ಪಡಿತರ ಚೀಟಿ ತಿದ್ದುಪಡಿ: ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಈ ದಾಖಲಾತಿಗಳು ಕಡ್ಡಾಯ
ನಮಸ್ಕಾರ ಗೆಳೆಯರೇ ಇದೀಗ ರಾಜ್ಯ ಸರ್ಕಾರ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಹೊಸ ಸದಸ್ಯರನ್ನು ಸೇರ್ಪಡೆ ಮಾಡಲು ಹಾಗೂ ಹೊಸದಾಗಿ ಮದುವೆಯಾದ ದಂಪತಿಗಳ ಹೆಸರು ಸೇರ್ಪಡೆ ಮಾಡಲು ಮತ್ತು ಕುಟುಂಬದಲ್ಲಿ ಇರುವ ಮಕ್ಕಳು ಹಾಗೂ ಇತರೆ ಸದಸ್ಯರನ್ನು ಸೇರ್ಪಡೆ ಮಾಡಲು ಇದೀಗ ಮತ್ತೆ ಅವಕಾಶ ಮಾಡಿಕೊಟ್ಟಿದೆ.
ಆದರಿಂದ ನಾವು ಈ ಒಂದು ಲೇಖನಯ ಮೂಲಕ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲಾತಿಗಳು ಬೇಕು ಎಂಬ ವಿವರದ ಬಗ್ಗೆ ಮಾಹಿತಿ ತಿಳಿಯೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆವರೆಗೂ ಓದಿ

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ (ಪಡಿತರ ಚೀಟಿ ತಿದ್ದುಪಡಿ).?
ಹೌದು ಗೆಳೆಯರೆ ನಮ್ಮ ರಾಜ್ಯ ಸರ್ಕಾರ ಇದೀಗ ಕುಟುಂಬದಲ್ಲಿ ಹೊಸದಾಗಿ ಮದುವೆಯಾದಂತ ದಂಪತಿಗಳಿಗೆ ಹಾಗೂ ಮಕ್ಕಳು ಹಾಗೂ ಇತರೆ ಸದಸ್ಯರನ್ನು ಸೇರ್ಪಡೆ ಮಾಡಲು ಹಾಗು ತೆಗೆದು ಹಾಕಲು ಮತ್ತು ರೇಷನ್ ಕಾರ್ಡ್ ನಲ್ಲಿ ಯಾವುದೇ ಹೆಸರು ತಿದ್ದುಪಡಿ ಮತ್ತು ತಪ್ಪಾದ ಮಾಹಿತಿಯನ್ನು ಸರಿಪಡಿಸಿಕೊಳ್ಳಲು ಇದೀಗ ಮತ್ತೆ ಅವಕಾಶ ಮಾಡಿಕೊಟ್ಟಿದೆ.
ಹಾಗಾಗಿ ಆಸಕ್ತಿ ಇರುವವರು ಕೂಡಲೇ ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೆಸರು ಬದಲಾವಣೆ ಮತ್ತು ವಿಳಾಸ ಬದಲಾವಣೆ ಇತರೆ ಅಗತ್ಯ ಮಾಹಿತಿಗಳನ್ನು ತಿದ್ದುಪಡಿ ಮಾಡಬಹುದು
ಪಡಿತರ ಚೀಟಿ ತಿದ್ದುಪಡಿ ಮಾಡಲು ಕೊನೆಯ ದಿನಾಂಕ ಹಾಗೂ ಪಡಿತರ ಚೀಟಿ ತಿದ್ದುಪಡಿ ಮಾಡುವುದು ಹೇಗೆ.?
ಪಡಿತರ ಚೀಟಿ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ 30 ಮಾರ್ಚ್ 2026 ವರೆಗೆ ರಾಜ್ಯದ ಜನತೆಗೆ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಆಸಕ್ತಿ ಇರುವವರು ನಿಮ್ಮ ಹತ್ತಿರದ ಗ್ರಾಮ್ ಒನ್ (Gram One), ಬೆಂಗಳೂರು ಒನ್, ಕರ್ನಾಟಕ ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ತಪ್ಪಾದ ಮಾಹಿತಿಯನ್ನು ಬದಲಾವಣೆ ಮಾಡಬಹುದು
ಪಡಿತರ ಚೀಟಿ ತಿದ್ದುಪಡಿಯಲ್ಲಿ ಯಾವ ಬದಲಾವಣೆ ಮಾಡಲು ಅವಕಾಶ..?
