udyogini loan: ಈ ಯೋಜನೆ ಅಡಿಯಲ್ಲಿ ಸಿಗಲಿದೆ 3 ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ! ಶೇಕಡ 50ರಷ್ಟು ಸಬ್ಸಿಡಿ,
ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಿನಿ ಯೋಜನೆಯಡಿಯಲ್ಲಿ ಸ್ವಂತ ಉದ್ಯೋಗ ಪ್ರಾರಂಭಿಸಲು ಬಯಸುವ ಮಹಿಳೆಯರಿಗೆ ಹಾಗೂ ಸ್ವಯಂ ಉದ್ಯೋಗ ಮಾಡಲು ಬಯಸುವಂತಹ ಮಹಿಳೆಯರಿಗೆ ರಾಜ್ಯ ಸರ್ಕಾರ ಕಡೆಯಿಂದ ಈ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸುಮಾರು 3 ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ಸಿಗುತ್ತದೆ ಇದರ ಜೊತೆಗೆ ಸಾಮಾನ್ಯ ವರ್ಗದ ಮಹಿಳೆಯರಿಗೆ ಶೇಕಡ 30ರಷ್ಟು ಸಬ್ಸಿಡಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇಕಡ 50ರಷ್ಟು ಸಬ್ಸಿಡಿ ಯೋಜನೆ ಅಡಿಯಲ್ಲಿ ಸಿಗುತ್ತದೆ ಹಾಗಾಗಿ ನಾವು ಈ ಯೋಜನೆಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ
ರೈಲ್ವೆ ಇಲಾಖೆಯಲ್ಲಿ 32,000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿ 10ನೇ ತರಗತಿ ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ಉದ್ಯೋಗಿನಿ ಯೋಜನೆ (udyogini loan)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಸರಕಾರವು ಮಹಿಳೆಯರಿಗೆ ಸ್ವಂತ ಉದ್ಯೋಗ ಸ್ಥಾಪನೆ ಮಾಡಲು ಹಾಗೂ ಸ್ವಯಂ ಉದ್ಯೋಗ ಮಾಡಲು ಮತ್ತು ಆರ್ಥಿಕವಾಗಿ ಸ್ವತಂತ್ರ ರನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಉದ್ಯೋಗಿನಿ ಯೋಜನೆ ಜಾರಿಗೆ ತಂದಿದೆ ಈ ಯೋಜನೆ ಅಡಿಯಲ್ಲಿ ಸಣ್ಣಪುಟ್ಟ ವ್ಯಾಪಾರ ಮಾಡುವವರಿಗೆ ಮತ್ತು ಸ್ವಂತ ಉದ್ಯೋಗ ಪ್ರಾರಂಭಿಸಲು ಬಯಸುವಂಥವರಿಗೆ ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳ ಮೂಲಕ ವ್ಯಾಪಾರ ಚಟುವಟಿಕೆಗಳು ಹಾಗೂ ಕಿರು ಉದ್ಯಮಗಳನ್ನು ಕೈಗೊಳ್ಳುವ ಮಹಿಳೆಯರಿಗಾಗಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳಿಂದ ಬಡ್ಡಿ ರಹಿತ ಸಾಲವನ್ನು ನೀಡಲಾಗುತ್ತದೆ
ಹೌದು ಸ್ನೇಹಿತರೆ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ಮಹಿಳೆಯರಿಗೆ ಹಾಗೂ ಸ್ವಂತ ಉದ್ಯೋಗ ಮಾಡಲು ಬಯಸುವಂತಹ ಮಹಿಳೆಯರಿಗೆ ವಾಣಿಜ್ಯ ಬ್ಯಾಂಕುಗಳು ಹಾಗೂ ಜಿಲ್ಲಾ ಸಹಕಾರಿ ಬ್ಯಾಂಕುಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಅಡಿಯಲ್ಲಿ ಮಹಿಳೆಯರಿಗೆ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಸಾಲ ಸಿಗುತ್ತದೆ ಮತ್ತು ಈ ಯೋಜನೆಗೆ ಸಂಬಂಧಿಸಿ ಇನ್ನಷ್ಟು ವಿವರವನ್ನು ಕೆಳಗಡೆ ನೀಡಿದ್ದೇವೆ
ಉದ್ಯೋಗಿನಿ ಯೋಜನೆಯ ಪ್ರಯೋಜನಗಳು?
