Tata Capital Pank Scholarship: ವಿದ್ಯಾರ್ಥಿಗಳಿಗೆ ₹15000 ರಿಂದ ₹1 ಲಕ್ಷದವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ಇಂದೇ ಅರ್ಜಿ ಸಲ್ಲಿಸಿ
ನಮಸ್ಕಾರ ಗೆಳೆಯರೇ ಟಾಟಾ ಕ್ಯಾಪಿಟಲ್ ವತಿಯಿಂದ ಇದೀಗ ವಿದ್ಯಾರ್ಥಿಗಳಿಗೆ ಬರೋಬ್ಬರಿ 15000 ಇಂದ 1 ಲಕ್ಷದವರೆಗೆ ಸ್ಕಾಲರ್ಶಿಪ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ.
ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನೆಯನ್ನು ಕೊನೆವರೆಗೂ ಓದಿ

ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ಶಿಪ್ ಯೋಜನೆ ಅಂದರೆ ಏನು (Tata Capital Pank Scholarship).?
ಹೌದು ಗೆಳೆಯರೇ ನಮ್ಮ ದೇಶದ ಪ್ರತಿಷ್ಠಿತ ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆ ಇದೀಗ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯುವ ಉದ್ದೇಶದಿಂದ ಹಾಗೂ ಶಿಕ್ಷಣ ಪಡೆಯಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಟಾಟಾ ಕ್ಯಾಪಿಟಲ್ ಪಾಂಖ್ ಸ್ಕಾಲರ್ಶಿಪ್ ಯೋಜನೆ ಜಾರಿಗೆ ತಂದಿದೆ.
ಈ ಒಂದು ಯೋಜನೆ ಮೂಲಕ ಪಿಯುಸಿ ಹಾಗೂ ಐಟಿಐ ಮತ್ತು ಪಾಲಿಟೆಕ್ನಿಕ್, ಡಿಪ್ಲೋಮೋ ಹಾಗೂ ಸಾಮಾನ್ಯ ಪದವಿ ವಿದ್ಯಾರ್ಥಿಗಳು ಈ ಯೋಜನೆ ಮೂಲಕ ಸ್ಕಾಲರ್ಶಿಪ್ ಪಡೆಯಬಹುದು
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ (Tata Capital Pank Scholarship).?
ಹೌದು ಗೆಳೆಯರೆ ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆ ನೀಡುತ್ತಿರುವ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಪ್ರಸ್ತುತ 2025 ಮತ್ತು 26ನೇ ಸಾಲಿನ ಮೂರು ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
ಪಿಯುಸಿ ವಿದ್ಯಾರ್ಥಿಗಳಿಗೆ: ಹೌದು ಗೆಳೆಯರೇ ಪ್ರಸ್ತುತ 11 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ
ಪದವಿ: ಸಾಮಾನ್ಯ ಪದವಿ ಹಾಗೂ ಡಿಪ್ಲೋಮೋ ಮತ್ತು ಐಟಿಐ, ಪಾಲಿಟೆಕ್ನಿಕ್ ವಿಭಾಗದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ವೃತ್ತಿಪರ ಪದವಿ: ಹೌದು ಗೆಳೆಯರೆ ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ
ಎಷ್ಟು ವಿದ್ಯಾರ್ಥಿವೇತನ ಸಿಗುತ್ತದೆ (Tata Capital Pank Scholarship).?
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಪ್ರಸ್ತುತ ವರ್ಷದಲ್ಲಿ ಅಧ್ಯಯನ ಮಾಡುತ್ತಿರಬೇಕು ಹಾಗೂ ಕಾಲೇಜು ಅಥವಾ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದಿರಬೇಕು
- ವಿದ್ಯಾರ್ಥಿಗಳು ಇಂದಿನ ಶಿಕ್ಷಣ ವರ್ಷದಲ್ಲಿ ಕನಿಷ್ಠ 60% ಅಂಕ ಪಡೆದಿರಬೇಕು
- ವಿದ್ಯಾರ್ಥಿಗಳ ಪೋಷಕರ ಕುಟುಂಬದ ವಾರ್ಷಿಕ ಆದಾಯ 2.5 ಲಕ್ಷ ರೂಪಾಯಿಗಿಂತ ಕಡಿಮೆ ಹೊಂದಿರಬೇಕಾಗುತ್ತದೆ
ವಿದ್ಯಾರ್ಥಿಗಳಿಗೆ ಸಿಗುವ ಆರ್ಥಿಕ ನೆರವು ಅಥವಾ ಸ್ಕಾಲರ್ಶಿಪ್ ಅಮೌಂಟ್ ಎಷ್ಟು (Tata Capital Pank Scholarship).?
