Vidyasiri Scholarship Application – ವಿದ್ಯಾಸಿರಿ ವಿದ್ಯಾರ್ಥಿವೇತನ ಅರ್ಜಿ ಮತ್ತು ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಆಹ್ವಾನ
ನಮಸ್ಕಾರ ಗೆಳೆಯರೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಇದೀಗ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಡೆಯುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಅರ್ಜಿ ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ (Vidyasiri Scholarship Application)..?
ಹೌದು ಗೆಳೆಯರೇ, ನಮ್ಮ ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಊಟ ಮತ್ತು ವಸತಿ ಖರ್ಚು ವೆಚ್ಚಗಳನ್ನು ಸರಿದೂಗಿಸಲು ರಾಜ್ಯ ಸರ್ಕಾರದಿಂದ ವಿದ್ಯಾಸಿರಿ ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ. ಆದ್ದರಿಂದ ಇದೀಗ ಹತ್ತನೇ ತರಗತಿ ನಂತರ ಅಥವಾ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

ಹೌದು ಸ್ನೇಹಿತರೆ ಹತ್ತನೇ ತರಗತಿ ನಂತರ ಬರುವಂತ ಯಾವುದೇ ಕೋರ್ಸ್ ಅಥವಾ ಪದವಿ ಅಥವಾ ಇತರೆ ಕೋರ್ಸ್ ಗಳಲ್ಲಿ ವಿದ್ಯಾಭ್ಯಾಸ ಅಥವಾ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಅಲೆಮಾರಿ/ಅರೆ ಅಲೆಮಾರಿ, ಪ್ರವರ್ಗ – 1 ವಿದ್ಯಾರ್ಥಿಗಳಿಂದ 2025 ಮತ್ತು 26 ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಹಾಗೂ ಅರ್ಜಿ ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಇದೀಗ ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ (Vidyasiri Scholarship Application Last Date).?
ಸ್ನೇಹಿತರೆ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಹಾಗೂ ಶುಲ್ಕ ಮರುಪಾವತಿ ಯೋಜನೆಯಡಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲು ಬಯಸುತ್ತಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 31 ಅಕ್ಟೋಬರ್ 2025 ಕೊನೆಯ ದಿನಾಂಕವಾಗಿದೆ ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ
ಯಾರು ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು (Vidyasiri Scholarship Application Eligibility)..?
- ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
- ಪ್ರಸ್ತುತ ವರ್ಷದಲ್ಲಿ ಪಿಯುಸಿ, ಡಿಪ್ಲೋಮೋ, ITI, ಪಾಲಿಟೆಕ್ನಿಕ್, ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು
- ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಅಲೆಮಾರಿ/ಅರೆ ಅಲೆಮಾರಿ, ಪ್ರವರ್ಗ – 1 ಕುಟುಂಬಗಳಿಗೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು
- ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 2.5 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
ಅರ್ಜಿ ಸಲ್ಲಿಸುವುದು ಹೇಗೆ (How To Apply for Vidyasiri Scholarship 2025).?
ಸ್ನೇಹಿತರೆ ಅರ್ಹ ವಿದ್ಯಾರ್ಥಿಗಳು ದಿನಾಂಕ 31 ಅಕ್ಟೋಬರ್ 2025 ರ ಒಳಗಡೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಎಸ್ ಎಸ್ ಪಿ ಆನ್ಲೈನ್ ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡುತ್ತೇವೆ ಅಥವಾ ನೀವು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಸಹಾಯವಾಣಿ ಸಂಖ್ಯೆ: 8050770005
- BCWD ಅಧಿಕೃತ ವೆಬ್ಸೈಟ್ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಆಸಕ್ತಿ ಇದ್ದರೆ ನೀವು
ನಮ್ಮ ವಾಟ್ಸಪ್ ಚಾನಲ್ ಗಳಿಗೆ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಭೇಟಿ ನೀಡಬಹುದು
BPL Ration Card: BPL ರೇಷನ್ ಕಾರ್ಡ್ ಹೊಂದಿದವರಿಗೆ ಮೋದಿ ಸರ್ಕಾರ ಕಡೆಯಿಂದ ಬಂಪರ್ ಗಿಫ್ಟ್.!