SSLC Result 2025: ಎಸ್ ಎಸ್ ಎಲ್ ಸಿ (SSLC Result 2025) ಫಲಿತಾಂಶ ದಿನಾಂಕ (date) ಮತ್ತು ಸಮಯ (Time) ಬಿಡುಗಡೆ.! ಈ ರೀತಿ ರಿಸಲ್ಟ್ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೇ ಎಸ್ ಎಸ್ ಎಲ್ ಸಿ ಪರೀಕ್ಷೆ-೧ ರ ಫಲಿತಾಂಶ ಬಿಡುಗಡೆಯ ದಿನಾಂಕ ಮತ್ತು ಸಮಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇದೀಗ ಬಿಡುಗಡೆ ಮಾಡಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಹಾಗೂ ಈ ಪರೀಕ್ಷೆ ಪಲಿತಾಂಶವನ್ನು ಮೊಬೈಲ್ ಮೂಲಕ ಚೆಕ್ ಮಾಡುವುದು ಹೇಗೆ ಮತ್ತು ಪರೀಕ್ಷೆ ಫಲಿತಾಂಶ ಚೆಕ್ ಮಾಡಲು ಬೇಕಾಗುವ ಪ್ರಮುಖ ಲಿಂಕ್ ಹಾಗೂ ಎಷ್ಟು ವಿದ್ಯಾರ್ಥಿಗಳು ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿದ್ದಾರೆ ಎಂಬ ವಿವರವನ್ನು ತಿಳಿದುಕೊಳ್ಳೋಣ
ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಬಿಡುಗಡೆಯ ದಿನಾಂಕ ಮತ್ತು ಸಮಯ ನಿಗದಿ..?
ಹೌದು ಸ್ನೇಹಿತರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ ಹಾಗಾಗಿ ಪ್ರಸ್ತುತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಅಂಕಗಳನ್ನು ಕಂಪ್ಯೂಟರ್ ದಾಖಲಾತಿಕರಣ ಮಾಡಲು ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ತಿಳಿಸಿದೆ ಹಾಗೂ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಎರಡರಂದು ಪ್ರಕಟಿಸಲಾಗುತ್ತದೆ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ

ಹೌದು ಸ್ನೇಹಿತರೆ ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಕೋರ್ಸ್ಗಳ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿ ಪ್ರಾರಂಭವಾಯಿತು ಹಾಗಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಮೇ ಮೂರನೇ ತಾರೀಕಿನಂದು ಬಿಡುಗಡೆ ಮಾಡಲು ತಯಾರಿ ಮಾಡಲಾಗಿದೆ ಹಾಗಾಗಿ ಮೇ 03 2025 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಪ್ರಕಟಣೆಯಾಗುತ್ತದೆ..!
ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಜೊತೆ ಏಪ್ರಿಲ್ 16 ಮತ್ತು 17ರಂದು CET ಪರೀಕ್ಷೆ ನಡೆಸಲಾಯಿತು ಹಾಗೂ ಈ ಒಂದು ಪರೀಕ್ಷೆಯಲ್ಲಿ ಸುಮಾರು 30 ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ ಹಾಗೂ ಈ ಒಂದು ಪರೀಕ್ಷೆಯ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿ ಪ್ರಕಟಣೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗೂ ನಮ್ಮ ರಾಜ್ಯ ಸರ್ಕಾರದ ದ್ವಿತೀಯ ಪಿಯುಸಿ ಪರೀಕ್ಷೆ ಎರಡರ ಫಲಿತಾಂಶವನ್ನು ಶೀಘ್ರದಲ್ಲೇ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ
ಇದರ ಜೊತೆಗೆ CBSE & ICSE 12ನೇ ತರಗತಿ ಫಲಿತಾಂಶ ಪ್ರಕಟವಾಗಬೇಕು ಹಾಗಾಗಿ ಈ ಎಲ್ಲಾ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ.! ಹಾಗಾಗಿ ಈ ಒಂದು ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಬೇಗ ಪ್ರಕಟಣೆ ಆಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ. ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ-೧ ರಲ್ಲಿ ಸುಮಾರು 7 ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಬರೆದಿದ್ದಾರೆ ಹಾಗಾಗಿ ಪರೀಕ್ಷಾ ಚೆಕ್ ಮಾಡುವ ವಿಧಾನದ ಬಗ್ಗೆ ಕೆಳಗಡೆ ತಿಳಿಸಲಾಗಿದೆ
ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ-೧ ಪಲಿತಾಂಶ ಚೆಕ್ (check ) ಮಾಡುವುದು ಹೇಗೆ..?
ಎಸ್ ಎಸ್ ಎಲ್ ಸಿ ಪರೀಕ್ಷೆ -೧ ಫಲಿತಾಂಶವನ್ನು ಚೆಕ್ ಮಾಡಲು ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ https://karresults.nic.in/ ಭೇಟಿ ನೀಡಬೇಕು
ನಂತರ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ನಂಬರ್ ಅಥವಾ ನೋಂದಾಣಿ ಸಂಖ್ಯೆಯನ್ನು ಎಂಟರ್ ಮಾಡಬೇಕು ಹಾಗೂ ಕೆಳಗಡೆ ಹುಟ್ಟಿದ ದಿನಾಂಕ ಮತ್ತು ಶಾಲೆಯ ಹೆಸರು ಇತರ ವಿವರಗಳನ್ನು ಎಂಟರ್ ಮಾಡಿ ಸಬ್ಮಿಟ್ ಕೊಡಬೇಕು
ನಂತರ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ನೋಡಲು ಸಿಗುತ್ತದೆ ಹಾಗೂ ಈ ಒಂದು ಪಲಿತಾಂಶವನ್ನು ಮೊಬೈಲ್ ಮೂಲಕ ನೇರವಾಗಿ ಡೌನ್ಲೋಡ್ ಅಥವಾ ಸ್ಕ್ರೀನ್ಶಾಟ್ ತೆಗೆದುಕೊಳ್ಳಬಹುದು