- ಕುಟುಂಬದ ಹೊಸದಾಗಿ ಮದುವೆಯಾದಂತ ದಂಪತಿಗಳು ಹಾಗೂ ಮಕ್ಕಳು ಮತ್ತು ಕುಟುಂಬದ ಇತರೆ ಸದಸ್ಯರನ್ನು ಸೇರ್ಪಡೆ ಮಾಡಲು ಅವಕಾಶ
- ಪಡಿತರ ಚೀಟಿಯಲ್ಲಿ ಇರುವ ಸದಸ್ಯರನ್ನು ಡಿಲೀಟ್ ಮಾಡುವುದು ಅಥವಾ ತೆಗೆದು ಹಾಕಲು ಅವಕಾಶ
- ಪಡಿತರ ಚೀಟಿಯಲ್ಲಿ ಹೆಸರು ಬದಲಾವಣೆ ಹಾಗೂ ವಿಳಾಸ ತಿದ್ದುಪಡಿ ಮತ್ತು ನ್ಯಾಯಬೆಲೆ ಅಂಗಡಿ ಬದಲಾವಣೆ ಹಾಗೂ ಇತರೆ ಮಾಹಿತಿಯನ್ನು ತಿದ್ದುಪಡಿ ಮಾಡಲು ಅವಕಾಶ
- ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ಸರಿಪಡಿಸಿಕೊಳ್ಳಲು ಅವಕಾಶವಿದೆ
ಪಡಿತರ ತಿದ್ದುಪಡಿ ಮಾಡಲು ಬೇಕಾಗುವ ಅಗತ್ಯ ದಾಖಲಾತಿಗಳ ಪಟ್ಟಿ..?
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಕಡ್ಡಾಯ
- ಆರು ವರ್ಷ ಮೇಲ್ಪಟ್ಟರೆ ಅಂತ ಸಂದರ್ಭದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ
- ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಹುಟ್ಟಿದ ದಿನಾಂಕ ಅಥವಾ ಜನನ ಪ್ರಮಾಣ ಪತ್ರ ಬೇಕಾಗುತ್ತದೆ
- ವಿಳಾಸ ಬದಲಾವಣೆಗೆ ಅಗತ್ಯ ದಾಖಲಾತಿಗಳು ವೋಟರ್ ಐಡಿ, ವಾಸ ಸ್ಥಳ ಪ್ರಮಾಣ ಪತ್ರ, ಇತರೇ ಅಗತ್ಯ ದಾಖಲಾತಿಗಳು ಬೇಕು
- ರೇಷನ್ ಕಾರ್ಡ್
- ಮೊಬೈಲ್ ಸಂಖ್ಯೆ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇಂಥವರಿಗೆ ಅವಕಾಶ..?
ಹೊಸ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಪ್ರಸ್ತುತ ಕೇಂದ್ರ ಸರ್ಕಾರ ಇದೀಗ ಅಸಂಘಟಿತ ವಲಯದ ಕಾರ್ಮಿಕರಿಗೆ ಅಂದರೆ ಇ-ಶ್ರಮ್ ಕಾರ್ಡ್ ಹೊಂದಿದಂತ ಸದಸ್ಯರಿಗೆ ಹೊಸ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಆಸಕ್ತಿ ಇರುವವರು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ದಿನಾಂಕ 30 ಮಾರ್ಚ್ 2026 ರವರೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು.?
- ಇ ಶ್ರಮ್ ಕಾರ್ಡ್ ಕಡ್ಡಾಯ
- ಮೊಬೈಲ್ ಸಂಖ್ಯೆ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ತುಂಬಾ ಸುಲಭವಾಗಿ ಸೇರಿಕೊಳ್ಳಿ ಹಾಗೂ ಪ್ರತಿದಿನ ಮಾಹಿತಿ ಪಡೆಯಿರಿ
Labour Scholarship 2025: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ₹20,000 ವಿದ್ಯಾರ್ಥಿವೇತನ ಪಡೆಯಲು ಅರ್ಜಿ ಆಹ್ವಾನ!









