Reliance Foundation Scholarship 2025 – ವಿದ್ಯಾರ್ಥಿಗಳಿಗೆ ಸಿಗಲಿದೆ 2 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ.! ರಿಲಯನ್ಸ್ ಫೌಂಡೇಶನ್ ವತಿಯಿಂದ ಅರ್ಜಿ ಆಹ್ವಾನ

Reliance Foundation Scholarship 2025 – ವಿದ್ಯಾರ್ಥಿಗಳಿಗೆ ಸಿಗಲಿದೆ 2 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ.! ರಿಲಯನ್ಸ್ ಫೌಂಡೇಶನ್ ವತಿಯಿಂದ ಅರ್ಜಿ ಆಹ್ವಾನ

ನಮಸ್ಕಾರ ಸ್ನೇಹಿತರೆ ರಿಲಯನ್ಸ್ ಇಂಡಸ್ಟ್ರಿ ವತಿಯಿಂದ ಇದೀಗ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.! ಹೌದು ಸ್ನೇಹಿತರೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವತಿಯಿಂದ ಸುಮಾರು 2 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಸಿಗಲಿದೆ.!

ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬೇಕು ಎಂಬ ವಿವರವನ್ನು ತಿಳಿದುಕೊಳ್ಳೋಣ

 

ಪೋಸ್ಟ್ ಪೇಮೆಂಟ್ ಬ್ಯಾಂಕಿನಲ್ಲಿ ಉದ್ಯೋಗ ಸಿಗುತ್ತೆ ತಿಂಗಳಿಗೆ 37,000 ವರೆಗೆ ಸಂಬಳ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ

 

WhatsApp Group Join Now
Telegram Group Join Now       

ರಿಲಯನ್ಸ್ ಫೌಂಡೇಶನ್ ಸ್ಕಾಲರ್ಶಿಪ್ ಯೋಜನೆ (Reliance Foundation Scholarship 2025)..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶದ ಉದ್ಯಮ ಸಂಸ್ಥೆಗಳಲ್ಲಿ ಅಗ್ರ ಗಣ್ಯ ಸ್ಥಾನದಲ್ಲಿ ಬರುವ ಸಂಸ್ಥೆ ಯಾವುದು ಅಂದರೆ ಅದು ರಿಲಯನ್ಸ್ ಇಂಡಸ್ಟ್ರಿ.! ಇದೀಗ ಈ ಸಂಸ್ಥೆ ತನ್ನ ರಿಲಯನ್ಸ್ ಫೌಂಡೇಶನ್ ವತಿಯಿಂದ 2025 ಮತ್ತು 26 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವ ನೀಡುವ ಉದ್ದೇಶದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಮಾಡಿದೆ

Reliance Foundation Scholarship 2025
Reliance Foundation Scholarship 2025

 

ಆದ್ದರಿಂದ ವಿದ್ಯಾರ್ಥಿಗಳು ಈ ರಿಲಯನ್ಸ್ ಫೌಂಡೇಶನ್ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಸುಮಾರು 2 ಲಕ್ಷ ರೂಪಾಯಿಯಿಂದ ಗರಿಷ್ಠ 6 ಲಕ್ಷ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿಗಳು ತನ್ನ ಬಗ್ಗೆ ಇನ್ನಷ್ಟು ವಿವರವನ್ನು ಇದೀಗ ತಿಳಿದುಕೊಳ್ಳೋಣ

 

ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನ ಪ್ರಾರಂಭವಾದದ್ದು ಹೇಗೆ..?

ಸ್ನೇಹಿತರೆ ರಿಲಯನ್ಸ್ ಫೌಂಡೇಶನ್ (reliance foundation Scholarship) ವಿದ್ಯಾರ್ಥಿ ವೇತನವನ್ನು ಶ್ರೀಮತಿ ಅನಿತಾ ಅಂಬಾನಿಯವರು 2022ನೇ ವರ್ಷದಲ್ಲಿ ಧೀರೂಭಾಯಿ ಅಂಬಾನಿ 90 ನೇ ಜನ್ಮದಿನದ ಪ್ರಯುಕ್ತ ಈ ಒಂದು (Scholarship) ವಿದ್ಯಾರ್ಥಿ ವೇತನ ಪ್ರಾರಂಭ ಮಾಡಲಾಯಿತು..

