New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಇಂಥವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

“New Ration Card Application” ಹೊಸ ರೇಷನ್ (Ration card) ಕಾರ್ಡ್ ಅರ್ಜಿ ಪ್ರಾರಂಭ.! ಇಂಥವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

ನಮಸ್ಕಾರ ಗೆಳೆಯರೇ ಕರ್ನಾಟಕ ರಾಜ್ಯ ಸರ್ಕಾರದಿಂದ ಹೊಸದಾಗಿ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇದೀಗ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಯಾರು ಈ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

New Ration Card Application
New Ration Card Application

 

ರೇಷನ್ ಕಾರ್ಡ್ ಏಕೆ ಮುಖ್ಯ..?

ಹೌದು ಗೆಳೆಯರೇ ರಾಜ್ಯ ಸರ್ಕಾರದಿಂದ ಬರುವಂತ ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಮತ್ತು ಇತರ ಪಂಚ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಕಡ್ಡಾಯವಾಗಿ ರೇಷನ್ ಕಾರ್ಡ್ ಬೇಕಾಗುತ್ತದೆ ಹಾಗಾಗಿ ತುಂಬಾ ಜನರು ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.?

ಹೌದು ಸ್ನೇಹಿತರೆ ಹೊಸದಾಗಿ ಮದುವೆಯಾದಂತ ದಂಪತಿಗಳಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಮತ್ತು ಇತರರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದರೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಅರ್ಜಿದಾರರು ಇ – ಶ್ರಮ್ ಕಾರ್ಡ್ ಹೊಂದಿರಬೇಕಾಗುತ್ತದೆ ಅಂದರೆ ಮಾತ್ರ ಅಂತವರಿಗೆ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

ಹೌದು ಸ್ನೇಹಿತರೆ, ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಅಂದರೆ ಕಟ್ಟಡ ಕಾರ್ಮಿಕರು ಮತ್ತು ಹೋಟೆಲ್ ಸಿಬ್ಬಂದಿಗಳು ಹಾಗೂ ಕೂಲಿ ಕಾರ್ಮಿಕರು ಮತ್ತು ವಾಹನ ಚಾಲಕರು ಹಾಗೂ ಇತರೆ ಯಾವುದೇ ರೀತಿ ಅಸಂಘಟಿತ ವಲಯದ ಕಾರ್ಮಿಕರು ಇ – ಶ್ರಮ್ ಕಾರ್ಡ್ ಒಂದಿದ್ದರೆ ಅಂತವರಿಗೆ ಹೊಸದಾಗಿ ಪಡಿತರ ಚೀಟಿ ಪಡೆಯಲು ಅವಕಾಶ ಮಾಡಿಕೊಡಲಾಗಿದೆ

WhatsApp Group Join Now
Telegram Group Join Now       

ಹಾಗಾಗಿ ಅರ್ಜಿ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ದಿನಾಂಕ 4 ಅಕ್ಟೋಬರ್ 2025 ರಿಂದ 31 ಮಾರ್ಚ್ 2026 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ  ಮಾಡಿಕೊಡಲಾಗಿದೆ ಹಾಗೂ ಆಸಕ್ತಿ ಇರುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್ (gram one), ಕರ್ನಾಟಕ ಒನ್ (Karnataka One), ಬೆಂಗಳೂರು ಒನ್ (Bengaluru One) ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು

ಇದರ ಜೊತೆಗೆ ತುರ್ತು ವೈದ್ಯಕೀಯ ಚಿಕಿತ್ಸೆಗೆ ನಿಮಗೆ ರೇಷನ್ ಕಾರ್ಡ್ ಅವಶ್ಯಕತೆ ಇದ್ದರೆ ನೀವು ಆಸ್ಪತ್ರೆಯಿಂದ ರೇಷನ್ ಕಾರ್ಡ್ ಅಗತ್ಯವಿದೆ ಎಂಬ ಡಾಕ್ಯುಮೆಂಟ್ಸ್ ತೆಗೆದುಕೊಂಡು ನಿಮ್ಮ ಹತ್ತಿರದ ಆಹಾರ ಇಲಾಖೆ ಅಥವಾ ತಹಸೀಲ್ ಆಫೀಸಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿ ನಂತರ ನಿಮಗೆ ಕನಿಷ್ಠ 15 ದಿನಗಳ ಒಳಗಡೆ ಹೊಸ ರೇಷನ್ ಕಾರ್ಡ್ ಸಿಗುತ್ತದೆ ಹಾಗಾಗಿ ಹೆಚ್ಚಿನ ಮಾಹಿತಿಗಾಗಿ ಆಹಾರ ಇಲಾಖೆಗೆ ಭೇಟಿ ನೀಡಿ

 

ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಯಾವುದೇ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ದಿನಾಂಕ 31 ಮಾರ್ಚ್ 2026 ವರೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಕೆಳಗಡೆ ನೀಡಿದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಕೆ ಮಾಡಿ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?

  • ಇ – ಶ್ರಮ್ ಕಾರ್ಡ್ (ಕಡ್ಡಾಯ)
  • ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ಇತ್ತೀಚಿನ ಫೋಟೋಸ್
  • ಇತರೆ ಅಗತ್ಯ ದಾಖಲಾತಿಗಳು

 

WhatsApp Group Join Now
Telegram Group Join Now       

ಸ್ನೇಹಿತರೆ ಈ ಮಾಹಿತಿ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

ಪ್ರಸೂತಿ ಆರೈಕೆ ಯೋಜನೆ: ₹3000 ವರೆಗೆ ಆರ್ಥಿಕ ನೆರವು ಸಿಗುತ್ತೆ .! ಇಲ್ಲಿದೆ ಮಾಹಿತಿ ನೋಡಿ 

Leave a Comment