Ration Card Update: ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ.! ಕೇವಲ ಇನ್ನು 2 ದಿನ ಮಾತ್ರ ಅವಕಾಶ
ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಇದೀಗ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿದ್ದು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇದೇ ಡಿಸೆಂಬರ್ 31 2024 ಕೊನೆಯ ದಿನಾಂಕವಾಗಿದ್ದು ಆಸಕ್ತಿ ಇರುವಂತಹ ಅರ್ಜಿದಾರರು ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಸದಸ್ಯರ ಹೆಸರು ಸೇರ್ಪಡೆ ಹಾಗೂ ಇತರ ರೇಷನ್ ಕಾರ್ಡ್ ನಲ್ಲಿ ಯಾವುದೇ ಬದಲಾವಣೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನನ್ನು ಕೊನೆವರೆಗೂ ಓದಿ
ರೇಷನ್ ಕಾರ್ಡ್ ತಿದ್ದುಪಡಿ (Ration Card Update)..?
ಹೌದು ಸ್ನೇಹಿತರೆ ಸಾಕಷ್ಟು ಜನರು ತಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಶೇರ್ ಪಡೆ ಹಾಗೂ ಸದಸ್ಯರನ್ನು ತೆಗೆದುಹಾಕುವುದು ಮತ್ತು ರೇಷನ್ ಕಾರ್ಡ್ ನಲ್ಲಿ ಯಾವುದೇ ಬದಲಾವಣೆ ಮಾಡಲು ಕಾಯುತ್ತಿದ್ದರು ಅಂತವರಿಗೆ ರಾಜ್ಯ ಸರ್ಕಾರ ಇದೆ ಡಿಸೆಂಬರ್ 3ನೇ ತಾರೀಕಿನಿಂದ ಡಿಸೆಂಬರ್ 31 ನೇ ತಾರೀಖಿನವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿದ್ದು ನೀವೇನಾದರೂ ರೇಷನ್ ಕಾರ್ಡ್ ನಲ್ಲಿ ಯಾವುದೇ ತಿದ್ದುಪಡಿ ಅಥವಾ ಬದಲಾವಣೆ ಮಾಡಲು ಬಯಸುತ್ತಿದ್ದರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ

ಹೌದು ಸ್ನೇಹಿತರೆ ಇನ್ನು ಕೇವಲ ಎರಡು ದಿನಗಳ ಮಾತ್ರ ಕಾಲಾವಕಾಶ ಇದ್ದು ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುತ್ತಿದ್ದರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬೇಕಾಗುವ ದಾಖಲಾತಿಗಳು ಹಾಗೂ ತಿದ್ದುಪಡಿ ಮಾಡಲು ಇರುವಂತಹ ಸಮಯ ಇತರ ವಿವರಗಳ ಬಗ್ಗೆ ಕೆಳಗಡೆ ಮಾಹಿತಿ ನೀಡಿದ್ದೆ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ (Ration Card Update)..?
ಸ್ನೇಹಿತರೆ ನಿಮ್ಮ ಬಳಿ ಬಿಪಿಎಲ್ ಅಥವಾ ಎಪಿಎಲ್ ರೇಷನ್ ಕಾರ್ಡ್ ಇದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಡಿಸೆಂಬರ್ 31 ನೇ ತಾರೀಖಿನವರೆಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಕೂಡಲೇ ನಿಮ್ಮ ಹತ್ತಿರದ ಈ ಮೇಲೆ ತಿಳಿಸಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ
ರೇಷನ್ ಕಾರ್ಡ್ ನಲ್ಲಿ ಏನು ಬದಲಾವಣೆ ಮಾಡಬಹುದು..?
- ಹೊಸ ಸದಸ್ಯರ ಸೇರ್ಪಡೆ ಮಾಡಲು ಅವಕಾಶ
- ರೇಷನ್ ಕಾರ್ಡ್ ನಿಂದ ಸದಸ್ಯರ ತೆಗೆದು ಹಾಕಲು ಅವಕಾಶ
- ರೇಷನ್ ಕಾರ್ಡ್ ನಲ್ಲಿ ತಪ್ಪಾದ ಹೆಸರನ್ನು ಸರಿಪಡಿಸಬಹುದು
- ರೇಷನ್ ಕಾರ್ಡ್ ಕುಟುಂಬದ ಮುಖ್ಯಸ್ಥರ ಬದಲಾವಣೆ
- ರೇಷನ್ ಕಾರ್ಡ್ ನ್ಯಾಯಬೆಲೆ ಅಂಗಡಿಯ ಬದಲಾವಣೆ
- ರೇಷನ್ ಕಾರ್ಡ್ ವಿಳಾಸದ ಬದಲಾವಣೆ
- APL ನಿಂದಾ BPL ರೇಷನ್ ಕಾರ್ಡ್ ಆಗಿ ಬದಲಾವಣೆ ಮಾಡಬಹುದು
- ಇತರ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ
ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳು..?
- ರೇಷನ್ ಕಾರ್ಡ್
- ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಜನನ ಪ್ರಮಾಣ ಪತ್ರ
- ಇತರ ಅಗತ್ಯ ದಾಖಲಾತಿಗಳು
ವಿಶೇಷ ಸೂಚನೆ:– ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ಹಲವಾರು ವಿಷಯಗಳ ಬಗ್ಗೆ ಪ್ರತಿದಿನ ಹೊಸ ಸುದ್ದಿ ತಿಳಿಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು