೂಡಲೇ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು
ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ಅಗತ್ಯ ದಾಖಲಾತಿಗಳು..?
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಮೊಬೈಲ್ ನಂಬರ್
- ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್
- ಇತರೆ ಅಗತ್ಯ ದಾಖಲಾತಿಗಳು
2 thoughts on “New Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭ.! ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ ಕೊನೆಯ ದಿನಾಂಕ ಇದೆ!”