pm awas yojana 2025: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಜಿ ಪ್ರಾರಂಭ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಇದೀಗ ಕೇಂದ್ರ ಸರ್ಕಾರ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಮನೆ ಇಲ್ಲದಂತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಉಚಿತ ಮನೆ ನಿರ್ಮಾಣ ಕೊಡುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ಅರ್ಜಿದಾರರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಪ್ರಧಾನ ಮಂತ್ರಿ ಆವಾಸ್ ಯೋಜನೆ (pm awas yojana 2025)..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಕೇಂದ್ರ ಸರ್ಕಾರ 2016ರಲ್ಲಿ ಅಧಿಕಾರದಲ್ಲಿರುವಂತ ಬಿಜೆಪಿ ಪಕ್ಷವು ನರೇಂದ್ರ ಮೋದಿ ನೇತೃತ್ವದಲ್ಲಿ ಈ ಒಂದು ಯೋಜನೆಯನ್ನು ಜಾರಿಗೆ ತರಲಾಯಿತು ಪ್ರಸ್ತುತ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಆದಕಾರಣ ಈ ಯೋಜನೆ ಅಡಿಯಲ್ಲಿ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಮನೆ ಇಲ್ಲದಂತ ಕುಟುಂಬಗಳಿಗೆ ಉಚಿತ ಮನೆ ಕಟ್ಟಿಸುವ ಉದ್ದೇಶದಿಂದ ಈ ಯೋಜನೆ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.!

ಹೌದು ಸ್ನೇಹಿತರೆ, ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಮುಂದೆ ಬರುವಂತ ಅಂದರೆ 2029 ರ ವೇಳೆಗೆ ಸುಮಾರು ಮೂರು ಕೋಟಿ ಮನೆಯನ್ನು ಈ ಒಂದು ಯೋಜನೆ ಅಡಿಯಲ್ಲಿ ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ನಮ್ಮ ದೇಶದ ಹಣಕಾಸು ಸಚಿವೆ ಆದಂತ ನಿರ್ಮಲ ಸೀತಾರಾಮನ್ ಅವರು ಬಜೆಟ್ ಮಂಡನೆ ವೇಳೆ ಮಾಹಿತಿ ಹಂಚಿಕೊಂಡಿದ್ದಾರೆ.! ಆದ್ದರಿಂದ ಪ್ರತಿಯೊಬ್ಬರೂ ಈ ಒಂದು ಯೋಜನೆಯ ಲಾಭ ಪಡೆದುಕೊಳ್ಳಿ.!
3 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ರದ್ದು.! ಇದರಲ್ಲಿ ನಿಮ್ಮ ಹೆಸರು ಇದೆಯಾ ಈ ರೀತಿ ಚೆಕ್ ಮಾಡಿ ಇಲ್ಲಿದೆ ಸಂಪೂರ್ಣ ವಿವರ
ಸ್ನೇಹಿತರೆ ಪ್ರಸ್ತುತ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಎಂದು ಮರುನಾಮಕರಣ ಮಾಡಲಾಗಿದ್ದು ಆಸಕ್ತಿ ಇರುವಂತಹ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ವಾಸ ಮಾಡುವ ಜನರು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮನೆ ಕಟ್ಟಿಸಿಕೊಳ್ಳಲು 1,70,000/- ಸಾವಿರ ರೂಪಾಯಿಯಿಂದ 2,67,000/- ವರೆಗೆ ಆರ್ಥಿಕ ನೆರವು ಪಡೆಯಬಹುದು ಹಾಗಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಫಲಾನುಭವಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಒಳಗಡೆ ಇರಬೇಕಾಗುತ್ತದೆ ಮತ್ತು ಮಧ್ಯಮ ವರ್ಗದವರಾಗಿದ್ದರೆ ಗರಿಷ್ಠ ವಾರ್ಷಿಕ ಆದಾಯದ ಮಿತಿ 6 ಲಕ್ಷ ರೂಪಾಯಿ ಆಗಿದೆ
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಫಲಾನುಭವಿಗಳು ಈ ಹಿಂದೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದ ಯಾವುದೇ ಉಚಿತ ಮನೆ ಸೌಲಭ್ಯ ಪಡೆದಿರಬಾರದು
- ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಲ್ಲಿ ಅಂಗವಿಕಲರು, ವಿದುವಾ ಮಹಿಳೆಯರು, ಹಿರಿಯ ನಾಗರಿಕರು, ಕೂಲಿ ಕಾರ್ಮಿಕರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ
ಈ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಲು ಎಷ್ಟು ಹಣ ಸಿಗುತ್ತೆ (pm awas yojana 2025)..?
ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವಿಂಗಡಣೆ ಮಾಡಲಾಗಿದೆ.!
1) ಗ್ರಾಮೀಣ ಪಟ್ಟಿ:- ಸ್ನೇಹಿತರೆ ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಮನೆ ಕಟ್ಟಿಸಿಕೊಳ್ಳಲು ಕೇಂದ್ರ ಸರ್ಕಾರ ಕಡೆಯಿಂದ ಈ ಪಿಎಂ ಆವಾಸ್ ಯೋಜನೆ ಅಡಿಯಲ್ಲಿ 1,70,000 ರೂಪಾಯಿವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ ಮತ್ತು ಹೆಚ್ಚಿನ ಹಣ ಬೇಕಾದರೆ ಕೇವಲ 5% ಬಡ್ಡಿ ದರದಲ್ಲಿ ಸುಮಾರು 6 ಲಕ್ಷ ರೂಪಾಯಿವರೆಗೆ ರಾಷ್ಟ್ರೀಯ ಬ್ಯಾಂಕ್ ಗಳ ಮೂಲಕ ಸಾಲ ಪಡೆಯಬಹುದು ಹಾಗೂ ಈ ಯೋಜನೆ ಅಡಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ಕೂಲಿ ಕಾರ್ಮಿಕರು ಮತ್ತು ರೈತರು ಹಾಗೂ ಬುಡಕಟ್ಟು ಜನರು ಈ ಗ್ರಾಮೀಣ ಪಟ್ಟಿ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ
2) ನಗರ ಪಟ್ಟಿ:- ಪ್ರಧಾನ ಮಂತ್ರಿ ಆವಾಸ್ ಯೋಜನೆಯ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಪರಂಪರೆಗಳಿಗೆ 2,67000 ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ ಮತ್ತು ಮನೆ ಕಟ್ಟಿಸಲು ಹೆಚ್ಚಿನ ಮೊತ್ತದ ಹಣ ಬೇಕಾದರೆ ಕೇವಲ 5% ಬಡ್ಡಿ ದರದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯವನ್ನು ಈ ಯೋಜನೆ ಅಡಿಯಲ್ಲಿ ಪಡೆದುಕೊಳ್ಳಬಹುದು ಹಾಗೂ ಈ ನಗರ ಪಟ್ಟಿಗೆಯಲ್ಲಿ ಅರ್ಜಿ ಸಲ್ಲಿಸಲು ನಗರ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಅವಕಾಶ ಮಾಡಿಕೊಡಲಾಗಿದೆ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಅರ್ಜಿದಾರ ಆಧಾರ್ ಕಾರ್ಡ್
- ಅರ್ಜಿದಾರ ಪಾನ್ ಕಾರ್ಡ್
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
- ಇತ್ತೀಚಿನ ಭಾವಚಿತ್ರಗಳು
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಾಸಸ್ಥಳ ಪ್ರಮಾಣ ಪತ್ರ
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಸರಕಾರಿ ಮತ್ತು ಪ್ರೈವೇಟ್ ಹುದ್ದೆಗಳ ಬಗ್ಗೆ ಮಾಹಿತಿ ಇತರ ಪ್ರತಿಯೊಂದು ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಮ್ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು