pm yashasvi scholarship 2025: ವಿದ್ಯಾರ್ಥಿಗಳಿಗೆ ಸಿಗಲಿದೆ 3.75 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು.! ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ಪಿಎಂ ಅಚೀವರ್ ಸ್ಕಾಲರ್ಶಿಪ್ ಅವಾರ್ಡ್ ಸ್ಕೀಮ್ ಪ್ಯಾರಾ ವೈಬ್ರೆಟ್ ಇಂಡಿಯಾ ಅಥವಾ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭ ಮಾಡಿದೆ ಈ ಯೋಜನೆಯ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ 3.72 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ.
ಆದ್ದರಿಂದ ನಾವು ಈ ಒಂದು ಲೇಖನಯ ಮೂಲಕ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು ಮತ್ತು ಯಾವ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕು ಮತ್ತು ಎಷ್ಟನೇ ತರಗತಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನೆಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ
ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆ..?
ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮೂಲಕ ಈ ಒಂದು ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಿದೆ ಮತ್ತು ಈ ವಿದ್ಯಾರ್ಥಿ ವೇತನವನ್ನು ಹಿಂದುಳಿದ ವರ್ಗ (OBC) & ಅಲೆಮಾರಿ ಮತ್ತು ಅಲೆ ಅಲೆಮಾರಿ (E.B.C) ಬುಡಕಟ್ಟು ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತರಲಾಗಿದೆ

ಈ ಯೋಜನೆಯ ಮೂಲಕ ಅರ್ಹ ವಿದ್ಯಾರ್ಥಿಗಳಿಗೆ ಖಾಸಗಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡಲು ವರ್ಷಕ್ಕೆ 2 ಲಕ್ಷ ರೂಪಾಯಿವರೆಗೆ ಅಥವಾ ವಾಣಿಜ್ಯ ಪ್ರಯೋಗಿಕ ತರಬೇತಿ ಮತ್ತು ಮಾದರಿ ರೇಟಿಂಗ್ ಕೋರ್ಸ್ ಗಳಲ್ಲಿ ವಿದ್ಯಾರ್ಥಿಗಳಿಗೆ ಅಧ್ಯಯನ ಮಾಡಲು 3.72 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಈ ಒಂದು ಯೋಜನೆಯ ಮೂಲಕ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ
ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನದ ಉಪಯೋಗಗಳು..?
3.72 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು:- ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಮೂಲಕ ವಿದ್ಯಾರ್ಥಿಗಳು ಖಾಸಗಿ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿದ್ದರೆ ವರ್ಷಕ್ಕೆ 2 ಲಕ್ಷ ರೂಪಾಯಿವರೆಗೆ ಹಾಗೂ ವಾಣಿಜ್ಯ ಪ್ರಯೋಗಿಕ ತರಬೇತಿ ಮತ್ತು ಮಾದರಿ ರೇಟಿಂಗ್ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿದ್ದರೆ ವರ್ಷಕ್ಕೆ 3.72 ಲಕ್ಷ ರೂಪಾಯಿವರೆಗೆ ಪಿಎಂ ಯಶಸ್ವಿನಿ ಯೋಜನೆಯ ಮೂಲಕ ವಿದ್ಯಾರ್ಥಿಗಳು ಪಡಿಯಬಹುದು
ಪ್ರತಿ ತಿಂಗಳು 3000 ಹಣ:– ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಜೀವನೋಪಾಯ ವೆಚ್ಚಕ್ಕೆ ಅಥವಾ ಇತರ ಖರ್ಚುಗಳಿಗಾಗಿ ಪ್ರತಿ ತಿಂಗಳು 3000 ಹಣ ನೀಡಲಾಗುತ್ತದೆ
ಪಠ್ಯಪುಸ್ತಕ ಮತ್ತು ಲೇಖನ ಸಾಮಗ್ರಿಗಳು:- ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಇತರ ಲೇಖನಿ ಸಾಮಗ್ರಿಗಳ ಖರೀದಿಗೆ ವರ್ಷಕ್ಕೆ 5000 ವಿದ್ಯಾರ್ಥಿ ವೇತನ ಸಿಗುತ್ತದೆ
ಕಂಪ್ಯೂಟರ್ ಮತ್ತು ಲ್ಯಾಪ್ ಟಾಪ್ ಗಳಿಗೆ ಸಹಾಯಧನ:- UPS ಹಾಗೂ ಇತರ ಪ್ರಿಂಟರ್ ಲ್ಯಾಪ್ ಟಾಪ್ ಮತ್ತು ಕಂಪ್ಯೂಟರ್ ಮತ್ತು ಇತರ ಸಾಮಗ್ರಿಗಳ ಖರೀದಿಗಾಗಿ ಒಂದೇ ಭಾರೀ 45,000 ವರೆಗೆ ಸಹಾಯಧನ ನೀಡಲಾಗುತ್ತದೆ
ಪಿಎಂ ಯಶಸ್ವಿನಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 9ನೇ ತರಗತಿ ಹಾಗೂ 11ನೇ ತರಗತಿಯಲ್ಲಿ ಪ್ರಸ್ತುತ ವರ್ಷದಲ್ಲಿ ಅಧ್ಯಯನ ಮಾಡುತ್ತಿರಬೇಕು ಹಾಗೂ ಶಿಕ್ಷಣ ಸಂಸ್ಥೆಗಳು ಸರಕಾರದಿಂದ ಮಾನ್ಯತೆ ಪಡೆದಿರಬೇಕು
- ಪಿಎಂ ಯಶಸ್ವಿನಿ (pm yashaswini scholarship) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿ ಮೀರಬಾರದು
- ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಓಬಿಸಿ ಅಥವಾ ಆರ್ಥಿಕವಾಗಿ ಹಿಂದುಳಿದ ವರ್ಗ ಮತ್ತು ಅರೆ ಅಲೆಮಾರಿ ಹಾಗೂ ಅಲೆಮಾರಿ ಬುಡಕಟ್ಟು ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು
ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಪಿಎಂ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಮೊದಲು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ ಮೂಲಕ ತಿಳಿದುಕೊಳ್ಳಿ ನಂತರ ನಾವು ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಮೇಲೆ ನೀಡಿದ ಎಲ್ಲಾ ಅರ್ಹತೆಗಳು ನೀವು ಹೊಂದಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ಹಾಗೂ ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು
Heavy Rains in Karnataka: ಜುಲೈ 13ರ ವರೆಗೆ ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆ! ಇಲ್ಲಿದೆ ನೋಡಿ IMD report