Vidyasiri Scholarship: ವಿದ್ಯಾಸಿರಿ ಯೋಜನೆ ಮೂಲಕ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ
ನಮಸ್ಕಾರ ಗೆಳೆಯರೇ ಇದೀಗ ಕರ್ನಾಟಕ ರಾಜ್ಯ ಸರ್ಕಾರ ಒಬಿಸಿ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹15,000 ರಿಂದ ₹20,000 ವರೆಗೆ ವಿದ್ಯಾರ್ಥಿ ವೇತನ ಪಡೆಯಲು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ.
ಹೌದು ಗೆಳೆಯರೆ, ಈ ಒಂದು ಲೇಖನ ಮೂಲಕ ವಿದ್ಯಾಸಿರಿ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು ಹಾಗೂ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ವಿದ್ಯಾಸಿರಿ ಯೋಜನೆ (Vidyasiri Scholarship).?
ಹೌದು ಗೆಳೆಯರೇ ಕರ್ನಾಟಕ ರಾಜ್ಯ ಸರ್ಕಾರ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ 1, 2A, 3A, 3B ಹಾಗೂ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಸಿಖ್ ಮತ್ತು ಪಾರಸಿ ಧರ್ಮಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಹಾಗೂ ಓಬಿಸಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣಕ್ಕೆ ತಗಲುವ ಖರ್ಚು ವೆಚ್ಚಗಳಿಗೆ ಸರಕಾರದಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ವಿದ್ಯಾಸಿರಿ ಯೋಜನೆ ಜಾರಿಗೆ ತಂದಿದೆ
ಈ ಒಂದು ಯೋಜನೆ ಮೂಲಕ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,500 ವರೆಗೆ ವರ್ಷಕ್ಕೆ ಗರಿಷ್ಠ 15000 ಯಿಂದ ಕೆಲ ವಿದ್ಯಾರ್ಥಿಗಳಿಗೆ 20,000 ವರೆಗೆ ಸ್ಕಾಲರ್ಶಿಪ್ ಹಣ ಪಡೆಯಲು ಅವಕಾಶ ಇರುತ್ತದೆ ಹಾಗಾಗಿ ನಿನ್ನಷ್ಟು ಹೆಚ್ಚಿನ ಮಾಹಿತಿಗಾಗಿ ರಾಜ್ಯ ಸರಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಿ
ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಹಣ ಸಿಗುತ್ತೆ (Vidyasiri Scholarship).?
ಸ್ನೇಹಿತರೆ ರಾಜ್ಯ ಸರ್ಕಾರದಿಂದ ಈ ಒಂದು ಸ್ಕಾಲರ್ಶಿಪ್ ಯೋಜನೆ ಮೂಲಕ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,500 ಅಂದರೆ ವರ್ಷಕ್ಕೆ 15 ಸಾವಿರ ಮಾತ್ರ ಈ ಒಂದು ಯೋಜನೆ ಮೂಲಕ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದು.
ಇತ್ತೀಚಿಗೆ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಒಂದು ಯೋಜನೆ ಮೂಲಕ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 2000 ಅಂದರೆ ವರ್ಷಕ್ಕೆ ಗರಿಷ್ಠ 20,000 ವರೆಗೆ ಸ್ಕಾಲರ್ಶಿಪ್ ನೀಡಲು ನಿರ್ಧಾರ ಮಾಡಲಾಗಿದೆ ಹಾಗಾಗಿ ಇದು ವಿದ್ಯಾರ್ಥಿಗಳಿಗೆ ಖುಷಿ ಕೊಡುವ ವಿಷಯವನ್ನು ಹೇಳಬಹುದು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Vidyasiri Scholarship).?
- ವಿದ್ಯಾರ್ಥಿಗಳು ಕಡ್ಡಾಯವಾಗಿ ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
- ವಿದ್ಯಾರ್ಥಿಗಳು ಪ್ರವರ್ಗ 1, 2A, 3A, 3B ಹಾಗೂ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಸಿಖ್ ಮತ್ತು ಪಾರಸಿ ಧರ್ಮಕ್ಕೆ ಸೇರಿದ ವಿದ್ಯಾರ್ಥಿಗಳು ಮತ್ತು ಒಬಿಸಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಇದೆ
- ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಪೋಷಕರ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕಾಗುತ್ತದೆ ಮತ್ತು ಮೈನಾರಿಟಿ ವಿದ್ಯಾರ್ಥಿಗಳ ಪೋಷಕರ ಆದಾಯ 2 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕಾಗುತ್ತದೆ
- ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಜಿದಾರ ವಿದ್ಯಾರ್ಥಿಗಳು ಕನಿಷ್ಠ 40% ಗಿಂತ ಹೆಚ್ಚಿನ ಅಂಕ ಪಡೆದುಕೊಂಡರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
ವಿಶೇಷ ಸೂಚನೆ: ವಿದ್ಯಾರ್ಥಿಗಳು ಈ ಒಂದು ಯೋಜನೆಯ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಕೆಳಗಡೆ ನೀಡಿದ ಹೆಲ್ಪ್ ಲೈನ್ ನಂಬರ್ ಗೆ ಅಥವಾ ಎಸ್ ಎಸ್ ಪಿ ಹೆಲ್ಪ್ ಲೈನ್ ನಂಬರ್ ಗೆ ಕರೆ ಮಾಡಿ ಮಾಹಿತಿ ತಿಳಿದುಕೊಳ್ಳಬಹುದು ಅಥವಾ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ
- helpline Number: 8050770004
- SSP Helpline Number: 1902
ವಿದ್ಯಾಸಿರಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (Vidyasiri Scholarship).?
ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಎಸ್ ಎಸ್ ಪಿ ಆನ್ಲೈನ್ ಪೋರ್ಟಲ್ ಮೂಲಕ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್
ssp.postmatric.karnataka.gov.in
ಮೇಲೆ ಕೊಟ್ಟಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು
Today Gold Rate On 24 December 2025: ಇಂದಿನ ಚಿನ್ನದ ಬೆಲೆ ಎಷ್ಟು.?