ಈ ರಿಲಯನ್ಸ್ ಫೌಂಡೇಶನ್ ವತಿಯಿಂದ ಮುಂದಿನ 10 ವರ್ಷಗಳ ಕಾಲ ಸುಮಾರು 50 ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿ ವೇತನಗಳನ್ನು ನೀಡುವುದು ಗುರಿ ಹೊಂದಲಾಗಿದೆ ಎಂದು ಶ್ರೀಮತಿ ಅನಿತಾ ಅಂಬಾನಿಯವರು ಮಾಹಿತಿ ತಿಳಿಸಿದ್ದಾರೆ.! ಅದೇ ರೀತಿ ಈ (Apply online last date) ವರ್ಷವೂ ಕೂಡ ಸುಮಾರು 5,100 – ವಿದ್ಯಾರ್ಥಿ ವೇತನಗಳನ್ನು  ದೀರ್ಘಕಾಲಿನ (long term commitment) ಆಧಾರದ ಮೇಲೆ ನಡೆಸಲಾಗುತ್ತಿದೆ..

WhatsApp Group Join Now
Telegram Group Join Now       

ರಿಲಯನ್ಸ್ ಫೌಂಡೇಶನ್ ಇದೀಗ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಯಾವಾಗಲೂ ಬೆಂಬಲಿಸುತ್ತಾ ಬಂದಿದೆ ಮತ್ತು ಇಲ್ಲಿವರೆಗೂ ಸುಮಾರು 28,000 ಕ್ಕಿಂತ ಹೆಚ್ಚು ವಿದ್ಯಾರ್ಥಿ ವೇತನಗಳನ್ನು ವಿವಿಧ ಮಾರ್ಗಗಳ ಮೂಲಕ ನೀಡುತ್ತಾ ಬಂದಿದೆ.!

ಇತರ ವಿದ್ಯಾರ್ಥಿ ವೇತನಗಳನ್ನು ನೀಡುವುದರ ಮೂಲಕ ಸಾಮಾಜಿಕವಾಗಿ ಹಿಂದುಳಿದ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡುವುದು ಹಾಗೂ ಡಿಜಿಟಲ್ ಚಿಂತನೆ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ನೆರವು ನೀಡುವುದು ಹಾಗೂ ಭಾರತ ದೇಶದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಒಳ್ಳೆಯ ವಿದ್ಯಾರ್ಥಿಗಳನ್ನು ಗುರುತಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ

 

ರಿಲಯನ್ಸ್ ಫೌಂಡೇಶನ್ ವತಿಯಿಂದ ಎಷ್ಟು ಆರ್ಥಿಕ ಸಹಾಯ ಸಿಗುತ್ತದೆ(Reliance Foundation Scholarship 2025)..?

ಸ್ನೇಹಿತರೆ ರಿಲಯನ್ಸ್ ಫೌಂಡೇಶನ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪದವಿ ಪೂರ್ಣಗೊಳಿಸಲು ಸುಮಾರು 2 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ

ಅದೇ ರೀತಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅಂದರೆ ತಂತ್ರಜ್ಞಾನ, ಇಂಜಿನಿಯರಿಂಗ್, ಇಂಧನ ಮತ್ತು ಜೀವ ವಿಜ್ಞಾನ, ಮತ್ತು ಇತರ ಕೆಲ ಆಯ್ದ ಕ್ಷೇತ್ರಗಳಲ್ಲಿ ಅಧ್ಯಯನ ಮಾಡುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರಿಸುಮಾರು 6 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಈ ಒಂದು ಫೌಂಡೇಶನ್ ನೀಡುತ್ತದೆ

ಈ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಬಯಸುವ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮತ್ತು ಪ್ರಮಾಣ ಪತ್ರ ಹಾಗೂ ಕುಟುಂಬದ ಆರ್ಥಿಕ ಹಿನ್ನೆಲೆ ಮತ್ತು ಇತರ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಈ ಒಂದು ವಿದ್ಯಾರ್ಥಿ ವೇತನ ನೀಡಲಾಗುತ್ತದೆ

 

ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಕೆ ಮಾಡಬಹುದು..?

ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನಕ್ಕೆ ಪ್ರಥಮ ವರ್ಷದಲ್ಲಿ ಪೂರ್ಣ ಅವಧಿ ಪದವಿ (under graduate) ಮತ್ತು ಸ್ನಾತಕೋತ್ತರ ಪದವಿ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ ಇದರ ಜೊತೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ನಮ್ಮ ಭಾರತದ ನಾಗರಿಕರಾಗಿರಬೇಕು ಹಾಗೂ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು

 

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ರಿಲಯನ್ಸ್ ಫೌಂಡೇಶನ್ ವತಿಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದರೆ ಮೊದಲು ಈ ಒಂದು ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ ಹಾಗೂ ಕೆಳಗಡೆ ನೀಡಿದ ಲಿಂಕ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸ್ಕಾಲರ್ಶಿಪ್ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದ್ದರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು

Leave a Comment

?>