SSP Scholarship 2025: SSP ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ. ಕೊನೆಯ ದಿನಾಂಕ ಇದೆ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ssp ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಈ ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗುತ್ತೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ತಿಳಿದುಕೊಳ್ಳೋಣ
ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಪ್ರಾರಂಭವಾಗಿದೆ ತಕ್ಷಣ ಈ ವರ್ಗದ ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ
SSP ಸ್ಕಾಲರ್ಶಿಪ್ ಯೋಜನೆ (SSP Scholarship 2025)..?
ನಮ್ಮ ಕರ್ನಾಟಕ ಸರ್ಕಾರ ಆರ್ಥಿಕವಾಗಿ ದುರ್ಬಲ ಹಿನ್ನೆಲೆ ಉಳ್ಳ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದ ಹಾಗೂ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಈ ಒಂದು ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ.! ಈ ಸ್ಕಾಲರ್ಶಿಪ್ ಮೂಲಕ ಎಸ್ ಸಿ, ಎಸ್ ಟಿ, ಓಬಿಸಿ ಹಾಗೂ ಇತರ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಉನ್ನತ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕ ಹಾಗೂ ನಿರ್ವಹಣೆ ಬಟ್ಟೆಗಳು ಮತ್ತು ಇತರ ಶೈಕ್ಷಣಿಕ ವೆಚ್ಚಗಳನ್ನು ಬರಿಸುವ ಉದ್ದೇಶದಿಂದ ಆರ್ಥಿಕ ನೆರವು ನೀಡುತ್ತಿದೆ

ಹೌದು ಸ್ನೇಹಿತರೆ, ಇದೀಗ SSP ಸ್ಕಾಲರ್ಶಿಪ್ ಯೋಜನೆಗೆ ಈಗಾಗಲೇ ಅರ್ಜಿ ಪ್ರಾರಂಭವಾಗಿದೆ ಹಾಗೂ ಕೆಲ ಸಮುದಾಯದ ವಿದ್ಯಾರ್ಥಿಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಕ್ತಾಯಗೊಂಡಿದ್ದು ಈಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಮಾಡಿದೆ ಹಾಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
SSP ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು..?
ಸ್ನೇಹಿತರೆ ಪ್ರಸ್ತುತ ಈಗಾಗಲೇ ಕೆಲ ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ದಿನಾಂಕ ಮುಕ್ತಾಯವಾಗಿದ್ದು ಪ್ರಸ್ತುತ 20 ಡಿಸೆಂಬರ್ 2024 ರ ನಂತರ ಸ್ವೀಕರಿಸಿದ ಅರ್ಜಿಗಳನ್ನು ಶುಲ್ಕ ಮರುಪಾವತಿ ಯೋಜನೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಬರುವ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಎಲ್ಲಾ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಮೇ 2025 ನಿಗದಿ ಮಾಡಲಾಗಿದೆ
ಹೌದು ಸ್ನೇಹಿತರೆ ಪ್ರಸ್ತುತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ssp ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಹಾಗೂ ಹೆಚ್ಚಿನ ವಿವರ ಪಡೆಯಲು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ..?
ಸ್ನೇಹಿತರ ಪ್ರಸ್ತುತ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೆಟ್ರಿಕ್ ನಂತರದ ಅಂದರೆ ಹತ್ತನೇ ತರಗತಿ ನಂತರ ಓದುತ್ತಿರುವ ಯಾವುದೇ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
SSP ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ಕನಿಷ್ಠ ₹1,000 ರೂಪಾಯಿಯಿಂದ ಗರಿಷ್ಠ ₹50,000 ವರೆಗೆ ವಿದ್ಯಾರ್ಥಿ ವೇತನ ಅಥವಾ ಹಣವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಮತ್ತು ಈ ಒಂದು ವಿದ್ಯಾರ್ಥಿ ವೇತನ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ ಹಾಗಾಗಿ ಹೆಚ್ಚಿನ ವಿವರವನ್ನು ಪಡೆಯಲು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಕಾಲೇಜು ಪ್ರವೇಶ ಪ್ರಮಾಣ ಪತ್ರ
- ವಸತಿ ನಿಲಯದ ವಿವರಗಳು
- ವಿದ್ಯಾರ್ಥಿಯ ಪೋಷಕರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಹಿಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
- ಇತರೆ ಅಗತ್ಯ ದಾಖಲಾತಿಗಳು
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಆ ಒಂದು ಲಿಂಕ್ ಬಳಸಿಕೊಂಡು ಅಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ನಮೂದಿಸಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಎಸ್ ಎಸ್ ಪಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (SSP Scholarship 2025) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (date and time) 30/05/2025
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ವಿದ್ಯಾರ್ಥಿ ವೇತನಗಳ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಇತರ ಜೊತೆಗೆ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಸರ್ಕಾರದ ವಿವಿಧ ಗ್ಯಾರಂಟಿ ಯೋಜನೆಗಳ ಕುರಿತು ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
3 thoughts on “SSP Scholarship 2025: SSP ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ. ಕೊನೆಯ ದಿನಾಂಕ ಇದೆ”