ಈ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಹಾಗೂ ಸಾಮಾನ್ಯ ವರ್ಗದ ಮಹಿಳೆಯರು ಸ್ವಂತ ಉದ್ಯೋಗ ಅಥವಾ ಘಟಕದ ವೆಚ್ಚ ಕನಿಷ್ಠ 1 ಲಕ್ಷದಿಂದ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಸಾಲ ದೊರೆಯುತ್ತದೆ ಮತ್ತು ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇಕಡ 50ರಷ್ಟು ಸಬ್ಸಿಡಿ ರಾಜ್ಯ ಸರ್ಕಾರ ಕಡೆಯಿಂದ ನೀಡಲಾಗುತ್ತದೆ ಅಂದರೆ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಸಾಲ ಪಡೆದರೆ 1,50,000 ಸಾಲ ಮನ್ನಾ ಮಾಡಲಾಗುತ್ತದೆ
ಈ ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸಾಮಾನ್ಯ ವರ್ಗದ ಮಹಿಳೆಯರಿಗೆ ಶೇಕಡ 30ರಷ್ಟು ಸಬ್ಸಿಡಿ ಸಿಗುತ್ತದೆ ಅಂದರೆ ಸುಮಾರು 90 ಸಾವಿರ ವರೆಗೆ ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ಸಿಗುತ್ತದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಅರ್ಜಿದಾರರು ಮಹಿಳೆಯರಾಗಿರಬೇಕು
- ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸಾಲ ಪಡೆಯಲು ಬಯಸುವ ಮಹಿಳೆಯ ಕುಟುಂಬದ ವಾರ್ಷಿಕ ಆದಾಯ 1,50,000 ಗಿಂತ ಕಡಿಮೆ ಇರಬೇಕು
- ಉದ್ಯೋಗಿನಿ ಯೋಜನೆ ಅಡಿಯಲ್ಲಿ ಸಾಲ ಪಡೆಯಲು ಬಯಸುವ ಅರ್ಜಿದಾರ ಮಹಿಳೆಯ ವಯಸ್ಸು ಕನಿಷ್ಠ 18ರಿಂದ 55 ವರ್ಷದ ಒಳಗಿನವರಿರಬೇಕು
- ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು
- ಅರ್ಜಿದಾರರು ಯಾವುದೇ ಹಣಕಾಸು ಸಂಸ್ಥೆಯಲ್ಲಿ ಈ ಹಿಂದೆ ಸಬ್ಸಿಡಿ ಸಾಲವನ್ನು ಪಡೆದಿರಬಾರದು ಹಾಗೂ ಸಾಲವನ್ನು ಡೀಫಾಲ್ಟ್ ಮಾಡಬಾರದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಮಹಿಳೆಯ ಆಧಾರ್ ಕಾರ್ಡ್
- ಘಟಕದ ವೆಚ್ಚ
- ಮಹಿಳೆಯ ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಫೋಟೋಸ್
- ಮೊಬೈಲ್ ನಂಬರ್
- ರೇಷನ್ ಕಾರ್ಡ್
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (udyogini loan)..?
ಸ್ನೇಹಿತರೆ ಉದ್ಯೋಗಿನಿ ಯೋಜನೆ ಅಡಿಯಲ್ಲಿ ನೀವು ಅರ್ಜಿ ಸಲ್ಲಿಸಿ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಬಡ್ಡಿ ರಹಿತ ಸಾಲ ಹಾಗೂ 1,50,000 ಸಬ್ಸಿಡಿ ಪಡೆಯಲು ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ಬಿಸಿನೆಸ್ ಲೋನ್ ಅರ್ಜಿ ಸಲ್ಲಿಸಬೇಕು ಹಾಗಾಗಿ ನೀವು ಈ ಯೋಜನೆ ಅಡಿಯಲ್ಲಿ ಸಾಲ ಪಡೆಯಲು ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
www.kswdc.com
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಹೊಸ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಹಾಗು ಟೆಲಿಗ್ರಾಂ ಗ್ರೂಪ್ಗಳಿಗೆ ಆಗಬಹುದು