pm kisan 19th installment date: ಪಿಎಂ ಕಿಸಾನ್ 19ನೇ ಕಂತಿನ ರೂ.2000 ಸೋಮವಾರ ಬಿಡುಗಡೆ.! ಹಣ ಪಡೆಯಲು ರೈತರು ಈ ಕೆಲಸ ಮಾಡಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ರೈತ ಸಮುದಾಯದ ಆದಾಯವನ್ನು ಹೆಚ್ಚಿಸುವ ಭಾಗವಾಗಿ ಕೇಂದ್ರ ಸರ್ಕಾರ ಪಿಎಂ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದೆ ಮತ್ತು ಈ ಯೋಜನೆ ಅಡಿಯಲ್ಲಿ ರೈತರಿಗೆ ವಾರ್ಷಿಕವಾಗಿ 6,000 ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗುತ್ತದೆ ಇದರಿಂದ ರೈತರು ತಮ್ಮ ಜಮೀನಿಗೆ ಬೇಕಾದ ಬೀಜ ಹಾಗೂ ರಸಗೊಬ್ಬರ ಮುಂತಾದ ವಸ್ತುಗಳನ್ನು ಖರೀದಿ ಮಾಡಲು ನೆರವು ಆಗುತ್ತದೆ.
ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾಧ್ಯಮಗಳ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ ಮತ್ತು ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ಯ ನಿಧಿ ಯೋಜನೆಯ ಅಧಿಕೃತ ವೆಬ್ಸೈಟ್ನಲ್ಲಿ ಕೂಡ ಈ 19ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಮಾಹಿತಿ ನೀಡಲಾಗಿದೆ.!

ಈ ಮಾಹಿತಿಯ ಪ್ರಕಾರ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ದಿನಾಂಕ 24 ಫೆಬ್ರುವರಿ 2025 ಮಧ್ಯಾಹ್ನ 1 ಗಂಟೆಯ ಸುಮಾರಿಗೆ 2000 ಹಣವನ್ನು ಅರ್ಹ ರೈತರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ.! ಹೌದು ಸ್ನೇಹಿತರೆ ಪಿಎಂ ನರೇಂದ್ರ ಮೋದಿಯವರು ಸೋಮವಾರ 19ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ಸುಮಾರು 9.8 ಕೋಟಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ 22 ಸಾವಿರ ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ
ಪ್ರತಿದಿನ ಸರ್ಕಾರಿ ಯೋಜನೆಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಬಗ್ಗೆ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ರೈತರಿಗೆ ವಾರ್ಷಿಕವಾಗಿ 6000 ಹಣವನ್ನು 3 ಕಂತಿನ ರೂಪದಲ್ಲಿ ಅಂದರೆ ಪ್ರತಿ ಕಂತಿಗೆ ₹2000 ರೂಪಾಯಿಯಂತೆ ಒಟ್ಟು ಆರು ಸಾವಿರ ಹಣವನ್ನು ವಾರ್ಷಿಕವಾಗಿ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ
ರೈತರು ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಅಂತ ರೈತರಿಗೆ ಮಾತ್ರ ಪಿಎಂ ಕಿಸಾನ್ ಯೋಜನೆಯ 19ನೇ ಕಂತಿನ ಹಣ ಜಮಾ ಆಗುತ್ತದೆ ಹಾಗೂ ಪಿಎಂ ಕಿಸಾನ್ ಯೋಜನೆ ಅರ್ಜಿಗೆ E-KYC ಮಾಡಿಸಬೇಕು,
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ರೈತರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ನಿಮಗೆ ಪ್ರತಿದಿನ ಉಪಯುಕ್ತ ಮಾಹಿತಿಗಳು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ತಿಳಿಯುತ್ತದೆ