ಪಿಯುಸಿ ವಿದ್ಯಾರ್ಥಿಗಳಿಗೆ ಸಿಗುವ ಸ್ಕಾಲರ್ಶಿಪ್ ಹಣದ ಮೊತ್ತದ ವಿವರ:
- ವಿದ್ಯಾರ್ಥಿಗಳು 60% ರಿಂದ 80% ಅಂಕ ಪಡೆದರೆ ₹10,000/- ವರೆಗೆ ಸ್ಕಾಲರ್ಶಿಪ್ ಸಿಗುತ್ತದೆ
- 81% ರಿಂದ 90% ಅಂಕದವರೆಗೆ ಪಡೆದವರಿಗೆ ₹12,000/- ವರೆಗೆ ಸ್ಕಾಲರ್ಶಿಪ್ ಹಣ ಪಡೆಯಬಹುದು
- 91% ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ₹15,000/- ವರೆಗೆ ಸ್ಕಾಲರ್ಶಿಪ್ ಸಿಗುತ್ತೆ
ಸಾಮಾನ್ಯ ಪದವಿ ಮತ್ತು ಪಾಲಿಟೆಕ್ನಿಕ್, ಡಿಪ್ಲೋಮೋ, ಐಟಿಐ ವಿದ್ಯಾರ್ಥಿಗಳಿಗೆ ಸಿಗುವ ಸ್ಕಾಲರ್ಶಿಪ್ ಹಣದ ಮೊತ್ತದ ವಿವರ:
- ವಿದ್ಯಾರ್ಥಿಗಳು 60% ರಿಂದ 80% ಅಂಕ ಪಡೆದರೆ ₹12,000/- ವರೆಗೆ ಸ್ಕಾಲರ್ಶಿಪ್ ಸಿಗುತ್ತದೆ
- 81% ರಿಂದ 90% ಅಂಕದವರೆಗೆ ಪಡೆದವರಿಗೆ ₹15,000/- ವರೆಗೆ ಸ್ಕಾಲರ್ಶಿಪ್ ಹಣ ಪಡೆಯಬಹುದು
- 91% ಕ್ಕಿಂತ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ₹18,000/- ವರೆಗೆ ಸ್ಕಾಲರ್ಶಿಪ್ ಸಿಗುತ್ತೆ
ವೃತ್ತಿಪರ ವಿದ್ಯಾರ್ಥಿಗಳಿಗೆ ಸಿಗುವ ಸ್ಕಾಲರ್ಶಿಪ್ ಹಣದ ಮೊತ್ತ:
- ವಿದ್ಯಾರ್ಥಿಗಳು 80% ಗಿಂತ ಗರಿಷ್ಠ ಅಂಕ ಪಡೆದರೆ ಅಂತವರಿಗೆ 1 ಲಕ್ಷದವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಹೊಂದಿರುತ್ತಾರೆ
ಅರ್ಜಿ ಸಲ್ಲಿಸುವುದು ಹೇಗೆ (Tata Capital Pank Scholarship).?
ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮೊದಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.buddy4study.com/page/the-tata-capital-pankh-scholarship-programme
ಸ್ನೇಹಿತರ ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 26 ಡಿಸೆಂಬರ್ 2025 ಆಗಿದೆ ಹಾಗಾಗಿ ಆಸಕ್ತಿ ಇರುವವರು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ ಹಾಗೂ ಇನ್ನಷ್ಟು ಹೆಚ್ಚಿನ ಮಾಹಿತಿ ಅಧಿಕೃತ ವೆಬ್ಸೈಟ್ ಮೂಲಕ ಪಡೆದುಕೊಳ್ಳಿ
ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು
Bele Parihara Payment 2025: ಎರಡು ಕಂತಿನ ಬೆಳೆ ಪರಿಹಾರ ರೈತರಿಗೆ ಒಟ್ಟಿಗೆ ಜಮಾ.! ಹಣ ಬೇಕಾದರೆ ಈ ಕೆಲಸ ಮಾಡಿ









