Ration Card Correction: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭವಾಗಿದೆ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭವಾಗಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿ ತಿಳಿಯೋಣ ಇದರ ಜೊತೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಯಾವಾಗ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ
ಯಾವುದೇ ಪರೀಕ್ಷೆ ಇಲ್ಲದೆ ಸರಕಾರಿ ಕೆಲಸ ಬೇಕೆ ಹಾಗಾದರೆ ಈ ಒಂದು ಕೆಲಸಕ್ಕೆ ಈಗಲೇ ಅರ್ಜಿ ಸಲ್ಲಿಸಿ
ರೇಷನ್ ಕಾರ್ಡ್ (Ration Card Correction).?
ಸ್ನೇಹಿತರೆ ಇವತ್ತಿನ ದಿನ ನಮ್ಮ ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಜಾರಿ ಇರುವಂತಹ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆ ಮತ್ತು ಗೃಹಜೋತಿ ಯೋಜನೆಯ ಲಾಭ ಪಡೆಯಬೇಕು ಅಂದರೆ ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕು ಮತ್ತು ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಬೇಕು ಅಂದರೆ ರೇಷನ್ ಕಾರ್ಡ್ ಹೊಂದುವುದು ಅತಿ ಮುಖ್ಯವಾಗಿದೆ ಆದ್ದರಿಂದ ಸಾಕಷ್ಟು ಜನರು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಎಂದು ಹೇಳಬಹುದು

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಸಾಕಷ್ಟು ಜನರು ಇದೀಗ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ ಎಂದು ಹೇಳಬಹುದು.! ಹೌದು ಸ್ನೇಹಿತರೆ ಕೆಲವರಿಗೆ ಮಾತ್ರ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಇದರ ಜೊತೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಇರುವ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು (Ration Card Correction) ಯಾರಿಗೆ ಅವಕಾಶ.?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಆಹಾರ ಇಲಾಖೆಯ ಮೂಲಕ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಈಗಾಗಲೇ ಹಲವು ಬಾರಿ ಅವಕಾಶ ಮಾಡಿಕೊಟ್ಟಿದೆ ಆದರೆ ಸರ್ವರ್ ಸಮಸ್ಯೆಯಿಂದ ತುಂಬಾ ಜನರು ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ.! ಮತ್ತು ಇದೇ ತಿಂಗಳು 12 ಮತ್ತು 13ನೇ ತಾರೀಕು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು ಆದರೆ ಸಾಕಷ್ಟು ಜನರಿಗೆ ಈ ವಿಷಯ ಗೊತ್ತಿಲ್ಲ ಹಾಗಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಬಿಟ್ಟ ತಕ್ಷಣ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ
ಸ್ನೇಹಿತರೆ ಪ್ರಸ್ತುತ ತುರ್ತು ಪರಿಸ್ಥಿತಿಗೆ ಸಂಬಂಧಪಟ್ಟಂತೆ ಅಂದರೆ ಯಾವುದೇ ಕುಟುಂಬದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದರೆ ಅಥವಾ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಅಥವಾ ಇತರ ವೈದ್ಯಕೀಯ ಚಿಕಿತ್ಸೆಗಾಗಿ ರೇಷನ್ ಕಾರ್ಡ್ ಅತ್ಯಗತ್ಯವಾಗಿದ್ದರೆ ಅಂತ ಕುಟುಂಬಗಳಿಗೆ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ನಿಮಗೆ ತುರ್ತು ಪರಿಸ್ಥಿತಿಗೆ ಅಥವಾ ಇತರ ವೈದ್ಯಕೀಯ ಚಿಕಿತ್ಸೆಗಾಗಿ ರೇಷನ್ ಕಾರ್ಡ್ ಬೇಕಾದರೆ ನೀವು ನಿಮ್ಮ ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ್ ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ರೇಷನ್ ಕಾರ್ಡ್ ತಿದ್ದುಪಡಿ (Ration Card Correction) ಮಾಡಲು ಕೊನೆಯ ದಿನಾಂಕ..?
ಹೌದು ಸ್ನೇಹಿತರೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ತಿದ್ದುಪಡಿಗೆ ಸುದೀರ್ಘವಾಗಿ ಅವಕಾಶ ಮಾಡಿಕೊಟ್ಟಿದೆ ಮತ್ತು ಕಳೆದ ಮೂರು ತಿಂಗಳಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಜನರಿಗೆ ಅವಕಾಶ ಮಾಡಿಕೊಟ್ಟಿದೆ ಮತ್ತು ಈ ತಿಂಗಳು ಅಂದರೆ ಫೆಬ್ರವರಿ 28 2025 ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಆಸಕ್ತಿ ಇರುವಂತಹ ಕುಟುಂಬದವರು ತಮ್ಮ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಹಾಗೂ ಇತರ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.
ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬದವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 4:00 PM ಗಂಟೆವರೆಗೆ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇದೇ ತಿಂಗಳು ಅಂದರೆ ಫೆಬ್ರವರಿ 28 ಕೊನೆಯ ದಿನಾಂಕವಾಗಿದೆ ಆದ್ದರಿಂದ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಿ
ರೇಷನ್ ಕಾರ್ಡ್ ತಿದ್ದುಪಡಿಗೆ (Ration Card Correction) ಬೇಕಾಗುವ ಅಗತ್ಯ ದಾಖಲಾತಿಗಳು.?
- ಅರ್ಜಿದಾರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- 6 ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಜನನ ಪ್ರಮಾಣ ಪತ್ರ ಬೇಕಾಗುತ್ತದೆ
- ರೇಷನ್ ಕಾರ್ಡ್
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರೆ ನಿಮಗೆ ಇದೇ ರೀತಿ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭವಾದ ತಕ್ಷಣ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ ಇದರಿಂದ ನಿಮಗೆ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಚನೆಗಳ ಬಗ್ಗೆ ಮಾಹಿತಿ ನಿಮಗೆ ಸಿಗುತ್ತದೆ
2 thoughts on “Ration Card Correction: ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭವಾಗಿದೆ ಬೇಗ ಅರ್ಜಿ ಸಲ್ಲಿಸಿ”