SSP Scholarship: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ.! ದಿನಾಂಕ ವಿಸ್ತರಣೆ, ಕೊನೆಯ ದಿನಾಂಕ ಯಾವಾಗ
ನಮಸ್ಕಾರ ಸ್ನೇಹಿತರೆ ಇದೀಗ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಈ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.! ಹೌದು ಸ್ನೇಹಿತರೆ ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCWD) 2024 ಮತ್ತು 25 ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹಾಗೂ ಅರ್ಜಿ ಶುಲ್ಕ ಮರುಪಾವತಿಗಾಗಿ ದಿನಾಂಕ ವಿಸ್ತರಣೆ ಮಾಡಲಾಗಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮುಂತಾದ ವಿವರಗಳನ್ನು ತಿಳಿದುಕೊಳ್ಳೋಣ
SSP ಸ್ಕಾಲರ್ಶಿಪ್ ಯೋಜನೆ (SSP Scholarship)..?
ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ವಿವಿಧ ಇಲಾಖೆಗಳ ಅಡಿಯಲ್ಲಿ ವಿವಿಧ ಸಮುದಾಯದ ಹಾಗೂ ಬಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವಂಥ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ 50,000 ವರೆಗೆ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಅನುಗುಣವಾಗಿ ನೀಡಲಾಗುತ್ತಿದೆ.!

SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಈಗಾಗಲೇ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿತ್ತು ಆದರೆ ಕೆಲ ಸಮುದಾಯ ಹಾಗೂ ಕೆಲವು ಇಲಾಖೆಗಳ ಅಡಿಯಲ್ಲಿ ಬರುವಂತಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಗಿದಿದೆ ಇದೀಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCWD) 2024 ಮತ್ತು 25ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಮರುಪಾವತಿಗಾಗಿ ವಿದ್ಯಾರ್ಥಿಗಳಿಗೆ ಮತ್ತೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಅಕ್ಟೋಬರ್ 2025 ರ ವರೆಗೆ ವಿಸ್ತರಣೆ ಮಾಡಲಾಗಿದೆ ಹಾಗಾಗಿ ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (SSP Scholarship)..?
ಸ್ನೇಹಿತರೆ ಪ್ರಸ್ತುತ ಹತ್ತನೇ ತರಗತಿ ನಂತರ ವಿದ್ಯಾಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ 1 ಮತ್ತು ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಕೂಡಲೇ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಅಕ್ಟೋಬರ್ 2025 ನಿಗದಿ ಮಾಡಲಾಗಿದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (SSP Scholarship).?
- ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
- ಪ್ರಸ್ತುತ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಅಲೆಮಾರಿ ಮತ್ತು ಅಲೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಗೆ ಹಾಗೂ ಪ್ರವರ್ಗ 1 ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2,50,000 ಗಿಂತ ಒಳಗಡೆ ಇರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಇಂದಿನ ತರಗತಿಯಲ್ಲಿ ಕನಿಷ್ಠ 50% ಅಂಕ ಗಳಿಸಿರಬೇಕು ಹಾಗೂ ಒ ಬಿ ಸಿ ಮತ್ತು ಪ್ರವರ್ಗ 1 ವಿದ್ಯಾರ್ಥಿಗಳು ಕನಿಷ್ಠ 45% ಅಂಕ ಕಳಿಸಿರಬೇಕು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (SSP Scholarship).?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಕಾಲೇಜು ಪ್ರವೇಶ ಪತ್ರ
- ಹಿಂದಿನ ಶೈಕ್ಷಣಿಕ ವರ್ಷದ ಅಂಕ ಪಟ್ಟಿಗಳು
- ಬ್ಯಾಂಕ್ ಪಾಸ್ ಬುಕ್
- ಇತರೆ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (SSP Scholarship).?
SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಮೇಲೆ ತಿಳಿಸಿದ ಎಲ್ಲಾ ಅರ್ಹತೆಗಳನ್ನು ಹೊಂದಿದ್ದರೆ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ವೆಬ್ಸೈಟ್ SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಲಾಗಿದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ರಾಜ್ಯದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಮಾಹಿತಿ ತಿಳಿದುಕೊಳ್ಳಲು ಬಯಸುತ್ತಿದ್ದರೆ ನಮ್ಮ ವಾಟ್ಸಾಪ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಸಿಗುತ್ತವೆ