ನಾಳೆ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಈ ದಾಖಲೆಗಳು ಬೇಕು.? ಇಲ್ಲಿದೆ ಮಾಹಿತಿ
ನಮಸ್ಕಾರ ಗೆಳೆಯರೇ ಹೊಸದಾಗಿ ಪಡಿತರ ಚೀಟಿ ಪಡೆಯಲು ಬಯಸುವವರಿಗೆ ಇದೀಗ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಸಿಹಿ ಸುದ್ದಿ ನೀಡಿದ್ದಾರೆ.! ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂದು ಮಾಹಿತಿ ಸಚಿವರು ತಿಳಿಸಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಮತ್ತು ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲಾತಿಗಳ ಬಗ್ಗೆ ಮಾಹಿತಿ ತಿಳಿಯೋಣ
ಹೊಸ ರೇಷನ್ ಕಾರ್ಡ್ ಅರ್ಜಿಗೆ ಸಂಬಂಧಿಸಿದಂತೆ ಕೆಎಚ್ ಮುನಿಯಪ್ಪ ಹೊಸ ಮಾಹಿತಿ..?
ಹೌದು ಗೆಳೆಯರೇ, ನಮ್ಮ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಸಚಿವಾಲಯದ ಸಚಿವರಾದಂತಹ ನಮ್ಮ ಕೆ ಎಚ್ ಮುನಿಯಪ್ಪನವರು ಶುಕ್ರವಾರ ಅಂದರೆ ದಿನಾಂಕ 26 ಸೆಪ್ಟೆಂಬರ್ 2025ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುವ ಸಂದರ್ಭದಲ್ಲಿ ಅವರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡಿದ್ದಾರೆ.

ಕೆಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿರುವ ಪ್ರಕಾರ ನಮ್ಮ ರಾಜ್ಯದಲ್ಲಿ ಇದೀಗ ಅಕ್ರಮ ಅಥವಾ ಅನರ್ಹ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪತ್ತೆಗೆ ರಾಜ್ಯ ಸರ್ಕಾರ ಇದೀಗ ಮುಂದಾಗಿದೆ ಮತ್ತು ಇತ್ತೀಚಿಗೆ ಸುಮಾರು 7.70 ಲಕ್ಷ ಪಡಿತರ ಚೀಟಿಗಳನ್ನು ಅಕ್ರಮ ಅಥವಾ ಅನರ್ಹ ರೇಷನ್ ಕಾರ್ಡ್ ಎಂದು ಗುರುತಿಸಲಾಗಿದೆ ಹಾಗಾಗಿ ಈ ಕಾರ್ಡ್ ರದ್ದು ಪ್ರಕ್ರಿಯೆಗಳು ಪ್ರಾರಂಭವಾಗಿದ್ದು ಆದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಜನರಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ
ಅಕ್ಟೋಬರ್ 01 ರಿಂದ ಹೊಸ ಪಡಿತರ (ರೇಷನ್ ಕಾರ್ಡ್) ಚೀಟಿ ಅರ್ಜಿ ಪ್ರಾರಂಭ..?
ಹೌದು ಗೆಳೆಯರೇ ಶುಕ್ರವಾರ ಶುದ್ದಿಗಾರುಂದಿಗೆ ಮಾತನಾಡುವ ಸಂದರ್ಭದಲ್ಲಿ ಡಿಪಿಎಲ್ ರೇಷನ್ ಕಾರ್ಡ್ ರದ್ದು ಪ್ರಕ್ರಿಯೆ ಕಾರ್ಯ ಚುರುಕಾಗಿ ನಡೆಯುತ್ತಿದೆ ಹಾಗಾಗಿ ಅಕ್ಟೋಬರ್ ಒಂದನೇ ತಾರೀಖಿನಿಂದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅಥವಾ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯ ಪ್ರಕ್ರಿಯೆಗೆ ಜನರಿಗೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂಬ ಮಾಹಿತಿ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಸಚಿವರು ಮಾಹಿತಿ ತಿಳಿಸಿದ್ದಾರೆ..
ಹೌದು ಸ್ನೇಹಿತರೆ ಅಕ್ಟೋಬರ್ 1 2025 ರಂದು ಅಂದರೆ ನಾಳೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾಗುತ್ತದೆ ಹಾಗಾಗಿ ಆಸಕ್ತಿ ಇರುವವರು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಅರ್ಜಿ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲಾತಿಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹೊಸ ಪಡಿತರ ಚೀಟಿ (ರೇಷನ್ ಕಾರ್ಡ್) ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಬೇಕು..?
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- 06 ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
- ಇತರೆ ಅಗತ್ಯ ದಾಖಲಾತಿಗಳು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ಲಿಂಕ್ ಗಳು .?
ಸ್ನೇಹಿತರ ಕೆಲವೊಂದು ಸಂದರ್ಭಗಳಲ್ಲಿ ರಾಜ್ಯ ಸರ್ಕಾರ ಆಹಾರ ಇಲಾಖೆಯ ಮೂಲಕ ಅಥವಾ ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡುತ್ತದೆ ಹಾಗಾಗಿ ಬೆಳಗ್ಗೆ 10 ಗಂಟೆಯ ಮೇಲೆ ಹಾಗೂ ಸಾಯಂಕಾಲ 5:00 ಒಳಗಡೆ ಕೆಳಗಡೆ ಕೊಟ್ಟಿರುವ ಲಿಂಕಿನ ಮೇಲೆ ಒಂದು ಸಲ ಕ್ಲಿಕ್ ಮಾಡಿ ನೋಡಿ, ಅರ್ಜಿ ಸಲ್ಲಿಸಲು ಅವಕಾಶ ಇದ್ದರೆ ಇರುತ್ತದೆ, ಒಂದು ವೇಳೆ ಪಬ್ಲಿಕ್ ಲಾಗಿನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದ್ದರೆ ಅಲ್ಲಿ ಕೇಳಿದ ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಬೇಕೆ.? ಹಾಗಾದ್ರೆ ನೀವು ಒಂದು ಕೆಲಸ ಮಾಡಬೇಕು ಅದು ಏನು ಅಂದರೆ ನೀವು
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಿ ಅಥವಾ ಸೇರಿಕೊಳ್ಳಬಹುದು
Today Gold Rate – ಚಿನ್ನದ ಬೆಲೆ ಭಾರೀ ಏರಿಕೆ.! ಇಂದಿನ ಚಿನ್ನದ ದರ ಎಷ್ಟು.?